Chitradurga news |nammajana.com|4-8-2024
ನಮ್ಮಜನ.ಕಾಂ, ಚಿತ್ರದುರ್ಗ: ವಾಲ್ಮೀಕಿ ಅಭಿವೃದ್ದಿ ನಿಗಮದ 187 ಕೋಟಿ ರೂ.ಗಳ ಭ್ರಷ್ಠಾಚಾರ, ಮುಡಾ ನಿವೇಶನ (Mysore Chalo) ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ದ ಬಿಜೆಪಿ. ಬೆಂಗಳೂರಿನಿಂದ ಮೈಸೂರು ಚಲೋ ಪಾದಯಾತ್ರೆಗೆ ಚಿತ್ರದುರ್ಗದ ಒನಕೆ ಓಬವ್ವ ವೃತ್ತದಿಂದ ಬಿಜೆಪಿ ಮುಖಂಡರು ಹಾಗೂ ಕಾರ್ಯಕತರು ಭಾನುವಾರ ತೆರಳಿದರು.
ಬಿಜೆಪಿ. ಜಿಲ್ಲಾಧ್ಯಕ್ಷ ಎ.ಮುರಳಿ ಮಾತನಾಡಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಅಭಿವೃದ್ದಿಗೆ ಬಳಸಬೇಕಾಗಿರುವ ಹಣವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ಯ ಉದ್ದೇಶಗಳಿಗೆ (Mysore Chalo) ಬಳಸಿರುವುದಲ್ಲದೆ ವಾಲ್ಮೀಕಿ ಅಭಿವೃದ್ದಿ ನಿಗಮದ 187 ಕೋಟಿ ರೂ.ಗಳನ್ನು ಅಕ್ರಮವಾಗಿ ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡು ಮುಡಾ ನಿವೇಶನ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ. ಪಾದಯಾತ್ರೆ ಮುಗಿಯುವುದರೊಳಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ರಾಜ್ಯದ ಜನ ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದರು.
ಜಿಲ್ಲೆಯಿಂದ ಒಂದು ಸಾವಿರಕ್ಕೂ ಹೆಚ್ಚು ಪದಾಧಿಕಾರಿಗಳು, (Mysore Chalo) ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದೇವೆ. ಆರು ತಾಲ್ಲೂಕುಗಳಿಂದ ಕಾರ್ಯಕರ್ತರು ಪಾದಯಾತ್ರೆಗೆ ಹೊರಟಿದ್ದು, ನಾವುಗಳು ಬಿಡದಿಯಲ್ಲಿ ಸೇರಿಕೊಳ್ಳುತ್ತೇವೆ ಎಂದರು.
ವಿಧಾನಸಭೆ ಅಧಿವೇಶನದಲ್ಲಿ ಮುಡಾ ಹಗರಣದ ಬಗ್ಗೆ ಚರ್ಚಿಸಲು ಸ್ಪೀಕರ್ ಯು.ಟಿ.ಖಾದರ್ ಅವಕಾಶ ಕೊಡಲಿಲ್ಲ. ದಲಿತರು, ರೈತರಿಗೆ ದ್ರೋಹವೆಸಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಭಂಡತನ ತೋರುವ ಬದಲು ಅಧಿಕಾರದಿಂದ ಕೆಳಗಿಳಿಯುವತನಕ ಹೋರಾಟ ನಿಲ್ಲುವುದಿಲ್ಲ. ವಿಧಾನಸಭೆ ಚುನಾವಣೆ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ (Mysore Chalo) ಭರವಸೆಗಳನ್ನು ಈಡೇರಿಸಲು ಆಗದೆ ಬೇರೆ ಬೇರೆ ಹಣ ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ಮತದಾರರು ಸಹಿಸುವುದಿಲ್ಲ ಎಂದು ಹೇಳಿದರು.
ಜಿ.ಟಿ.ಸುರೇಶ್‍ಸಿದ್ದಾಪುರ, ಸಂಪತ್‍ಕುಮಾರ್, ಖಜಾಂಚಿ ಮಾಧುರಿ ಗಿರೀಶ್, ನಗರ ಮಂಡಲ ಅಧ್ಯಕ್ಷ ನವೀನ್ ಚಾಲುಕ್ಯ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ಶರತ್ ಪಾಟೀಲ್, ಕಿರಣ್, ಚಂದ್ರಿಕಾ ಲೋಕನಾಥ್, ಕವನ, ಕಾಂಚನ, ಸುಮ, ವೀಣಾ, ಶೀಲಾ, ಸರಸ್ವತಿ, ಮಮತ, ಪೂರ್ಣಿಮ, ರಾಜೇಶ್ವರಿ, ಶಾಂತಮ್ಮ, ರಜಿನಿ, ಬಸಮ್ಮ, ಭಾರತಿ, ಶ್ರೀನಿವಾಸ್, ಪ್ರವೀಣ್, ಶಂಭು, ವೆಂಕಟೇಶ್, ನಾಗರಾಜ್, ರಾಘವೇಂದ್ರ, ಯಶವಂತ್, ಪ್ರವೀಣ್, ಲೋಕೇಶ್, ಪ್ರಕಾಶ್, ಸಾರಂಗ ಮಠ ಪ್ರಸಾದ್, ಬಾಬು, ಕುಮಾರ್ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.