Chitradurga news|nammajana.com|17-8-2024
ನಮ್ಮಜನ.ಕಾಂ, ಚಿತ್ರದುರ್ಗ: ಮಹತ್ವದ ಬೆಳವಣಿಗೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಅಕ್ರಮ ನಿವೇಶನ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು (Congress protest) ಪ್ರಾಸಿಕ್ಯೂಶನ್‍ಗೆ ಅನುಮತಿ ನೀಡಿರುವ ವಿರುದ್ಧ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯಪಾಲರ ವಿರುದ್ದ “ಗೋ ಬ್ಯಾಕ್” ರಾಜ್ಯಪಾಲ ಎಂದು ರಾಜ್ಯಪಾಲರ ವಿರುದ್ಧ ಅಕ್ರೋಶ ಹೊರ ಹಾಕಿದರು.
ಜಿಲ್ಲಾಧಿಕಾರಿ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಲು ಯತ್ನಿಸಿದಾಗ ಪೋಲಿಸರು ತಡೆಯಲು ಮುಂದಾದರು. ಕಾಂಗ್ರೆಸ್ ಮುಖಂಡರು ಮರಳಿ ಮತ್ತೊಂದು ಟೈರ್ ತಂದು ಹಚ್ಚಲು ಯತ್ನಿಸಿದರು ಸಹ ಪೋಲಿಸರು ತಡೆದ ಘಟನೆ ನಡೆಯಿತು.ಕಾಂಗ್ರೆಸ್ ಮುಖಂಡರು ಪ್ರತಿಭಟನೆಗೆ ಅವಕಾಶ ನೀಡುತ್ತಿಲ್ಲ, ನೀವು ಏಕೆ ಹತ್ತಿಕ್ಕುತ್ತಿರಿ ಎಂದು ಪೋಲಿಸರ ವಿರುದ್ದ ಅಕ್ರೋಶ ಹೊರ ಹಾಕಿದರು.
ಹಿಂದುಳಿದ ವರ್ಗಗಳ ನಾಯಕ ಸಿದ್ದರಾಮಯ್ಯ ಅವರನ್ನು ತುಳಿಯಲು ಕೇಂದ್ರದ ಎನ್ ಡಿಎ ಸರ್ಕಾರ ಯತ್ನಿಸುತ್ತಿದೆ. (Congress protest) ರಾಜ್ಯದಲ್ಲಿ ರಾಜ ಭವನವನ್ನು ರಾಜ್ಯಪಾಲರು ಬಿಜೆಪಿ ಕಚೇರಿ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದರು.
ಗವರ್ನರ್ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಭ್ರಷ್ಟ ಬಿಜೆಪಿ ಸರ್ಕಾರ ರಾಜ್ಯ ಸರ್ಕಾರ ವಿರುದ್ದ ನರೇಂದ್ರ ಮೋದಿ, ಅಮಿತ್ ಷಾ (Congress protest) ರಾಜ್ಯಪಾಲರನ್ನು ಕೈಗೊಂಬೆ ಮಾಡಿಕೊಂಡಿದ್ದಾರೆ.
ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಬಿ.ಟಿ.ಜಗದೀಶ್, ಸಿಟಿ ಕೃಷ್ಣಮೂರ್ತಿ ಸೇರಿ ಅನೇಕ ಮುಖಂಡರು ಭಾಗವಹಿಸಿದ್ದರು.
ಇದನ್ನೂ ಓದಿ: ಚಳ್ಳಕೆರೆ | ಸಿಡಿಲು ಬಡಿದು 106 ಕುರಿಗಳು ಸಾವು |106 Death of a sheep
ಸಿಎಂ ಗೆ ನೀಡಿರುವ ನೋಟಿಸ್ ನಲ್ಲಿ ಏನಿದೆ.
ಸಿಎಂ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988 ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಮಿತಿ ಸೆಕ್ಷನ್ 218 ರಡಿ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿದ್ದಾರೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್ (Congress protest) ಅವರು ಹೊರಡಿಸಿರುವ ನೋಟಿಸ್‍ನಲ್ಲಿ ತಿಳಿಸಿದ್ದಾರೆ.
ಇದೀಗ ರಾಜ್ಯಪಾಲ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರು ಸಿಎಂ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡಿರುವುದರಿಂದ ಸಿದ್ದರಾಮಯ್ಯಗೆ ಭಾರಿ ಕಾನೂನಿನ ಸಂಕಷ್ಟ ಎದುರಾಗಿದೆ.ಇದರ ಬೆನ್ನಲ್ಲೇ ಮುಖ್ಯಮಂತ್ರಿಗಳ ಅಧಿಕೃತ (Congress protest) ನಿವಾಸ ಕಾವೇರಿಯಲ್ಲಿ ಮುಂದಿನ ಕಾನೂನು ಹೊರಾಟ ನಡೆಸುವ ಕುರಿತು ತಮ್ಮ ಸಂಪುಟದ ಸಹದ್ಯೋಗಿಗಳು ಹಾಗೂ ಕಾನೂನು ಸಲಹೆಗಾರ ಪೊನ್ನಣ್ಣ ಸೇರಿದಂತೆ ಮತ್ತಿತರರ ಜೊತೆ ಸಿದ್ದರಾಮಯ್ಯನವರು ಸಭೆ ನಡೆಸಿದ್ದಾರೆ.