Chitradurga news|nammajana.com|18-8-2024
ನಮ್ಮಜನ.ಕಾಂ, ಚಿತ್ರದುರ್ಗ: ಕರ್ನಾಟಕದಲ್ಲಿ ಮತ್ತೆ ಮಳೆಯ ಪ್ರಮಾಣ ಹೆಚ್ಚುತ್ತಿದೆ. ರಾಜ್ಯದ 19 ಜಿಲ್ಲೆಗಳಲ್ಲಿ ಭಾರಿ (Chitradurga Rain) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಶ್ಲೆಷ ಆರ್ಭಟಕ್ಕೆ ಭಾರೀ ಪ್ರಮಾಣದ ಹಾನಿಯಾಗಿದೆ. ಮುಂಗಾರು ಮತ್ತೆ ಚುರುಕಾಗಿದ್ದು, ರಾಜ್ಯದಲ್ಲಿ ಮತ್ತೆ ಮಳೆ (Chitradurga Rain) ಜೋರಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಮುಂದಿನ ಒಂದು ವಾರ ಭರ್ಜರಿ (Chitradurga Rain) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಇನ್ನೂ ಒಂದು ವಾರದ ಮಳೆಗೆ ಕೆರೆ ಕಟ್ಟೆಗಳು ತಂಬುವ ಸಾಧ್ಯತೆ ಇದೆ.
ಭಾರಿ ಮಳೆಯಾಗುವ ಜಿಲ್ಲೆಗಳ ಪಟ್ಟಿ (Chitradurga Rain)
ಚಿತ್ರದುರ್ಗ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ವಿಜಯನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ, ಶಿವಮೊಗ್ಗ, ಚಿತ್ರದುರ್ಗ, ರಾಮನಗರ (Chitradurga Rain) ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.