Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಿತ್ರದುರ್ಗದಲ್ಲಿ ನೂತನ ಮೈಲಾರಲಿಂಗೇಶ್ವರ ದೇವಸ್ಥಾನ ಉದ್ಘಾಟನೆ | Mylaralingeshwar
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಚಿತ್ರದುರ್ಗದಲ್ಲಿ ನೂತನ ಮೈಲಾರಲಿಂಗೇಶ್ವರ ದೇವಸ್ಥಾನ ಉದ್ಘಾಟನೆ | Mylaralingeshwar
ಇಂದಿನ ಸುದ್ದಿ

ಚಿತ್ರದುರ್ಗದಲ್ಲಿ ನೂತನ ಮೈಲಾರಲಿಂಗೇಶ್ವರ ದೇವಸ್ಥಾನ ಉದ್ಘಾಟನೆ | Mylaralingeshwar

Editor Nammajana
Last updated: 1 September 2024 17:16
By Editor Nammajana 2 Min Read
Share
SHARE

Chitradurga news | nammajana.com | 1-9-2024

ನಮ್ಮಜನ.ಕಾಂ, ಚಿತ್ರದುರ್ಗ: ಮೈಲಾರ ಲಿಂಗೇಶ್ವರಸ್ವಾಮಿ ಕೇವಲ ಕರ್ನಾಟಕದಲ್ಲಷ್ಟೆ ಅಲ್ಲ. ದಕ್ಷಿಣ ಭಾರತದ ಹಲವು (Mylaralingeshwar)ಜಿಲ್ಲೆಗಳಲ್ಲಿ ಪ್ರಸಿದ್ದಿ ಪಡೆದಿದೆ ಎಂದು ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಸ್ವಾಮೀಜಿ ಗುಣಗಾನ ಮಾಡಿದರು.

ಮೈಲಾರ ಲಿಂಗೇಶ್ವರ ದೇವಸ್ಥಾನ ಜೀರ್ಣೋದ್ದಾರ ಅಭಿವೃದ್ದಿ ಸಮಿತಿಯಿಂದ ಬುರುಜಿನಹಟ್ಟಿ ಉಪ್ಪುನೀರು ಬಾವಿ ರಸ್ತೆಯಲ್ಲಿ ನಿರ್ಮಾಣವಾಗಿರುವ ಮೈಲಾರ ಲಿಂಗೇಶ್ವರ ಸ್ವಾಮಿ ಗಂಗಮಾಳಮ್ಮ ದೇವಿಯ ದೇವಸ್ಥಾನ ಹಾಗೂ ಸಮುದಾಯ ಭವನ ಉದ್ಘಾಟಿಸಿ ಆಶೀರ್ವಚನ ನೀಡಿದರು.

ಮೈಲಾರ ಲಿಂಗೇಶ್ವರಸ್ವಾಮಿ ದೇವಸ್ಥಾನ ಸುಂದರವಾಗಿ ನಿರ್ಮಾಣವಾಗಿರುವುದರ ಹಿಂದೆ ನಿಶಾನಿ ಕುಟುಂಬದವರ ಪರಿಶ್ರಮವಿದೆ. ಮೈಲಾರ ಕಾರ್ಣಿಕ ನಾಡಿನಾದ್ಯಂತ ಹೆಸರುವಾಸಿ. ದೋಣಿ ಸೇವೆಯಲ್ಲಿ ನಮ್ಮವರ ಪಾತ್ರ ದೊಡ್ಡದು ಎಂದು ಹೇಳಿದರು.

ಗೋವಿಂದ ಕಾರಜೋಳರವರು ಚಿತ್ರದುರ್ಗ ಕ್ಷೇತ್ರದಿಂದ (Mylaralingeshwar) ಪಾರ್ಲಿಮೆಂಟ್ ಚುನಾವಣೆಗೆ ನಿಂತು ಗೆಲ್ಲುತ್ತಾರೆಂದು ಯಾರು ನಿರೀಕ್ಷಿಸಿರಲಿಲ್ಲ. ಬಿ.ಎಸ್.ಯಡಿಯೂರಪ್ಪನವರ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಅನೇಕ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಚಿತ್ರದುರ್ಗದಲ್ಲಿ ಮಾದಾರ ಚನ್ನಯ್ಯ ಮಠ ತಲೆ ಎತ್ತಲು ಸಂಸದರು ಕಾರಣ ಎಂದು ಸ್ಮರಿಸಿದರು.

ನಗರಸಭೆ ಅಧ್ಯಕ್ಷ ಸ್ಥಾನ ಹುಟ್ಟಿಕೊಂಡಿದ್ದೆ ಬುರುಜನಹಟ್ಟಿಯಿಂದ ಎಲ್ಲಾ ಪಕ್ಷಗಳು ಇಲ್ಲಿವೆ. ಈ ಭಾಗದಲ್ಲಿ ಮನೆ ಕಟ್ಟಿಕೊಂಡಿರುವವರಿಗೆ ಇ.ಸ್ವತ್ತಾಗಲಿ, ಖಾತೆ ಹೀಗೆ (Mylaralingeshwar) ಯಾವುದೇ ಮೂಲಭೂತ ಸೌಲಭ್ಯಗಳು ಸಿಗುತ್ತಿಲ್ಲ. ಪುರಾತತ್ವ ಇಲಾಖೆಯಿಂದ ಅನೇಕ ಸಮಸ್ಯೆಗಳಿವೆ.

ಹಾಗಾಗಿ ಕೇಂದ್ರ ಸರ್ಕಾರದಲ್ಲಿ ಮಾತನಾಡಿ ಬುರುಜನಹಟ್ಟಿ ನಿವಾಸಿಗಳಿಗೆ ಸೌಲಭ್ಯ ದೊರಕಿಸಿಕೊಡುವಂತೆ ಸಂಸದ ಗೋವಿಂದ ಕಾರಜೋಳರವರಲ್ಲಿ ಸ್ವಾಮೀಜಿ ಮನವಿ ಮಾಡಿದರು.

ದೇವಸ್ಥಾನದ ಸಂಸ್ಥಾಪಕರಾದ ದಿ.ನಿಶಾನಿ ಲಕ್ಷ್ಮಮ್ಮ, ದಿ.ನಿಶಾನಿ ಮಲ್ಲಪ್ಪ ಇವರುಗಳ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದ ಸಂಸದ ಗೋವಿಂದ ಕಾರಜೋಳರವರು ಪುರಾತತ್ವ ಇಲಾಖೆಯ ನಿಯಮವೇನಿದೆ ಎನ್ನುವುದನ್ನು (Mylaralingeshwar) ನೋಡಿಕೊಂಡು ಬುರುಜನಹಟ್ಟಿ ನಿವಾಸಿಗಳ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ.

ಇಲ್ಲಿಯವರೆಗೂ ಏನೇನು ದಾಖಲೆಗಳನ್ನು ಸಲ್ಲಿಸಿ ಪತ್ರ ವ್ಯವಹರಿಸಿದ್ದೀರಿ ಎನ್ನುವ ಮಾಹಿತಿ ಕೊಡಿ. ಮೈಲಾರಲಿಂಗೇಶ್ವರಸ್ವಾಮಿ ಗಂಗಮಾಳಮ್ಮ ದೇವಸ್ಥಾನ ಹಾಗೂ ಸಮುದಾಯ ಭವನ ಭವ್ಯವಾಗಿ ನಿರ್ಮಾಣವಾಗಿರುವುದು ಇಲ್ಲಿನ ನಿವಾಸಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ: ಕಾಟಪ್ಪನಹಟ್ಟಿ ಗೊಲ್ಲರಹಟ್ಟಿ ಶ್ರೀಕೃಷ್ಣ ಜಯಂತಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ‌ | Sri Krishna Jayanti

ದೇವಸ್ಥಾನ ಕಾರ್ಯಕಾರಿ ಸಮಿತಿ ಅಧ್ಯಕ್ಷ ಜಿ.ಸಿ.ಸುರೇಶ್‍ಬಾಬು, ಪ್ರಧಾನ ಕಾರ್ಯದರ್ಶಿ ಎಂ.ನಿಶಾನಿ ಜಯಣ್ಣ, ಗೌರವಾಧ್ಯಕ್ಷ ಎಸ್.ಕೃಷ್ಣಮೂರ್ತಿ, ಉಪಾಧ್ಯಕ್ಷ ವಿಜಯಕುಮಾರ್ ಪಿ.ಎಸ್. ನಗರಸಭೆ ಅಧ್ಯಕ್ಷೆ ಸುಮಿತಾ ಈರುಳ್ಳಿರಘು, ಸದಸ್ಯೆ ಪಿ.ಕೆ.ಮೀನಾಕ್ಷಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಶಿಕಲಾ ಕಂದಿಕೆರೆ ಸುರೇಶ್‍ಬಾಬು ವೇದಿಕೆಯಲ್ಲಿದ್ದರು.
ನಿರ್ದೇಶಕರುಗಳಾದ ಎಂ.ಮಲ್ಲಿಕಾರ್ಜುನ್, ಚಂದ್ರಪ್ಪ, ಶಿವಕುಮಾರ್ ಪಿ.ಎಲ್. ನಿಶಾನಿ ಧನುಷ್, ಬಿ.ಎಂ.ನಾಗರಾಜ್‍ಬೇದ್ರೆ, ಉದಯರವಿ ಟಿ. ಕೆ.ಗೋಪಿನಾಥ್, ನಿಶಾನಿ ಮಾಲತೇಶ್, ಕುರುಬ ಸಮಾಜದ ಮುಖಂಡರುಗಳಾದ ಫೈಲ್ವಾನ್ ತಿಪ್ಪೇಸ್ವಾಮಿ, ಡಿ.ಕೆ.ಲೋಕೇಶಪ್ಪ ಸೇರಿದಂತೆ ಬುರುಜನಹಟ್ಟಿಯ ಮುಖಂಡರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:BurujanahattiChitradurgaChitradurga NewsKannada Newskannada suddiMadara Channaiah ShriMylaralingeshwarNammajana.comNew Templeಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂನೂತನ ದೇವಸ್ಥಾನಬುರುಜನಹಟ್ಟಿಮಾದಾರ ಚನ್ನಯ್ಯ ಶ್ರೀಮೈಲಾರಲಿಂಗೇಶ್ವರ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಕಾಟಪ್ಪನಹಟ್ಟಿ ಗೊಲ್ಲರಹಟ್ಟಿ ಶ್ರೀಕೃಷ್ಣ ಜಯಂತಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ‌ | Sri Krishna Jayanti
Next Article Today Dina Bhavishya: ಇಂದಿನ ರಾಶಿ ಭವಿಷ್ಯ, ಯಾವ ರಾಶಿ ರಾಜಯೋಗ?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?