Chitradurga news | nammajana.com | 3-9-2024
ನಮ್ಮಜನ.ಕಾಂ, ಚಿತ್ರದುರ್ಗ: ತಾಂತ್ರಿಕ ಸಮಸ್ಯೆಯಿಂದಾಗಿ ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲ. ಇನ್ನು 5 ದಿನಗಳಲ್ಲಿ ಜುಲೈ ಹಾಗೂ ಆಗಸ್ಟ್ ತಿಂಗಳ ಹಣ (Lakshmi Hebbalkar) ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮಿಹೆಬ್ಬಾಳ್ಳರ್ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಈವರೆಗೆ 11 ತಿಂಗಳ ಹಣ ಗೃಹಲಕ್ಷ್ಮಿ ಯೋಜನೆ ಯಜಮಾನಿಯರ ಖಾತೆಗೆ ಜಮಾ ಆಗಿದೆ. ಒಂದು ವರ್ಷದಲ್ಲಿ ಈ ಯೋಜನೆಗಾಗಿ 26.260 (Lakshmi Hebbalkar) ಕೋಟಿ ರೂ. ವ್ಯಯಿಸಲಾಗಿದೆ. ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಒಂದು ವರ್ಷ ಪೂರೈಸಿದೆ.
ಇದನ್ನೂ ಓದಿ: ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ | School
ಮಹಿಳೆಯರು ಯೋಜನೆ ಬಗ್ಗೆ ಪರಿಣಾಮಕಾರಿಯಾಗಿ ರೀಲ್ಸ್ ಮಾಡಿ ಬಹುಮಾನ ಗೆಲ್ಲಬೇಕು. ಗೃಹಲಕ್ಷ್ಮಿ ಯೋಜನೆಯ ಹಣ, (Lakshmi Hebbalkar) ದೇಶದ ಸಣ್ಣ ಪುಟ್ಟ ರಾಜ್ಯಗಳ ವಾರ್ಷಿಕ ಆಯವ್ಯಯಕ್ಕೆ ಸಮನಾಗಿದೆ ಎಂದರು.