Chitradurga news|nammajana.com|15-9-2024
ನಮ್ಮಜನ.ಕಾಂ, ಹೊಳಲ್ಕೆರೆ: ಹೈಟೆಕ್ ಆಸ್ಪತ್ರೆ ಕಟ್ಟಿಸಲು ಎರಡು ಎಕರೆ ಭೂಮಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ (Hospital) ಸಲ್ಲಿಸಿದ್ದೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.
ತಾಲ್ಲೂಕಿನ ಹಿರೇಎಮ್ಮಿಗನೂರು ಗ್ರಾಮದಲ್ಲಿ 60 ಲಕ್ಷ ರೂ.ವೆಚ್ಚದಲ್ಲಿ ನೂತನ ಉಪ ಆರೋಗ್ಯ ಕೇಂದ್ರ ನಿರ್ಮಾಣ (Hospital) ಕಾಮಗಾರಿಗೆ ಶನಿವಾರ ಭೂಮಿ ಪೂಜೆ ಸಲ್ಲಿಸಿ ನಂತರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂರು ನೂತನ ಕೊಠಡಿಗಳನ್ನು ಉದ್ಗಾಟಿಸಿ ಮಾತನಾಡಿದರು.

ಈ ಭಾಗದಲ್ಲಿ ಪಬ್ಲಿಕ್ ಶಾಲೆಯನ್ನು ಕಟ್ಟಿದರೆ ಸುತ್ತಮುತ್ತಲಿನ ಹತ್ತಾರು ಹಳ್ಳಿಯ ಮಕ್ಕಳಿಗೆ ಅನುಕೂಲವಾಗುತ್ತದೆ. ಎಲ್.ಕೆ.ಜಿ.ಯಿಂದ ಹಿಡಿದು ಪಿ.ಯು.ಸಿ.ವರೆಗೆ ಶಿಕ್ಷಣವನ್ನು ಪಡೆದು ಬಡ ಮಕ್ಕಳು ಸಹ ಇಂಜಿನಿಯರ್ ಡಾಕ್ಟರ್‍ಗಳಾಗಬಹುದು.
ಕಾಶಿಪುರದಲ್ಲಿ ಈಗಾಗಲೆ ಪಬ್ಬಿಕ್ ಶಾಲೆಯನ್ನು ಕಟ್ಟಿದ್ದು, ಸಾವಿರಾರು ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಒಂದೆ ಕಟ್ಟಡದಲ್ಲಿ 45 ಕೊಠಡಿಗಳನ್ನು ನಿರ್ಮಿಸಲಾಗಿದೆ. ಸರ್ಕಾರಿ ಶಾಲೆಯ ಮಕ್ಕಳಿಗೆ ಊಟ, ಬಟ್ಟೆ, ಪುಸ್ತಕ, ಕಂಪ್ಯೂಟರ್, ಶೂ.ಗಳನ್ನು ನೀಡುತ್ತಿದೆ. ಹೊಳಲ್ಕೆರೆ ಪಟ್ಟಣದ ಎಂ.ಎಂ. ಪ್ರೌಢಶಾಲೆಯಲ್ಲಿ ಕೇವಲ ಇನ್ನೂರು (Hospital) ಮಕ್ಕಳಿದ್ದರು. ಅಲ್ಲಿಯೂ ಪಬ್ಲಿಕ್ ಶಾಲೆ ಕಟ್ಟಿದ್ದು, ಸಾವಿರಕ್ಕೂ ಹೆಚ್ಚು ಮಕ್ಕಳು ದಾಖಲಾಗಿದ್ದಾರೆಂದು ಹೇಳಿದರು.
ಕ್ಷೇತ್ರದಲ್ಲಿನ ಸರ್ಕಾರಿ ಶಾಲೆಯ ಬಡ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಬಾರದೆನ್ನುವ ಕಾರಣಕ್ಕಾಗಿ ಬಸ್‍ಗಳ ವ್ಯವಸ್ಥೆ ಕಲ್ಪಿಸಿದ್ದೇನೆ. ಸ್ವಂತ ಖರ್ಚಿನಿಂದ ಬಸ್‍ಗೆ ಡೀಸೆಲ್, ಚಾಲಕ, ಕಂಡಕ್ಟರ್‍ಗೆ ಸಂಬಳ ಕೊಡುತ್ತಿದ್ದೇನೆ.
ರಾಜ್ಯದಲ್ಲಿ ಯಾವ ಶಾಸಕನು ಇಂತಹ ಪುಣ್ಯದ ಕೆಲಸ ಮಾಡಿಲ್ಲ. ಮುಂದಿನ ದಿನಗಳಲ್ಲಿ ಇನ್ನು ಐದು ಲೈಲಾಂಡ್ ಬಸ್‍ಗಳನ್ನು (Hospital) ಸರ್ಕಾರಿ ಶಾಲೆ ಮಕ್ಕಳಿಗೆ ನೀಡುತ್ತೇನೆ. ಚಿಕ್ಕಜಾಜೂರು ಸಮೀಪ ಹದಿನೈದು ಕೋಟಿ ರೂ.ವೆಚ್ಚದಲ್ಲಿ ಹೈಟೆಕ್ ಆಸ್ಪತ್ರೆ ಕಟ್ಟಿಸಿದ್ದೇನೆ.
ವೈದ್ಯರುಗಳು ತಂಗಲು ವಸತಿ ಗೃಹ ನಿರ್ಮಾಣಕ್ಕಾಗಿ ಎರಡು ಕೋಟಿ ರೂ.ಗಳನ್ನು ನೀಡಿದ್ದೇನೆ. ಸಾರ್ವಜನಿಕರ ಬದುಕನ್ನು ಸ್ವಂತ ಬದುಕೆಂದು ಅರ್ಥಮಾಡಿಕೊಂಡು ಕ್ಷೇತ್ರದಲ್ಲಿ ಯಾರು ಏನೆ ಕೇಳಲಿ ಬಿಡಲಿ ಎಲ್ಲೆಲ್ಲಿ ಏನೇನು ಸಮಸ್ಯೆಗಳಿದೆ (Hospital) ಎನ್ನುವುದನ್ನು ಹುಡುಕಿ ಹಗಲು-ರಾತ್ರಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆಂದರು.
ಇದನ್ನೂ ಓದಿ: ಮೂರು ಪಂದ್ಯದಲ್ಲಿ ಹ್ಯಾಟ್ರಿಕ್ ಗೆಲುವು | ರಾಜ್ಯ ಮಟ್ಟಕ್ಕೆ ಸಂಯುಕ್ತ ಪದವಿ ಪೂರ್ವ ಕಾಲೇಜು | Sports
ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಕಾಶ್, ಜಿಲ್ಲಾ ಪಂಚಾಯಿತಿ ಸದಸ್ಯ ತಿಪ್ಪೇಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ತಾಲ್ಲೂಕು ಆರೋಗ್ಯಾಧಿಕಾರಿ ಶ್ರೀಮತಿ ರೇಖ, ಎಸ್.ಡಿ.ಎಂ.ಸಿ.ಅಧ್ಯಕ್ಷ ಲಿಂಗರಾಜು, ಬಸವರಾಜಪ್ಪ, ಉಮೇಶ್, ಕಲ್ಲೇಶ್, ಈಶಣ್ಣ, ತಿಪ್ಪೇಶಣ್ಣ, ನಾಗರಾಜ್, ಗ್ರಾಮದ ಮುಖಂಡರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252