Chitradurga news|nammajana.com|16-9-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗದಲ್ಲಿ ಈದ್ ಮಿಲಾದ್ (Chitradurga Breking) ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಲಾಗಿದೆ.
ಇಂದು ಮುಸ್ಲಿಂ ಸಮುದಾಯದಿಂದ ಈದ್ ಮಿಲಾದ್ ಆಚರಣೆ ಹಿನ್ನೆಲೆ ಕೋಟೆನಾಡು ಚಿತ್ರದುರ್ಗ ನಗರದಲ್ಲಿ ಬಡಾಮಖಾನ್ ಬಳಿಯಿಂದ ಈದ್ ಮಿಲಾದ್ ಮೆರವಣಿಗೆ ಮಾಡಲಾಗಿದೆ. ಈ (Chitradurga Breking) ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿರುವಂತಹ ಘಟನೆ ನಡೆದಿದೆ. ಚಿತ್ರದುರ್ಗ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ: ಬಿಜೆಪಿ ವಿಪ್ ಉಲ್ಲಂಘನೆ | ನಗರಸಭೆ ಉಪಾಧ್ಯಕ್ಷೆ ಸೇರಿ ನಾಲ್ವರು ನಗರಸಭೆ ಸದಸ್ಯರ ಉಚ್ಚಾಟನೆ: ಎ.ಮುರುಳಿ | BJP
ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿರುವಂತಹ ಘಟನೆ ನಗರದ ಗಾಂಧಿ ವೃತ್ತದ (Chitradurga Breking) ಬಳಿ ನಡೆದಿದೆ. ಮೆರವಣಿಗೆಯಲ್ಲಿ ಕೆಲವರಿಂದ ಪ್ಯಾಲೆಸ್ತೀನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ.

ಈ ವೇಳೆ ಎಚ್ಚರಿಕೆ ನೀಡಿದ ಪೊಲೀಸರು ಎರಡು ಧ್ವಜ ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ರದುರ್ಗ ನಗರ ಪೊಲೀಸ್ ಠಾಣಾ (Chitradurga Breking) ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆ ಮುಂಜಾಗೃತೆ ಕ್ರಮವಾಗಿ ನಗರದೆಲ್ಲೆಡೆ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.
ಸಹಸ್ರಾರು ಯುವಕರು ಸಂಭ್ರಮದಿಂದ ಈದ್ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಮೆರವಣಿಗೆಯಲ್ಲಿಇಸ್ಲಾಂ ಧಾರ್ಮಿಕ ಸಂಕೇತಗಳಿದ್ದ ಹಸಿರು, ಶ್ವೇತ ಧ್ವಜಗಳು ಪ್ರದರ್ಶಿಸಿದ್ದರು. ಈ ಧ್ವಜಗಳ ನಡುವೆ ಯುವಕನೊಬ್ಬ ಪ್ಯಾಲೇಸ್ಟೈನ್ ಧ್ವಜ ಹಿಡಿದು ಪ್ರದರ್ಶಿಸಿದ್ದಾನೆ. ಕೆಲ ಯುವಕರು‘ಪ್ಯಾಲೇಸ್ಟೈನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252