Chitradurga news|nammajana.com|24-9-2024
ನಮ್ಮಜನ.ಕಾಂ, ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ನಿಗಮಗಳಾದ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ (Social Welfare) 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅ.10 ಕೊನೆಯ ದಿನವಾಗಿದೆ.
ಪರಿಶಿಷ್ಟ ಜಾತಿ ಸಮುದಾಯಗಳ ಆರ್ಥಿಕ ಅಭಿವೃದ್ಧಿಗಾಗಿ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ-1, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ-2, ಉದ್ಯಮಶೀಲತಾ ಅಭಿವೃದ್ಧಿ ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ (Social Welfare) ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.
ಈ ಯೋಜನೆಯ ಕುರಿತು ಸವಿವರವಾಗಿ ಸಮಾಜ ಕಲ್ಯಾಣ ಇಲಾಖೆಯ ಸಾಲ ಸೇವೆಗಳ ಪೋರ್ಟಲ್ ವೆಬ್‌ಸೈಟ್ https://swdcorp.karnataka.gov. in ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು. 2023-24ನೇ ಸಾಲಿನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಆಸಕ್ತರು https://sevasindhu.karnataka. govt.in ತಂತ್ರಾAಶದ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ 200766 ಅಥವಾ ಆಯಾ ತಾಲ್ಲೂಕಿನ ಅಭಿವೃದ್ಧಿ ಅಧಿಕಾರಿಗಳನ್ನು (Social Welfare) ಸಂಪರ್ಕಿಸಬಹುದು ಎಂದು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252
