Chitradurga news|nammajana.com|25-9-2024
ನಮ್ಮಜನ.ಕಾಂ, ಚಿತ್ರದುರ್ಗ: ಮುಡಾ ಪ್ರಕರಣದಲ್ಲಿ ತಮ್ಮ ವಿರುದ್ಧಪ್ರಾಸಿಕ್ಯೂಷನ್ ಗೆ ಹೈಕೋರ್ಟ್ ಅನುಮತಿ ನೀಡಿರುವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ತಕ್ಷಣವೇ ರಾಜೀನಾಮೆ ನೀಡಬೇಕು. ಅಧಿಕಾರದಲ್ಲಿ (Muda Scam) ಮುಂದುವರಿಯುವ ಭಂಡತನ ಪ್ರದರ್ಶನ ತೋರಬಾರದೆಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿರುವುದು ಎಲ್ಲರಿಗೂ ಗೊತ್ತಿತ್ತು. ಅಂಗೈ ಹುಣ್ಣಿಗೆ ಕನ್ನಡಿ (Muda Scam) ಬೇಕಿರಲಿಲ್ಲ. ಸಿದ್ದರಾಮಯ್ಯ ತಮ್ಮ ಮೇಲೆ ಬಂದಿರುವ ಆರೋಪ ನಿರಾಕರಿಸಿ ಅಂದೇ ರಾಜಿನಾಮೆ ನೀಡಬೇಕಿತ್ತು. ಕೋರ್ಟ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವು ದರಿಂದಈಗಲಾದರೂಸಿದ್ದರಾಮ್ಯಯಗೌರವದಿಂದ ನಿರ್ಗಮಿಸಿ ನಿಷ್ಪಕ್ಷಪಾತ ತನಿಖೆಗೆ ಸಹಕರಿಸಲಿ ಎಂದರು.
ಚಿತ್ರದುರ್ಗದ ಬಿಜೆಪಿ ಕಚೇರಿಯಲ್ಲಿ ಸಂಸದ ಗೋವಿಂದ ದೆಹಲಿಯಲ್ಲಿದ್ದರು. ದೆಹಲಿಯಿಂದ ಬಂದ ಅವರು ಕಚೇರಿಗೂಹೋಗದೆನೇರವಾಗಿ ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದರು. ರೈಲು ಅಪಘಾತವಾದಾಗ ಲಾಲ್ ಬಹದ್ದೂಶಾಸ್ತ್ರಿ ಮಂತ್ರಿ ಸ್ಥಾನಕ್ಕೆ (Muda Scam) ರಾಜಿನಾಮೆ ನೀಡಿ ಆದರ್ಶರೆನಿಸಿ ಕೊಂಡರು. ಇವೆಲ್ಲವನ್ನು ಈಗಿನ ಮುಖ್ಯಮಂತ್ರಿ ಮರೆತಂತಿದೆ. ಸಿದ್ದರಾಮಯ್ಯ ಅವರು ರಾಮಕೃಷ್ಣ ಹೆಗಡೆ ಗರಡಿಯಲ್ಲಿ ಬೆಳೆದಿರುವುದರಿಂದ ಅವರ ಭರವಸೆ ನಡೆಯನ್ನು ಅನುಸರಿಸಲಿ ಎಂದುಕಾರಜೋಳಸಲಹೆ ಮಾಡಿದರು.
ಮಾಹಿತಿ ಹಕ್ಕು ಕಾರ್ಯಕರ್ತರು ನಿರಂತರವಾಗಿ ನಡೆಸಿದ ಹೋರಾಟಕ್ಕೆ ಹೈಕೋರ್ಟ್ ತೀರ್ಪಿನಿಂದ ಜಯ ಸಿಕ್ಕಂತಾಗಿದೆ. ಕುಟುಂಬದವರು ನಡೆಸಿದ ಹಗರಣದಲ್ಲಿ ಮುಖ್ಯಮಂತ್ರಿಯೊಬ್ಬರು ಸಿಲುಕಿರು ವುದು ರಾಜ್ಯದ (Muda Scam) ಇತಿಹಾಸದಲ್ಲಿ ಇದೇ ಮೊದಲು. ವಾಲ್ಮೀಕಿ ಹಗರಣದಲ್ಲಿ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಸರ್ಕಾರಿ ಖಜಾನೆಯಿಂದ ನೇರವಾಗಿ ಹಣ ಲೂಟಿ ಮಾಡಿದ್ದಾರೆ. ಕಾಂಗ್ರೆಸ್‌ನವರೆ ತಮ್ಮ ಸ್ವಾರ್ಥಕ್ಕಾಗಿ ಬೇರೆಯವರನ್ನು ಸಿಲುಕಿಸಲು ಹೆಣೆದಿರುವ ಬಲೆಯಲ್ಲಿ ಈಗ ಅವರೆ ಸಿಕ್ಕಿಬಿದ್ದಿದ್ದಾರೆ ಎಂದು ಕಾರಜೋಳ ಹೇಳಿದರು.
ಮಾಜಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಮಾತನಾಡಿ ಇವರು ಅಧಿಕಾರದಲ್ಲಿ ಇದ್ದಾಗ ಏಕೆ ತನಿಖೆ ಮಾಡಲಿಲ್ಲವೆಂದು ಹಗರಣಗಳ ಬಗ್ಗೆ ಪ್ರಸ್ತಾಪಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಬಹಳ ಹಿಂದಿನ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಕಾಲದ ಒಂದುವರೆ ಎಕರೆ ಡಿನೋಟಿಫಿಕೇಷನ್ ಪ್ರಕರಣ (Muda Scam) ಕೈಗೆತ್ತಿಕೊಂಡಿದ್ದಾರೆ. ತಮ್ಮ ಹುಳುಕುಮುಚ್ಚಿಕೊಳ್ಳಲು ರಾಜ್ಯ ದಜನರ ಗಮನವನ್ನು ಬೇರೆಡೆ ಸೆಳೆಯುತ್ತಿದ್ದಾರೆ ಎಂದರು.
ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ,ಹೈಕೋರ್ಟ್ ರಾಜ್ಯಪಾಲರನಡೆಯನ್ನು ಬೆಂಬಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅರ್ಜಿ ವಜಾಗೊಳಿಸಿರುವುದರಿಂದ ಮುಖ್ಯಮಂತ್ರಿ ಕುರ್ಚಿಯಲ್ಲಿ ಮುಂದುವರಿಯಲು ನೈತಿಕತೆಯಿಲ್ಲ.
ಹಗರಣಗಳಿಗೆ ಸಂಬಂಧಿಸಿದಂತೆ ಬಿಜೆಪಿ ಸದನದ ಒಳಗೆ ಹೊರಗೆ ನಿರಂತರವಾಗಿ ಹೋರಾಟ ಮಾಡಿ ಕೊಂಡು ಬರುತ್ತಿದೆ. ಮೂಡಾ ಹಗರಣ ವಿರೋಧಿಸಿ ಬಿಜೆಪಿ ಮೈಸೂರಿಗೆ ಪಾದಯಾತ್ರೆ ನಡೆಸಿದ್ದಕ್ಕೆ ವಿರುದ್ದವಾಗಿ ಮುಖ್ಯಮಂತ್ರಿ ಜನಾಂದೋಲನ (Muda Scam) ನಡೆಸಿ, ನಮ್ಮ ಪಾದಯಾತ್ರೆಯನ್ನು ಹತ್ತಿಕ್ಕುವ ಕೆಲಸ ಮಾಡಿದರು. ಜಟ್ಟಿ ಕೆಳಗೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎನ್ನುವಂತೆ ಸಿದ್ದರಾಮಯ್ಯ ನವರು ಕೆಳಗೆ ಬಿದ್ರೂ ಮೀಸೆ ಮಣ್ಣಾಗಲಿಲ್ಲ ಎನ್ನುತ್ತಿದ್ದಾರೆ. ತಮ್ಮ ಮೇಲೆ ಭ್ರಷ್ಟಾಚಾರದ ಆರೋಪ ಬಂದಾಗಲೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಕೊಡಬೇಕಿತ್ತು. ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಿಎಂ ರಾಜಿನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದರು.
ಇದನ್ನೂ ಓದಿ: Dina Bhavishya kannada: ಇಂದಿನ ದಿನ ಭವಿಷ್ಯ, ಯಾವ ರಾಶಿಗೆ ಉದ್ಯೋಗ, ವ್ಯಾಪರದಲ್ಲಿ ಲಾಭ?
ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಖನಿಜ ನಿಗಮದ ಮಾಜಿ ಅಧ್ಯಕ್ಷಲಿಂಗಮೂರ್ತಿ, ಮಾಜಿ ಶಾಸಕ ಎಸ್. ಕೆ.ಬಸವರಾಜನ್, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿಮಲ್ಲಿಕಾರ್ಜುನ್, ಮಾಧ್ಯಮವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್‌ಬೇದ್ರೆ, ತಿಪ್ಪೇಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.