Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ವಾಲ್ಮೀಕಿ ಭವನ ಮತ್ತು ಜಿಲ್ಲಾ ಕಚೇರಿ ಸ್ಥಳಾಂತರ ವಿಚಾರಕ್ಕೆ ಬಿ. ಕಾಂತರಾಜ್ ಅಸಮಾಧಾನ | Valmiki Samaj
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ವಾಲ್ಮೀಕಿ ಭವನ ಮತ್ತು ಜಿಲ್ಲಾ ಕಚೇರಿ ಸ್ಥಳಾಂತರ ವಿಚಾರಕ್ಕೆ ಬಿ. ಕಾಂತರಾಜ್ ಅಸಮಾಧಾನ | Valmiki Samaj
ಇಂದಿನ ಸುದ್ದಿ

ವಾಲ್ಮೀಕಿ ಭವನ ಮತ್ತು ಜಿಲ್ಲಾ ಕಚೇರಿ ಸ್ಥಳಾಂತರ ವಿಚಾರಕ್ಕೆ ಬಿ. ಕಾಂತರಾಜ್ ಅಸಮಾಧಾನ | Valmiki Samaj

Editor Nammajana
Last updated: 2 October 2024 05:09
By Editor Nammajana 2 Min Read
Share
SHARE

Chitradurga news|nammajana.com|2-10-2024

ನಮ್ಮಜನ.ಕಾಂ, ಚಿತ್ರದುರ್ಗ:ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾ ಕೇಂದ್ರದಲ್ಲಿ ಇದೇ ಅಕ್ಟೋಬರ್ 17 ರಂದು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ (Valmiki Samaj) ಅಗತ್ಯ ಪೂರ್ವಸಿದ್ಧತೆ  ಕೈಗೊಳ್ಳುವಂತೆ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ (Valmiki Samaj) ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಸಭೆಯಲ್ಲಿ ವಾಲ್ಮೀಕಿ ಜಯಂತಿಗಿಂತ ಮೊದಲು ಚಿತ್ರದುರ್ಗ ನಗರದ ಮದಕರಿ ವೃತ್ತದಲ್ಲಿ ನಿರ್ಮಿಸಲಾಗಿರುವ ವಾಲ್ಮೀಕಿ ಭವನ ಅವೈಜ್ಞಾನಿಕವಾಗಿ ನಿರ್ಮಾಣವಾಗಿದ್ದು, ಇಲ್ಲಿ ಯಾವುದೇ ಕಾರ್ಯಕ್ರಮ ಆಯೋಜನೆ ಮಾಡಲು ಸಾಧ್ಯವಾಗುತ್ತಿಲ್ಲ.ಈ (Valmiki Samaj) ಕುರಿತು ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ.  ವಾಲ್ಮೀಕಿ ಭವನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಹಸ್ತಾಂತರವಾಗಿಲ್ಲ. ಕೆಲವು ತಾಂತ್ರಿಕ ಸಮಸ್ಯೆಗಳು ಇದ್ದು, ಈ ಕುರಿತು ಸಂಬಂಧಪಟ್ಟವರು ಅಗತ್ಯ ಕ್ರಮ ವಹಿಸಬೇಕು ಎಂದು ತಾಲ್ಲೂಕು ನಾಯಕ ಸಮಾಜದ ಅಧ್ಯಕ್ಷ ಬಿ.ಕಾಂತರಾಜ್ ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ದನಿಗೂಡಿಸಿದ ನಗರಸಭೆ  ಸದಸ್ಯ ವೆಂಕಟೇಶ್, ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ವಾಲ್ಮೀಕಿ ಭವನ ಉಪಯೋಗಕ್ಕೆ ಬಾರದ ಸ್ಥಿತಿಯಲ್ಲಿದೆ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ನಗರದ ಮಧ್ಯಭಾಗದಲ್ಲಿರುವ ವಾಲ್ಮೀಕಿ ಭವನ ಯಾವ ಉದ್ದೇಶಕ್ಕೆ ನಿರ್ಮಾಣವಾಗಿದೆಯೋ ಅದು (Valmiki Samaj) ಸದುಪಯೋಗವಾಗಬೇಕು. ಇದನ್ನು  ಗಂಭೀರವಾಗಿ ಪರಿಗಣಿಸಿದ್ದು, ಆಸಕ್ತಿವಹಿಸಿ ಸಂಬಂಧಪಟ್ಟವರ ಜೊತೆ ಚರ್ಚಿಸಿ, ಸಭೆ ನಡೆಸಿ, ತಕ್ಷಣವೇ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಚಿತ್ರದುರ್ಗ ನಗರದ ಜೆಸಿಆರ್ 4ನೇ ಕ್ರಾಸ್, ಗಣೇಶ ದೇವಸ್ಥಾನ ಹತ್ತಿರ ಇರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಾರ್ವಜನಿಕರ ಹಿತದೃಷ್ಠಿಯಿಂದ ನಗರದ ಬಿ.ಡಿ.ರಸ್ತೆಯ ಪ್ರವಾಸಿ ಮಂದಿರದ ಸಮೀಪ ಲಿಡ್ಕರ್ ಭವನಕ್ಕೆ ಸ್ಥಳಾಂತರಿಸಬೇಕು ಎಂದು ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮವಹಿಸಿಲ್ಲ.

ಇದನ್ನೂ ಓದಿ: ಗ್ರಾಮ ಆಡಳಿತ ಅಧಿಕಾರಿ ಸಸ್ಪೆಂಡ್ | HIRIYUR NEWS

ವಾಲ್ಮೀಕಿ ಜಯಂತಿಯಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಉದ್ಘಾಟನೆ ಕಾರ್ಯ  ಆಗಬೇಕು ಎಂದು ನಾಯಕ ಸಮಾಜದ ಮುಖಂಡರು (Valmiki Samaj) ಉಪವಿಭಾಗಾಧಿಕಾರಿ ಎಂ.ಕಾರ್ತಿಕ್‍ಗೆ ಮನವಿ ಮಾಡಿದರು.

ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲಾ ಕಚೇರಿ ಸ್ಥಳಾಂತರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಭರವಸೆ ನೀಡಿದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:ChitradurgaChitradurga NewsDiscontent of LeadersDistrict AdministrationDistrict Office ShiftKannada Newskannada suddiMeetingNammajana.comPreliminary MeetingValmiki BhavanValmiki Samajಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾ ಕಚೇರಿ ಸ್ಥಳಾಂತರಜಿಲ್ಲಾಡಳಿತನಮ್ಮಜನ.ಕಾಂಪೂರ್ವಭಾವಿ ಸಭೆಮುಖಂಡರ ಅಸಮಾಧಾನವಾಲ್ಮೀಕಿ ಭವನವಾಲ್ಮೀಕಿ ಸಮಾಜಸಭೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article ಗ್ರಾಮ ಆಡಳಿತ ಅಧಿಕಾರಿ ಸಸ್ಪೆಂಡ್ | HIRIYUR NEWS
Next Article ನೇರ ರೈಲ್ವೆ | 2027ರ ಜನವರಿಯೊಳಗೆ ಲೋಕಾರ್ಪಣೆ: ಸಚಿವ ವಿ‌.ಸೋಮಣ್ಣ | Direct railway line
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?