Chitradurga news|nammajana.com|6-10-2024
ನಮ್ಮಜನ.ಕಾಂ, ಹಿರಿಯೂರು: ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯಕ್ಕೆ ಭದ್ರಾ ಡ್ಯಾಂ ನೀರು ಸೇರಿದಂತೆ 1386 ಕ್ಯೂಸೆಕ್ಸ್ ಒಳಹರಿವು ನೀರು ಹರಿದು ಬರುತ್ತಿದೆ. ಇದರಿಂದ (Hiriyur traffic jam) ಪ್ರಸ್ತುತ ಜಲಾಶಯದ ನೀರಿನ ಮಟ್ಟ 121.05 ತಲಪಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಜಲಾಶಯದ ಮೇಲ್ಬಾಗದಲ್ಲಿ ಅಲ್ಪ ಪ್ರಮಾಣದ ಮಳೆಯಾಗುತ್ತಿದ್ದು ಡ್ಯಾಂಗೆ ಒಳಹರಿವಿನ ನೀರಿನ ಮಟ್ಟ ಸ್ವಲ್ಪ ಮಟ್ಟಿಗೆ ಹೆಚ್ಚಿದೆ. ಈವರೆಗೆ 113 (Hiriyur traffic jam) ಅಡಿಯಷ್ಟು ನೀರಿನ ಸಂಗ್ರಹವಿತ್ತು. ಸುಮಾರು 8 ಅಡಿ ನೀರು ಮಳೆ ಮತ್ತು ಭದ್ರಾದಿಂದ ಹರಿದು ಬಂದಿದೆ.
ಶನಿವಾರದ ಮಳೆ ವರದಿಯಂತೆ ಈಶ್ವರಗೆರೆಯಲ್ಲಿ ಅತೀ ಹೆಚ್ಚು ಮಳೆಯಾಗಿದೆ. ಶುಕ್ರವಾರ ರಾತ್ರಿ ಉತ್ತಮ ಮಳೆಯಾಗಿದ್ದು ತಾಲೂಕಿನ 81.02 2 ಮಳೆಯಾಗಿದೆ. ಬಟ್ಟೂರು 60.8, 2 (Hiriyur traffic jam) 53.4, & 42.6 ಹಾಗೂ ಇಕ್ಕನೂರಿನಲ್ಲಿ 26.2 ಸೇರಿ 52.84 ಮಿಮೀ ಮಳೆಯಾಗಿದೆ.
ಮಳೆ ಜೋರಾಗಿ ಬಂದ ಹಿನ್ನೆಲೆಯಲ್ಲಿ ತಾಲೂಕಿನರಂಗನಾಪುರದಿಂದ ಆರನಕಟ್ಟೆ ರಸ್ತೆಯಲ್ಲಿ ವಿದ್ಯುತ್ ಟ್ರಾನ್ ಫಾರ್ಮರ್ ಜಿ.ಜಿ ಹಳ್ಳಿ ಹೋಬಳಿ ಗೊರ್ಲಡಕು ಗೇಟ್ ಬಳಿ ಬ್ರಿಡ್ಜ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, (Hiriyur traffic jam) ಕಾಮಗಾರಿಯ ಮಣ್ಣು ಸರ್ವಿಸ್ ರಸ್ತೆಗೆ ಸೇರಿದ್ದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು.
ಪೆಟ್ಟಿಗೆ ನೆಲಕ್ಕುರುಳಿ ಸಂಚಾರ ಅಸ್ತವ್ಯಸ್ತವಾಗಿತ್ತು. ರಾಷ್ಟ್ರೀಯ ಹೆದ್ದಾರಿ ನಾಲ್ಕರ ಜವನಗೊಂಡನಹಳ್ಳಿಯಿಂದ ಹಿರಿಯೂರು ಕಡೆ ಬರುವ ರಸ್ತೆ ಸುಮಾರು 10 ಕಿಲೋ ಮೀಟರ್ (Hiriyur traffic jam) ದೂರದವರೆಗೂ ಟ್ರಾಫಿಕ್ ಜಾಮ್ ಉಂಟಾಗಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಜವನಗೊಂಡನಹಳ್ಳಿ ಹೋಬಳಿಯ ಸಮೀಪ ಗೊರ್ಲಡಕು ಗೇಟ್ ಬಳಿ ಬ್ರಿಡ್ಜ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಯ ಮಣ್ಣು ಸರ್ವಿಸ್ ರಸ್ತೆಗೆ ಸೇರಿದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು.
ವಾಹನಗಳು ಸರ್ವಿಸ್ ರಸ್ತೆ ಮೂಲಕ ತೆರಳಬೇಕಾಗಿದ್ದು, ಸರ್ವಿಸ್ ರಸ್ತೆಯಲ್ಲಿ ಮಣ್ಣು, ನೀರು ಸೇರಿಕೊಂಡಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಿಷಯ ತಿಳಿದ ತಕ್ಷಣ (Hiriyur traffic jam) ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ದಿನ ಭವಿಷ್ಯ 06-10-2024 | Kannada Dina Bhavishya
ಬಳಿಕ ಕಾಮಗಾರಿ ನಿರ್ವಹಿಸುವ ಕಂಪನಿಯ ಜೆಸಿಬಿ ಮೂಲಕ ಮಣ್ಣು, ನೀರು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.