
Chitradurga news|nammajana.com|23-10-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-13ರಲ್ಲಿ ಮಂಗಳವಾರ ಎಸ್.ಆರ್.ಎಸ್ ಕಾಲೇಜಿನ ಪ್ರಥಮ ವರ್ಷದ ಕಾಮರ್ಸ್ (Pappi Student Wing) ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಚೇತನ್ ಅಪಘಾತ ಕೀಡಾಗಿ ಸ್ಥಳದಲ್ಲೇ ಮೃತಪಟ್ಟಿರುತ್ತಾನೆ.
ಈ ಘಟನೆದ ಅನ್ವಯವಾಗಿ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರ ಪಪ್ಪಿಸ್ ಸ್ಟೂಡೆಂಟ್ ವಿಂಗ್ ವತಿಯಿಂದ ಚಿತ್ರದುರ್ಗ ನಗರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಡಿವೈಎಸ್ಪಿ ಕಚೇರಿ, ಬಡಾವಣೆ ಪೊಲೀಸ್ ಠಾಣೆಗೆ ಪಪ್ಪಿಸ್ ಸ್ಟೂಡೆಂಟ್ ವಿಂಗ್ ನ ವಿದ್ಯಾರ್ಥಿಗಳು ಭೇಟಿ ನೀಡಿ ಹೆದ್ದಾರಿಗಳಲ್ಲಿ ದಟ್ಟಣೆಯ (Pappi Student Wing) ವಾಹನಗಳು ಸಂಚರಿಸುವ ರಸ್ತೆಗಳಲ್ಲಿ ಬ್ಯಾರಿಕೇಟ್ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಬೇಕೆಂದು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ನೇರಲಗುಂಟೆ PDO ಸಸ್ಪೆಂಡ್ | Suspended
ನಗರ ಪ್ರದೇಶ ಹಾಗೂ ಹೊರವಲಯದಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು ಇವುಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಸಂಚಾರಿ ಪೊಲೀಸ್ ಇಲಾಖೆಯು ಶಾಲಾ-ಕಾಲೇಜು ಮಟ್ಟಗಳಲ್ಲಿ ಕಾರ್ಯಗಾರವನ್ನು ಮಾಡಿ (Pappi Student Wing) ಅರಿವು ಮೂಡಿಸುವುದು ಅವಶ್ಯಕವಾಗಿದೆ ಎಂದು ಪಪ್ಪಿಸ್ ಸ್ಟೂಡೆಂಟ್ ವಿಂಗ್ ನ ವಿದ್ಯಾರ್ಥಿಗಳು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
