Chitradurga news|nammajana.com|21-11-2024
ನಮ್ಮಜನ.ಕಾಂ, ಚಳ್ಳಕೆರೆ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನ.22 ರ ಗುರುವಾರ ಉಚಿತ ಹೃದಯರೋಗ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಚಿತ್ರದುರ್ಗದ ಇಂಡಿಯಾನಾ-ಎಸ್‌ಜೆಎA ಹಾರ್ಟ್ ಸೆಂಟರ್ ಸಹಯೋಗದಲ್ಲಿ ಈ (Cardiac check-up) ಕಾರ್ಯಕ್ರಮ ಏರ್ಪಡಿಸಿದೆ ಎಂದು ಆಡಳಿತಾಧಿಕಾರಿ ಡಾ.ಜೆ.ಡಿ.ವೆಂಕಟೇಶ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಆಸ್ಪತ್ರೆಯ ಕಾರ್ಯನಿರ್ವಾಹಕ ಅಧಿಕಾರಿ ಮರಿಸ್ವಾಮಿ, ಸುತ್ತಮುತ್ತಲ ಗ್ರಾಮಸ್ಥರು ಉಚಿತ ಹೃದಯರೋಗ ತಪಾಸಣಾ ಶಿಬಿರಕ್ಕೆ ಆಗಮಿಸಿ ಪರೀಕ್ಷೆಗೆ (Cardiac check-up) ಒಳಪಡುವಂತೆ ಮನವಿ ಮಾಡಿದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯ ಇಲಾಖೆ ಮತ್ತು ಸಾರ್ವಜನಿಕ ಆಸ್ಪತ್ರೆ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ.
ಇದನ್ನೂ ಓದಿ: Dina Bhavishya: ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ, ಅಶುಭ?
ಬೆಳಗ್ಗೆ ೧೦ರಿಂದ ೨ರ ತನಕ ಶಿಬಿರದಲ್ಲಿ ಎದೆನೋವು, ರಕ್ತದೊತ್ತಡ, ಆಯಾಸ, ಉಸಿರಾಟ ತೊಂದರೆ, ಬೇವರುವುದು, ತಲೆಸುತ್ತು, ಮುಂತಾದ ಸಮಸ್ಯೆಗಳ ಬಗ್ಗೆ ತಪಾಸಣೆ (Cardiac check-up) ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ 87922 63248, 87922 63250 ಸಂಪರ್ಕಿಸಬಹುದು.
ಇದನ್ನೂ ಓದಿ: ಇಂದು ವಿದ್ಯುತ್ ವ್ಯತ್ಯಯ | ಬೆಳಗ್ಗೆಯಿಂದ ಸಂಜೆವರೆಗೆ ಎಲ್ಲೆಲ್ಲಿ ಕರೆಂಟ್ ಇರಲ್ಲ | Power Cut
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252