Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಪಠ್ಯೇತರ ಚಟುವಟಿಕೆಯಿಂದ ಮಕ್ಕಳ ಸೃಜನಶೀಲತೆ ಹೆಚ್ಚಳ: ಎಸ್.ಜೆ.ಸೋಮಶೇಖರ್ | Childrens Day
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಪಠ್ಯೇತರ ಚಟುವಟಿಕೆಯಿಂದ ಮಕ್ಕಳ ಸೃಜನಶೀಲತೆ ಹೆಚ್ಚಳ: ಎಸ್.ಜೆ.ಸೋಮಶೇಖರ್ | Childrens Day
ಇಂದಿನ ಸುದ್ದಿ

ಪಠ್ಯೇತರ ಚಟುವಟಿಕೆಯಿಂದ ಮಕ್ಕಳ ಸೃಜನಶೀಲತೆ ಹೆಚ್ಚಳ: ಎಸ್.ಜೆ.ಸೋಮಶೇಖರ್ | Childrens Day

Editor Nammajana
Last updated: 26 November 2024 16:17
By Editor Nammajana 2 Min Read
Share
SHARE

Chitradurga news|nammajana.com|26-11-2024

ನಮ್ಮಜನ.ಕಾಂ, ಚಿತ್ರದುರ್ಗ: ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮಕ್ಕಳಲ್ಲಿ (Childrens Day) ಸೃಜನಾತ್ಮಕತೆ ಹಾಗೂ ಜ್ಞಾನಾಭಿವೃದ್ಧಿಯಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ಹಾಗೂ ಜಿಲ್ಲಾ ಬಾಲಭವನ ಸಮಿತಿ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್ ಹೇಳಿದರು.

ನಗರದ ಜಿಲ್ಲಾ ಬಾಲಭವನದಲ್ಲಿ ಮಂಗಳವಾರ ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಕಲಾಶ್ರೀ (Children’s Day) ಸ್ಪರ್ಧೆಯಲ್ಲಿ ಭಾಗವಹಿಸುವ ಸಲುವಾಗಿ ಜಿಲ್ಲಾಮಟ್ಟದ ಆಯ್ಕೆ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಜಿಲ್ಲಾ ಬಾಲ ಭವನ ಸಮಿತಿ ವತಿಯಿಂದ ಮಕ್ಕಳಿಗೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಪೋಷಕರು ಮತ್ತು ಶಿಕ್ಷಕರಿಗೂ ವಿಶೇಷ ಸ್ಪರ್ಧೆಗಳನ್ನು ಸಹ ಹಮ್ಮಿಕೊಳ್ಳಲಾಗುತ್ತದೆ. ಶಾಸ್ತ್ರೀಯ ನೃತ್ಯಗಳಿಗೆ ಮಕ್ಕಳ ತಯಾರಿ ಮಾಡಿಕೊಳ್ಳುವುದು ಬಹಳ ಕಷ್ಟಕರ. ಆದ್ದರಿಂದ ತೀರ್ಪುಗಾರರು ಅರ್ಹ ಸ್ಪರ್ಧಾಳುಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಅರ್ ಬಣಕಾರ್ ಮಾತನಾಡಿ, ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಹಾಗೂ ರಾಜ್ಯಮಟ್ಟದ ಕಲಾ ಸ್ಪರ್ಧೆಗೆ ಭಾಗವಹಿಸುವ ಮಕ್ಕಳನ್ನು ಆಯ್ಕೆ ಮಾಡುವ ಸಲುವಾಗಿ 9 ರಿಂದ 16 ವರ್ಷದ ಮಕ್ಕಳಿಗೆ ನಾಲ್ಕು ವಿಭಾಗಗಳಲ್ಲಿ (Children’s Day) ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದು ಒಟ್ಟು 90 ಸ್ಪರ್ಧಿಗಳು ಭಾಗವಹಿಸಿದ್ದು, ಒಂದು ಸ್ಪರ್ಧೆಯಿಂದ ಇಬ್ಬರು ಮಕ್ಕಳಂತೆ ಒಟ್ಟು ಎಂಟು ಮಕ್ಕಳನ್ನು ಆಯ್ಕೆ ಮಾಡಿ ರಾಜ್ಯಮಟ್ಟದಲ್ಲಿ ನಡೆಯುವ ಕಲಾಶ್ರೀ ಕಾರ್ಯಕ್ರಮಕ್ಕೆ ಸಿಬ್ಬಂದಿಯೊಂದಿಗೆ ಕಳಿಸಲಾಗುವುದು ಎಂದರು.

ಇದನ್ನೂ ಓದಿ: ಈರುಳ್ಳಿ ವಿಮಾ ನೊಂದಣಿ ಆರಂಭ | Onion Insurance

ಕಾರ್ಯಕ್ರಮದ ಉದ್ಘಾಟನೆ ನಂತರ ಸಂವಿಧಾನದ ಪೀಠಿಕೆಯನ್ನು ವಾಚಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ವೆಂಕಟೇಶ್,  ಜಿಲ್ಲಾ ನಿರೂಪಣಾಧಿಕಾರಿ ವಿಜಯಕುಮಾರ್, ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪವಿತ್ರ, ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳಾದ ಎನ್.ಸುಧಾ, ವೀಣಾ,  ಬಾಲ ಭವನ ವ್ಯವಸ್ಥಾಪಕ ಸುರೇಶ್, ಜಿಲ್ಲಾ ಬಾಲವನ ಕಾರ್ಯಕ್ರಮ ಸಂಯೋಜಕರಾದ ಡಿ ಶ್ರೀಕುಮಾರ ಇದ್ದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

TAGGED:CEOChildren's Day CelebrationChitradurgaDistrict Bala BhavanExtra Curricular ActivitiesS.J.Somashekarಎಸ್.ಜೆ.ಸೋಮಶೇಖರ್ಚಿತ್ರದುರ್ಗಜಿಲ್ಲಾ ಬಾಲಭವನಪಠ್ಯೇತರ ಚಟುವಟಿಕೆಮಕ್ಕಳ ದಿನಾಚರಣೆಸಿಇಓ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಈರುಳ್ಳಿ ವಿಮಾ ನೊಂದಣಿ ಆರಂಭ | Onion Insurance
Next Article Adike Rate | 26 ನವೆಂಬರ್ 2024 | ರಾಜ್ಯದ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಧಾರಣೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?