
Chitradurga news|nammajana.com|3-12-2024
ನಮ್ಮಜನ.ಕಾಂ, ಚಿತ್ರದುರ್ಗ: ತಮಿಳುನಾಡು ಹಾಗೂ ಪುದುಚೇರಿಯಲ್ಲಿ ತಲ್ಲಣ ಸೃಷ್ಟಿಸಿದ್ದ ಫೆಂಗಲ್ ಚಂಡಮಾರುತ ಇದೀಗ ಕರ್ನಾಟಕದ ಬಾಗಿಲಿಗೂ ಬಂದಿದೆ. ಸೈಕ್ಲೋನ್ (school holiday) ಪರಿಣಾಮ ಕಳೆದೆರಡು ದಿನಗಳಿಂದ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆ ಇವತ್ತು ಮತ್ತಷ್ಟು ಜೋರಾಗಿರುವ ಪರಿಣಾಮವಾಗಿ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಆರ್ಭಟಕ್ಕೆ ಶಾಲೆಗಳಿಗೆ ರಜೆ ಘೋಷಿಸಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.
ಇಂದು ವರುಣನ ಆರ್ಭಟ ಹೆಚ್ಚಾಗುವ (school holiday) ಸಂಭವವಿರುವುದರಿಂದ ಮುನ್ನೆಚ್ಚರಿಕೆಯಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು ಮಕ್ಕಳ ಸುರಕ್ಷತೆಗೆ ಒತ್ತು ನೀಡಲಾಗಿದೆ.

ಇದನ್ನೂ ಓದಿ: ಕೌಶಲ್ಯ ತರಬೇತಿ ಪಡೆದು ನಿರುದ್ಯೋಗ ಸಮಸ್ಯೆ ನಿವಾರಿಸಿಕೊಳ್ಳಿ : ಶಾಸಕ ರಘುಮೂರ್ತಿ | Skill training
ಅರಬ್ಬೀ ಸಮುದ್ರದತ್ತ ಹೊರಟಿರುವ ಫೆಂಗಲ್ ಚಂಡಮಾರುತ ಈಗ ಕರ್ನಾಟಕದಲ್ಲೂ ಕಂಪನ ಸೃಷ್ಟಿಸಿದೆ. ಕರ್ನಾಟಕದ (school holiday) ಕರಾವಳಿ ಮತ್ತು ದಕ್ಷಿಣದ ರಾಜ್ಯಗಳಲ್ಲಿ ಅಬ್ಬರಿಸುವ ಸಾಧ್ಯತೆಯಿದೆ.
