Chitradurga news|nammajana.com|7-12-2024
ನಮ್ಮಜನ.ಕಾಂ, ಚಿತ್ರದುರ್ಗ: 2028 ಚುನಾವಣೆಯಲ್ಲಿ (Satish Jarakiholi) ಕಾಂಗ್ರೆಸ್ ಪಕ್ಷ ಗೆಲ್ಲಬೇಕು ಅದಕ್ಕೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ರಾಜ್ಯದ ಮೂರು ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಳು ಗೆದ್ದಿರುವುದು ಪಕ್ಷಕ್ಕೆ ಶಕ್ತಿ ಬಂದಂತಾಗಿದೆ ಎಂದು ಎಂದರು.

ವಿಧಾನಸಭೆ ಉಪ ಚುನಾವಣೆಯಲ್ಲಿ ರಾಜ್ಯ ದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ಶ್ರಮವೆಷ್ಟಿದೆಯೋ ಅಷ್ಟೆ (Satish Jarakiholi) ಕಾರ್ಯಕರ್ತರ ಕೊಡುಗೆಯೂ ಇದೆ. ಮುಂದೆ ಜಿ.ಪಂ, ತಾ.ಪಂ ಚುನಾವಣೆಯಿದೆ. ಅಲ್ಲಿಯೂ ಕಾಂಗ್ರೆಸ್ ಗೆಲ್ಲಬೇಕು. ಚಿತ್ರದುರ್ಗ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲುಂಟಾಗಿದೆ. ಮುಂದೆ ಅದನ್ನು ಸರಿಪಡಿಸಿಕೊಳ್ಳಬೇಕಾಗಿರುವುದರಿಂದ ಕಾರ್ಯಕರ್ತರು ಒಗ್ಗಟ್ಟಿನಿಂದಿದ್ದು ಪಕ್ಷದ ಕೆಲಸ ಮಾಡಬೇಕು ಎಂದರು.
ರಾಜ್ಯದ ಚುಕ್ಕಾಣಿ ಹಿಡಿಯುವ ಯೋಗ ಸತೀಶ್ ಅಣ್ಣನವರಿಗೆ ಇದೆ: ಶಾಸಕ ಟಿ.ರಘುಮೂರ್ತಿ
ಸಣ್ಣ ಕೈಗಾರಿಕೆ ನಿಗಮದ ಅಧ್ಯಕ್ಷ ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮಾತನಾಡಿ ಸಿದ್ದರಾಮಯ್ಯ ಅವರ ಜೊತೆಯಲ್ಲಿ ಲೋಕೋಪಯೋಗಿ ಸಚಿವರಾಗಿ ಸತೀಶ್ (Satish Jarakiholi) ಜಾರಕಿಹೊಳಿ ಅವರು ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲಿಕ್ಕೆ ಸತೀಶ್ ಅಣ್ಣ ಕೆಲಸ ಮಾಡಿದ್ದಾರೆ. ಸತೀಶ್ ಜಾರಕಿಹೊಳಿ ಅವರು ತಳಮಟ್ಟದಿಂದ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡುವ ಮೂಲಕ ಮಾತಿನಲ್ಲಿ ಹೇಳದೇ ಕೆಸಲ ಮಾಡಿ ತೋರಿಸುತ್ತಾರೆ. ಮುಂದಿನ ದಿನದಲ್ಲಿ ರಾಜ್ಯದ ಚುಕ್ಕಾಣಿ ಹಿಡಿಯುವ ಎಲ್ಲಾ ಅರ್ಹತೆ ಸತೀಶ್ ಅಣ್ಣನವರಿಗಿದೆ ಎಂದು ಹೇಳಿದರು.
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತ ನಾಡಿ, ರಾಜ್ಯದ ಮೂರು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಚಿವ ಸತೀಶ್ ಜಾರಕಿಹೊಳಿ ಪರಿಶ್ರಮವಿದೆ (Satish Jarakiholi) ಎಂದರು.
ಇದನ್ನೂ ಓದಿ: ವಿಕಲಚೇತನರು ಕೀಳರಿಮೆ ತೊರೆದು ಸಮಾಜದ ಮುಖ್ಯ ವಾಹಿನಿಗೆ ಬರಲಿ: ಎಂ.ಚಂದ್ರಪ್ಪ | Handicapped
ಜಿಲ್ಲಾಕಾಂಗ್ರೆಸ್ ಅಧ್ಯಕ್ಷಎಂ.ಕೆ.ತಾಜ್‌ಪೀರ್, ಕಾರ್ಯಾಧ್ಯಕ್ಷಕೆ.ಎಂ.ಹಾಲಸ್ವಾಮಿ, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಪ್ರ.ಕಾಕೆ.ಪಿ.ಸಂಪತ್ ಕುಮಾರ್, ಡಿ.ಎನ್.ಮೈಲಾರಪ್ಪ, ದ್ರಾಕ್ಷಾರಸ ಮಂಡಳಿ ಅಧ್ಯಕ್ಷಬಿ. ಯೋಗೇಶ್ ಬಾಬು, ಪ.ಜಾ ವಿಭಾಗದ ಅಧ್ಯಕ್ಷ ಮಂಜುನಾಥ್, ಜಿ.ಪಂ. ಮಾಜಿ ಅಧ್ಯಕ್ಷೆ ಶಶಿಕಲಾ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ಹೆಚ್.ಅಂಜಿನಪ್ಪ, ಜಿ.ಪಂ. ಮಾಜಿ ಸದಸ್ಯ ಆರ್.ನರಸಿಂಹರಾಜ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ನಂದಿನಿಗೌಡ, ಕೆಪಿಸಿಸಿ ಕೋ ಆರ್ಡಿನೇಟರ್‌ಜಿ.ಎಸ್.ಕುಮಾರ್‌ಗೌಡ, ಸೈಯದ್ ಖುದ್ದೂಸ್, ಎನ್.ಡಿ. ಕುಮಾರ್ ನರಸಿಂಹಮೂರ್ತಿ, ನಾಮ ನಿರ್ದೇಶಕ ಸದಸ್ಯ ಟಿ.ನರಸಿಂಹಮೂರ್ತಿ. ಆರ್.ಶಿವಣ್ಣ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252