Chitradurga news|nammajana.com|8-12-2024
ನಮ್ಮಜನ.ಕಾಂ, ಚಿತ್ರದುರ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ನಿರ್ದೇಶನಾಲಯದಿಂದ 2024-25ನೇ ಸಾಲಿನ (Application Invitation) ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2023ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ವಾಲ್ಮೀಕಿ ಜಾತ್ರೆ ಯಶಸ್ವಿಗೆ ಸಹಕಾರ: ವಾಲ್ಮೀಕಿ ಶ್ರೀ | Valmiki Jatre
ಆಸಕ್ತ ಕ್ರೀಡಾಪಟುಗಳು ಅರ್ಜಿಗಳನ್ನು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಕಚೇರಿಯಿಂದ ಇದೇ ಡಿ.19 ರ ಒಳಗಾಗಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಇದೇ ಡಿ.20ರೊಳಗಾಗಿ ಕಚೇರಿಗೆ ಸಲ್ಲಿಸಲು ತಿಳಿಸಿದೆ. ಕೊನೆಯ (Application Invitation) ದಿನಾಂಕದ ನಂತರ ಬರುವ ಅರ್ಜಿಗಳನ್ನು ಪ್ರೋತ್ಸಾಹಧನಕ್ಕೆ ಪರಿಗಣಿಸಲಾಗುವುದಿಲ್ಲ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.