Chitradurga news|nammajana.com|12-12-2024
ನಮ್ಮಜನ.ಕಾಂ, ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿಗಳಾದ (Nijalingappa house) ದಿ.ಎಸ್.ನಿಜಲಿಂಗಪ್ಪನವರು ವಾಸವಿದ್ದ ಮನೆಯನ್ನು ಸರ್ಕಾರದ ವತಿಯಿಂದ ಖರೀದಿ ಮಾಡಿ ಸಂರಕ್ಷಣೆ ಮಾಡುವ ಸಂಬಂಧ ಹಿಂದೆ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನದ ಮೊತ್ತ ರೂ.4,18,49,016 ಗಳಿಗೆ ಖರೀದಿ ಮಾಡಲಾಗಿದೆ.
ಮಾಜಿ ಮುಖ್ಯಮಂತ್ರಿಗಳಾದ ದಿ.ಎಸ್.ನಿಜಲಿಂಗಪ್ಪನವರ (Nijalingappa house) ವಾರಸುದಾರರಿಂದ ಕರ್ನಾಟಕ ರಾಜ್ಯ ಸರ್ಕಾರದ ಪರವಾಗಿ ರಾಜ್ಯಪಾಲರ ಹೆಸರಿಗೆ 2024ರ ಡಿ.10ರಂದು ಖರೀದಿ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.