Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಮೈಕ್ರೋ ಫೈನಾನ್ಸ್ ಅವರು ನಿಮಗೆ ಕಿರುಕುಳ ಕೊಟ್ಟರೆ ಸಹಾಯವಾಣಿಗೆ ಕರೆ ಮಾಡಿ | Microfinance Harassment
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಮೈಕ್ರೋ ಫೈನಾನ್ಸ್ ಅವರು ನಿಮಗೆ ಕಿರುಕುಳ ಕೊಟ್ಟರೆ ಸಹಾಯವಾಣಿಗೆ ಕರೆ ಮಾಡಿ | Microfinance Harassment
ಇಂದಿನ ಸುದ್ದಿ

ಮೈಕ್ರೋ ಫೈನಾನ್ಸ್ ಅವರು ನಿಮಗೆ ಕಿರುಕುಳ ಕೊಟ್ಟರೆ ಸಹಾಯವಾಣಿಗೆ ಕರೆ ಮಾಡಿ | Microfinance Harassment

Editor Nammajana
Last updated: 5 February 2025 4:29 PM
By Editor Nammajana 6 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|5-2-2025

ನಮ್ಮಜನ.ಕಾಂ, ಚಿತ್ರದುರ್ಗ: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು,ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ (Microfinance Harassment) ಲೇವಾದೇವಿದಾರರು,ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ ದಬ್ಬಾಳಿಕೆ,ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದೌರ್ಜನ್ಯ ತಡೆಗೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ.

ತುರ್ತು ವೈದ್ಯಕೀಯ ಚಿಕಿತ್ಸೆ, ಮಕ್ಕಳ ವಿದ್ಯಾಭ್ಯಾಸ, ಮದುವೆ ಇನ್ನಿತರ ಖರ್ಚಿಗಾಗಿ ತುರ್ತಾಗಿ ಕೈ ಸಾಲ ಪಡೆಯುವ ಪದ್ಧತಿ ರೂಢಿಯಲ್ಲಿದೆ.

ಬಹುತೇಕರು ಪಡೆದ ಸಾಲವನ್ನು ವಾಪಸ್ಸು ನೀಡುತ್ತಾರೆ. ಆದರೆ ಕೆಲವು ವ್ಯಕ್ತಿಗಳು ಸಾಮಾಜಿಕ,ವೈಯಕ್ತಿಕ ಅಥವಾ ಉತ್ಪಾದಕವಲ್ಲದ ಕಾರ್ಯಗಳಿಗಾಗಿ ಹಣ ಖರ್ಚು (Microfinance Harassment) ಮಾಡುವುದರಿಂದ, ಮರುಪಾವತಿ ಕ್ಷಮತೆ ಕಡಿಮೆ ಇರುತ್ತದೆ.

ಇಂತಹ ಸಂದರ್ಭಗಳಲ್ಲಿ ಸಾಲ ನೀಡಿದವರು ಮರು ವಸೂಲಿಗಾಗಿ ಒತ್ತಾಯಿಸುತ್ತಾರೆ.ಕೆಲವೆಡೆ ಇದು ಕಿರುಕುಳವಾಗಿ ಬೆಳೆಯುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ:

ಕಳೆದ ಜನವರಿ 25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕರ್ನಾಟಕ ವಲಯದ ಅಧ್ಯಕ್ಷರು, ಭಾರತೀಯ ರಿಸರ್ವ ಬ್ಯಾಂಕ್ (RBI)  ನ ಪ್ರಾಂತೀಯ ನಿರ್ದೇಶಕರು, ಹಾಗೂ ಸಾ-ಧನ್ (SA-DHAN), ಎಕೆಎಂಐ,ಎಂಎಎಫ್‍ಐಎನ್ ಮತ್ತು ಪ್ರಮುಖ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪ್ರತಿನಿಧಿಗಳು, ರಾಜ್ಯಮಟ್ಟದ ಬ್ಯಾಂಕರುಗಳ ಸಮಿತಿ ಸಂಚಾಲಕರು, ಅಧಿಕಾರಿಗಳು , ಪೊಲೀಸ್, ಕಂದಾಯ, ಸಹಕಾರ ಹಾಗೂ ಆರ್ಥಿಕ ಇಲಾಖೆಯ (Microfinance Harassment) ಅಧಿಕಾರಿಗಳನ್ನೊಳಗೊಂಡ ಸಭೆ ನಡೆಸಿ. ಕಿರುಕುಳವನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ದೇಶನ ನೀಡಿದ್ದಾರೆ.

ಕರ್ನಾಟಕದ ಅಧಿನಿಯಮಗಳು:

ಕರ್ನಾಟಕ ಲೇವಾದೇವಿದಾರರ ಅಧಿನಿಯಮ-1961 ಅಡಿಯಲ್ಲಿನ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ. ಈ ಅಧಿನಿಯಮದಡಿಯಲ್ಲಿ 2024ರ ಡಿಸೆಂಬರ್ 31 ರವರೆಗೆ 20,425 ಸಂಸ್ಥೆಗಳು ನೋಂದಣಿಯಾಗಿವೆ. ಅದರಲ್ಲಿ 6590 ಲೇವಾದೇವಿದಾರರು, 6772 ಪಾನ್ ಬ್ರೋಕರ್‍ಗಳು, 7063 ಹಣಕಾಸಿನ ಸಂಸ್ಥೆಗಳು (Finance Corporation) ಇವೆ.

ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆ ನಿಷೇಧ ಕಾಯಿದೆ- 2004 ಪ್ರಕಾರ ಭದ್ರತಾ ಸಾಲಗಳಿಗೆ ವರ್ಷಕ್ಕೆ ಶೇ.14 ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ ವರ್ಷಕ್ಕೆ ಗರಿಷ್ಠ ಶೇ.16 ಗರಿಷ್ಠ ಬಡ್ಡಿ ದರವನ್ನು ಲೇವಾದೇವಿದಾರರಿಗೆ ನಿಗದಿಪಡಿಸಲಾಗಿದೆ.

ಇಂತಹ ಮಾಹಿತಿಗಳನ್ನು ಸಾರ್ವಜನಿಕವಾಗಿ ಫಲಕಗಳ ಮೂಲಕ ಪ್ರದರ್ಶಿದಲು ಸಂಸ್ಥೆಗಳು ಹಾಗೂ ಸಂಬಂಧಿಸಿದ ಕಚೇರಿಗಳಿಗೆ ತಿಳಿಸಲಾಗಿದೆ. ಸಾಲಗಾರರು ಇವುಗಳನ್ನು ಸೂಕ್ಷ್ಮವಾಗಿ ಗಮನಿಸಿ ಸಾಲ ಪಡೆಯುವ ಮುನ್ನ ಲೇವಾದೇವಿ ಸಂಸ್ಥೆಗಳ ಅಧಿಕೃತ ನೋಂದಣಿ ಪತ್ರ, ಬಡ್ಡಿದರ, ವಸೂಲಿ ಪ್ರಕ್ರಿಯೆ ಇತ್ಯಾದಿಗಳ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಈ (Microfinance Harassment) ಪ್ರಕ್ರಿಯೆಗಳಿಂದ ಸಾಲ ಮರುಪಾವತಿ ಸಂದರ್ಭದಲ್ಲಿನ ಕಿರುಕುಳ ತಪ್ಪಿಸಲು ಸಾಧ್ಯವಾಗುತ್ತದೆ.

ಸೂಕ್ಷ್ಮ ಹಣಕಾಸು (Micro finance) ಸಂಸ್ಥೆಗಳು ಎಂದರೇನು?:  3 ಲಕ್ಷ ರೂ.ವರೆಗೂ ಆದಾಯವಿರುವ ಸಾರ್ವಜನಿಕರಿಗೆ ಸಾಲವನ್ನು ಒದಗಿಸುವ ವ್ಯವಸ್ಥೆಯನ್ನು ಮೈಕ್ರೋ ಫೈನಾನ್ಸ್ ಎಂದು ಘೋಷಿಸಲಾಗಿದೆ. ಬ್ಯಾಂಕುಗಳಲ್ಲದ ಸಹಕಾರ ಸಂಘಗಳು, ಎನ್‍ಬಿಎಫ್‍ಸಿಗಳು, ಸರ್ಕಾರೇತರ ಸಂಸ್ಥೆಗಳು, ಟ್ರಸ್ಟ್‍ಗಳು, ಸಣ್ಣ ಅಂಗಡಿ ಮಾಲೀಕರು, ಇನ್ನಿತರರು ಸಾಲ ನೀಡುತ್ತಾರೆ.

ಸಹಕಾರಿ ಸಂಸ್ಥೆಗಳ ಮೇಲ್ವಿಚಾರಣೆಯನ್ನು ಸಹಕಾರ ಇಲಾಖೆ. ಬ್ಯಾಂಕ್ ಅಲ್ಲದ ಆರ್ಥಿಕ ಸಂಸ್ಥೆಗಳ (ಎನ್‍ಬಿಎಫ್‍ಸಿ) ಮೇಲ್ವಿಚಾರಣೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‍ಬಿಐ) ಮೂಲಕ ನೋಂದಣಿ ಮತ್ತು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಸಾ-ಧನ್  ಮತ್ತು ಮೈಕ್ರೋ ಫೈನಾನ್ಸ್ ಇಂಡಸ್ಟ್ರಿ ನೆಟ್‍ವರ್ಕ್ (MFIN)  ಸಂಸ್ಥೆಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI) ಸ್ವಯಂ ನಿಯಂತ್ರಣಾ ಸಂಸ್ಥೆಗಳನ್ನಾಗಿ (self-regulatory organisation) ನೇಮಿಸಿದೆ.ನಿಗದಿತ ಉತ್ತಮ ಲೇವಾದೇವಿ ಪದ್ದತಿಗಳನ್ನು ಅನುಷ್ಠಾನಗೊಳಿಸಲು ಈ ಸಂಸ್ಥೆಗಳನ್ನು ರಚಿಸಲಾಗಿದೆ.

ಕರ್ನಾಟಕ ರಾಜ್ಯದಲ್ಲಿ ಕೇವಲ 31 ಮೈಕ್ರೋ ಫೈನಾನ್ಸ್ ಇಂಡಸ್ಟ್ರಿಗಳು ಅಸ್ತಿತ್ವದಲ್ಲಿ ಇವೆ. ಈ 31 ಸಂಸ್ಥೆಗಳು ಅಸೋಸಿಯೇಷನ್ ಆಫ್ ಕರ್ನಾಟಕ ಮೈಕ್ರೋ ಫೈನಾನ್ಸ್ ಇನಸ್ಟಿಟ್ಯೂಷನ್ ಸದಸ್ಯತ್ವ ಪಡೆದಿವೆ. ರಾಜ್ಯದಲ್ಲಿ ಈ ಸಂಸ್ಥೆಗಳ 3090 ಶಾಖೆಗಳಿದ್ದು 37,967 ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿದ್ದಾರೆ. 1,09,88,332 ಖಾತೆಗಳಲ್ಲಿ 59,367.76 ಕೋಟಿ ರೂ. ಬಾಕಿ ಉಳಿದಿದೆ.

ನಿಯಮಗಳನ್ನು ಪಾಲಿಸದ ಹಣಕಾಸು ಸಂಸ್ಥೆಗಳ ಬಗ್ಗೆ ಮೇಲ್ವಿಚಾರಣಾ ಸಂಸ್ಥೆಗಳ ಮೂಲಕ ಭಾರತೀಯ ರಿಸರ್ವ್ ಬ್ಯಾಂಕಿಗೆ ವರದಿ ನೀಡಲಾಗುತ್ತದೆ , ಆರ್‍ಬಿಐ ಒಪ್ಪಿಗೆಯೊಂದಿಗೆ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗುತ್ತದೆ.

ದಬ್ಬಾಳಿಕೆಯ ಸಾಲ ಮರುಪಾವತಿ ಕ್ರಮದಿಂದ ಸಂರಕ್ಷಿಸಲು ಅಧಿಕೃತವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಮಾರ್ಗಸೂಚಿಗಳು: ಎಲ್ಲಾ ಎನ್‍ಬಿಎಫ್‍ಸಿ-ಎಂಎಫ್‍ಐಗಳು ಬಡ್ಡಿಯ ದರ, ಮರುಪಾವತಿಯ ಕಂತು ಮತ್ತು ಅಸಲು ಸಾಲ ಮುಂತಾದವುಗಳ ಬಗ್ಗೆ ಫ್ಯಾಕ್ಟ್ ಶೀಟ್‍ನಲ್ಲಿ ಸಾಲ ವಿತರಣೆಯ ಸಮಯದಲ್ಲಿ ಪ್ರತಿಯೊಬ್ಬ ಸಾಲಗಾರನಿಗೆ ಮಾಹಿತಿ ಒದಗಿಸಬೇಕು.

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅನುಸರಿಸಬೇಕಾದ ಕ್ರಮಗಳು:

ಮೈಕ್ರೋ ಫೈನಾನ್ಸ್ ಇನ್‍ಸ್ಟಿಟ್ಯೂಷನ್ (ಎಂಎಫ್‍ಐ), ಮನಿ ಲೆಂಡಿಂಗ್ ಏಜೆನ್ಸಿ ಅಥವಾ ಸಂಸ್ಥೆಯಿಂದ ನೀಡುವ ಎಲ್ಲಾ ಸಾಲಗಳ ಮಂಜೂರಾತಿ, ವಿತರಣೆಯ ಪ್ರಕ್ರಿಯೆಯಲ್ಲಿ ಈ ಅಂಶಗಳನ್ನು ಅನುಸರಿಸಬೇಕು:

ಸಾಲಗಾರನಿಗೆ ಸಾಲದ ನಿಯಮಗಳ ಬಗ್ಗೆ ಸ್ಥಳೀಯ ಭಾಷೆಯಲ್ಲಿ ಅಥವಾ ಆತನಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಬೇಕು.

ಸಾಲದ ಅರ್ಜಿಯಲ್ಲಿ ಷರತ್ತುಗಳ ಬಗ್ಗೆ ಮಾಹಿತಿ ನೀಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡಬೇಕು. ಯಾವ ದಾಖಲೆಗಳನ್ನು ನೀಡುವ ಅವಶ್ಯಕತೆ ಇದೆ ಎನ್ನುವ ಸೂಕ್ತ ಮಾಹಿತಿ ನೀಡಬೇಕು.

ನಗದು ಪುಸ್ತಕ, ಲೆಡ್ಜರ್ ಮತ್ತು ಇತರ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು.

ಸಾಲ ನೀಡಿದ ದಿನಾಂಕದಿಂದ ಏಳು ದಿನಗಳ ಒಳಗೆ ಸಾಲಗಾರನಿಗೆ ನಿಗದಿತ ನಮೂನೆಯಲ್ಲಿ ಸಾಲದ ಮೊತ್ತ ,ನೀಡಿದ ದಿನಾಂಕ ಮತ್ತು ಅವಧಿಯ ಮುಕ್ತಾಯ, ಸಂಸ್ಥೆಯ ಕಾರ್ಯನಿರ್ವಾಹಕರ ಹೆಸರು ಮತ್ತು ವಿಳಾಸ, (Microfinance Harassment) ನಿಯಮಾನುಸಾರ ವಿಧಿಸಲಾಗುವ ಬಡ್ಡಿದರ ಸ್ಪಷ್ಟವಾಗಿರುವ ಲಿಖಿತ ದಾಖಲೆಯನ್ನು ತಲುಪಿಸಬೇಕು.

ಸಾಲಗಾರನು ಮಾಡುವ ಪಾವತಿಗೆ ಪ್ರತಿಯಾಗಿ ಸಹಿ ಮಾಡಿದ ರಶೀದಿ ನೀಡಬೇಕು. ಸಾಲಗಾರನ ಲಿಖಿತ ಬೇಡಿಕೆಯ ಮೇರೆಗೆ ಸಾಲಕ್ಕೆ ಸಂಬಂಧಿಸಿದ ಯಾವುದೇ ದಾಖಲೆಯ ನಕಲನ್ನು ನೀಡಬೇಕು.

ಸಾಲಗಾರರಿಂದ ಪಡೆದ ಭದ್ರತೆಯನ್ನು ಸ್ಪಷ್ಟವಾಗಿ ತಿಳಿಸಬೇಕು. ಜನಸಾಮಾನ್ಯರು ಈ ವಿಧಾನಗಳ ಬಗ್ಗೆ ತಿಳುವಳಿಕೆ ಹೊಂದಿರಬೇಕು. ತಮ್ಮ ಅಧಿಕೃತ ಹಕ್ಕುಗಳು,ಬಾಧ್ಯತೆಗಳ ಬಗ್ಗೆ ಖಚಿತ ಪಡಿಸಿಕೊಂಡ ನಂತರ ಸಾಲ ತೆಗೆದುಕೊಳ್ಳಬೇಕು.

ನಿಗದಿತ ನಮೂನೆಯಲ್ಲಿ ಸಾಲದ ಮೊತ್ತ ,ನೀಡಿದ ದಿನಾಂಕ ಮತ್ತು ಅವಧಿಯ ಮುಕ್ತಾಯ, ಸಂಸ್ಥೆಯ ಕಾರ್ಯನಿರ್ವಾಹಕರ ಹೆಸರು ಮತ್ತು ವಿಳಾಸ, ನಿಯಮಾನುಸಾರ ವಿಧಿಸಲಾಗುವ ಬಡ್ಡಿದರ ಸ್ಪಷ್ಟವಾಗಿರುವ ಲಿಖಿತ ದಾಖಲೆಯನ್ನು ತಲುಪಿಸಬೇಕು.

ಸಾಲಗಾರನು ಮಾಡುವ ಪಾವತಿಗೆ ಪ್ರತಿಯಾಗಿ ಸಹಿ ಮಾಡಿದ ರಶೀದಿ ನೀಡಬೇಕು.

ಸಾಲಗಾರನ ಲಿಖಿತ ಬೇಡಿಕೆಯ ಮೇರೆಗೆ ಸಾಲಕ್ಕೆ ಸಂಬಂಧಿಸಿದ ಯಾವುದೇ ದಾಖಲೆಯ ನಕಲನ್ನು ನೀಡಬೇಕು. ಸಾಲಗಾರರಿಂದ ಪಡೆದ ಭದ್ರತೆಯನ್ನು ಸ್ಪಷ್ಟವಾಗಿ ತಿಳಿಸಬೇಕು.

ಜನಸಾಮಾನ್ಯರು ಈ ವಿಧಾನಗಳ ಬಗ್ಗೆ ತಿಳುವಳಿಕೆ ಹೊಂದಿರಬೇಕು. ತಮ್ಮ ಅಧಿಕೃತ ಹಕ್ಕುಗಳು,ಬಾಧ್ಯತೆಗಳ ಬಗ್ಗೆ ಖಚಿತ ಪಡಿಸಿಕೊಂಡ ನಂತರ ಸಾಲ ತೆಗೆದುಕೊಳ್ಳಬೇಕು.

ಸ್ವಸಹಾಯ ಗುಂಪುಗಳಲ್ಲಿ ಸಾಲ: ಮಹಿಳಾ ಸ್ವ-ಸಹಾಯ ಗುಂಪುಗಳಿಂದ ಹಲವು ಕಡೆ ಬಳಕೆ ಸಾಲವನ್ನು (Consumption Loan)  ಪಡೆಯುವ ವ್ಯವಸ್ಥೆ ಇದೆ.

ಇವುಗಳಲ್ಲಿ ಶೇ. 99 ರಷ್ಟು ಯಶಸ್ವಿಯಾಗಿ ಮರುಪಾವತಿ ಕೂಡ ಆಗುತ್ತವೆ.

ಬ್ಯಾಂಕುಗಳಲ್ಲಿ ಇರುವಂತೆ ದಾಖಲಾತಿ ಒದಗಿಸುವ, ಜಾಮೀನು ನೀಡುವ ಹಾಗೂ ತಮ್ಮ ಆಸ್ತಿಗಳ ಅಡಮಾನ ಮಾಡುವ ಕ್ಲಿಷ್ಟ ವಿಧಾನ ಇಲ್ಲಿರುವುದಿಲ್ಲ. ಸರಳ ವಿಧಾನ ಅನುಸರಿಸಿ ಸಾಲ ಸಿಗುವುದರಿಂದ ಜನರು ಇಂತಹ ವ್ಯವಸ್ಥೆಗಳಿಗೆ ಹೆಚ್ಚಾಗಿ ಮೊರೆ ಹೋಗುತ್ತಾರೆ.

ಇದನ್ನೂ ಓದಿ: Child Torture | ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ ದಿನವೇ ಗಂಡನ ಮೇಲಿನ ಕೋಪಕ್ಕೆ ಮಗುವಿಗೆ ಬರೆ ಹಾಕಿದ ತಾಯಿ

ಸಹಾಯವಾಣಿ: (Microfinance Harassment)

ಬಡಜನರ ಅವಶ್ಯಕತೆಯನ್ನು ಬಂಡವಾಳ ಮಾಡಿಕೊಳ್ಳುವ ಕೆಲವು ವ್ಯಕ್ತಿಗಳು,ಅನಧಿಕೃತ ಲೇವಾದೇವಿದಾರರು ಜನರ ತುರ್ತು ಅವಶ್ಯಕತೆಗೆ ಹಣ ನೀಡಿ, ಹೆಚ್ಚು ಬಡ್ಡಿ ವಿಧಿಸಿ ಶೋಷಣೆ ಮಾಡುತ್ತಾರೆ.ಅಂತಹ ವ್ಯಕ್ತಿಗಳು ಅಥವಾ ಸಂಸ್ಥೆಗಳ ವಿರುದ್ಧ ಸಾರ್ವಜನಿಕರು ಸಹಾಯವಾಣಿ ಸಂಖ್ಯೆಗಳಿಗೆ ದೂರು ನೀಡಬಹುದು. ಸೂಕ್ಷ್ಮ ಹಣಕಾಸು ಸಂಸ್ಥೆ (MFI) ,  ಮನಿ ಲೆಂಡಿಂಗ್ ಸಂಸ್ಥೆಗಳ ನಿಯಮ ಉಲ್ಲಂಘನೆಗಳ ಕುರಿತು (Microfinance Harassment) ಭಾರತೀಯ ರಿಸರ್ವ್ ಬ್ಯಾಂಕ್ (RBI)  ಸಹಾಯವಾಣಿ ಸಂಖ್ಯೆ 14448 ಗೆ ಮಾಹಿತಿ ನೀಡಬಹುದು. ರಾಜ್ಯ ಸರ್ಕಾರವು ಮೈಕ್ರೋ ಫೈನಾನ್ಸ್ ಸಾಲಗಾರರಿಗೆ ಎಲ್ಲ ರೀತಿಯ ಕಾನೂನು ರಕ್ಷಣೆ ನೀಡಲು ಕ್ರಮವಹಿಸಿದೆ ನೊಂದ ವ್ಯಕ್ತಿಗಳು ರಾಜ್ಯದ ಏಕೀಕೃತ ಸಹಾಯವಾಣಿ ಸಂಖ್ಯೆ: 112 ಅಥವಾ 1902 ಸಂಪರ್ಕಿಸಬಹುದು.

-ಡಾ.ಶಾಲಿನಿ ರಜನೀಶ್, ಮುಖ್ಯ ಕಾರ್ಯದರ್ಶಿಗಳು, ಕರ್ನಾಟಕ ಸರ್ಕಾರ

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Rain | ಸೋಮವಾರ ರಾತ್ರಿ ಸುರಿದ ಮಳೆಗೆ ಎಲ್ಲೆಲ್ಲಿ ಏನೆಲ್ಲ ಹಾನಿಯಾಗಿದೆ | ಇಲ್ಲಿನ ರಿಪೋರ್ಟ್

ಆಗಸ್ಟ್ 10ರಂದು ಟಿಬೇಟಿಯನ್ ಧರ್ಮ ಗುರು ದಲೈಲಾಮರವರ ಹುಟ್ಟುಹಬ್ಬ ಆಚರಣೆ | Madara Channaiah Swamiji

Retirement: ವಯೋನಿವೃತ್ತಿ ಹೊಂದಿದ ಮುಖ್ಯ ಲೆಕ್ಕಾಧಿಕಾರಿ ಸಿ.ಜಿ.ಶ್ರೀನಿವಾಸ್‍ಗೆ ಸನ್ಮಾನ

BL Venu: ಕುವೆಂಪು ವಿಶ್ವವಿದ್ಯಾಲಯ ಪಠ್ಯಕ್ಕೆ ಸಾಹಿತಿ ಬಿ.ಎಲ್.ವೇಣು ಕಥೆ ಸೇರ್ಪಡೆ

ವಾಣಿ ವಿಲಾಸ ಸಾಗರ ನೀರಿನ ಮಟ್ಟ ಹೆಚ್ಚಳ | ಎಷ್ಟು ಕ್ಯೂಸೆಕ್ಸ್ ನೀರು ಬಂದಿದೆ? | Vani Vilasa Sagara

Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article Child Torture | ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ ದಿನವೇ ಗಂಡನ ಮೇಲಿನ ಕೋಪಕ್ಕೆ ಮಗುವಿಗೆ ಬರೆ ಹಾಕಿದ ತಾಯಿ
Next Article ಚಿತ್ರದುರ್ಗ | ಜಿಲ್ಲಾ ಬಿಜೆಪಿಯಲ್ಲಿ ಬಣ ಬಡಿದಾಟ | ರಾತ್ರೋ ರಾತ್ರಿ ನೂತನ ಅಧ್ಯಕ್ಷರ ಘೋಷಣೆಗೆ ಬ್ರೇಕ್ |Chitradurga BJP
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Adike Rate | ಆಗಸ್ಟ್ 05| ಇಂದಿನ ಅಡಿಕೆ ರೇಟ್ ಎಷ್ಟಿದೆ?
ಅಡಿಕೆ ಧಾರಣೆ
Gold Rate | ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ
ಇಂದಿನ ಸುದ್ದಿ
ಹಿಮ್ಮುಖ ಚಲಿಸಿದ ಬಸ್: ಚಾಲಕ ಸಾವು : Bus
ಕ್ರೈಂ ಸುದ್ದಿ
Donkey wedding | ಮಳೆಗಾಗಿ ಗ್ರಾಮಸ್ಥರಿಂದ ಕತ್ತೆಗಳ ಮದುವೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?