
Chitradurga news|nammajana.com|10-2-2025
ನಮ್ಮಜನ.ಕಾಂ, ಚಳ್ಳಕೆರೆ: ಅಸಮಾನತೆ, ಅಸ್ಪೃಶ್ಯತೆ ಹಾಗೂ ಶೋಷಣೆ ತುಂಬಿದ ಸಮಾಜಕ್ಕೆ ಧಾರ್ಮಿಕ ಜಾಗೃತಿ ಮೂಡಿಸಲು ಈ ನಾಡಿನ ಶರಣರ ಸಂತತಿ ಸಾಕಷ್ಟು ಪ್ರಮಾಣದಲ್ಲಿ ಸಮಾಜದ ಎಲ್ಲಾ ವರ್ಗದಲ್ಲಿ ಆತ್ಮವಿಶ್ವಾಸ ತುಂಬುವ ಕಾರ್ಯ ಮಾಡಿದೆ. ಇಂದು ಪ್ರತಿಯೊಂದು ಸಮುದಾಯದಲ್ಲೂ ಸಾಮರಸ್ಯತೆ (Kayak Sharanara) ಮೂಡಿದೆ. ಅದಕ್ಕೆ ಮೂಲ ಕಾರಣ ಕಾಯಕಶರಣರ ಜಯಂತಿ ಎಂದು ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.
ಅವರು, ಸೋಮವಾರ ನಗರದ ತಾಲ್ಲೂಕು ಕಚೇರಿ ಸಬಾಂಗಣದಲ್ಲಿ ತಾಲ್ಲೂಕು ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಹಮ್ಮಿಕೊಂಡಿದ್ದ ಶ್ರೀ ಕಾಯಕ ಶರಣರ ಜಯಂತಿ ಕಾರ್ಯಕ್ರಮವನ್ನು ಶರಣರ ಭಾವಚಿತ್ರಕ್ಕೆ ಪುಪ್ಪನಮನ (Kayak Sharanara) ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಸಮಾಜದಲ್ಲಿ ನಾನಾ ವರ್ಗ, ನಾನಾ ಜಾತಿಗಳು ಇದ್ದರೂ ಸಹ ಯಾವುದೇ ಗೊಂದಲಕ್ಕೆ ಒಳಗಾಗದೆ ಬದುಕು ನಡೆಸಲಾಗುತ್ತಿದೆ. ಜನರಲ್ಲಿ ಆಳಾವಾಗಿ ಬೇರೂರಿದ್ದ ಕಹಿಭಾವನೆಗಳಿಗೆ ಶಿವಶರಣರು ತಮ್ಮ ವಚನಾಮೃತಗಳ ಮೂಲಕ ಬೆಳಕು ಚೆಲ್ಲಿದ್ದಾರೆ. ಕಾಯಕಶರಣರ ಜಯಂತಿ ಆಚರಣೆ ನಮ್ಮಲ್ಲಿ ಹೊಸ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ತಹಶೀಲ್ಧಾರ್ ರೇಹಾನ್ಪಾಷ, ತಾಲ್ಲೂಕು ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಶಾಸಕರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಸಲಾಗುತ್ತಿದೆ. ಸರ್ಕಾರ ಶಿವಶರಣರ ಎಲ್ಲಾ ಧಾರ್ಮಿಕ ವಿಚಾರಗಳನ್ನು ಇಂತಹ (Kayak Sharanara) ಕಾರ್ಯಕ್ರಮಗಳ ಮೂಲಕ ಜನರಿಗೆ ತಲುಪಿಸುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ. ಕಾಯಕ ಶರಣರ ಜಯಂತಿ ಜನರಲ್ಲಿ ಧಾರ್ಮಿಕ ಭಾವನೆಯನ್ನು ಸದೃಢಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂದರು.
ಇದನ್ನೂ ಓದಿ: ಕರ್ನಾಟಕ ಬಯಲಾಟ ಅಕಾಡೆಮೆ | ಕೆ.ಪಿ.ಭೂತಯ್ಯಗೆ ಇಂದು ಪ್ರಶಸ್ತಿ ಪ್ರಧಾನ | Bayalata Academy
ಇಒ ಎಚ್.ಶಶಿಧರ, ನಗರಸಭೆ ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷೆ ಸುಮ, ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಮಲ್ಲಿಕಾರ್ಜುನ್, ಸದಸ್ಯರಾದ ಬಿ.ಟಿ.ರಮೇಶ್ಗೌಡ, ಎಂ.ಜೆ.ರಾಘವೇಂದ್ರ, ಕೆ.ವೀರಭದ್ರಪ್ಪ, ನಾಮಿನಿ ಸದಸ್ಯರಾದ ಬಡಗಿಪಾಪಣ್ಣ, ಅನ್ವರ್ಮಾಸ್ಟರ್, ಆರ್.ವೀರಭದ್ರಪ್ಪ, ಜಿಲ್ಲಾ ಕೆಡಿಪಿ ಸದಸ್ಯ ಓ.ರಂಗಸ್ವಾಮಿ ತಾಲ್ಲೂಕು ಕೆಡಿಪಿ ಸದಸ್ಯ ಸುರೇಶ್ಕುಮಾರ್, ಗ್ಯಾರಂಟಿ ಸಮಿತಿ ತಾಲ್ಲೂಕು ಅಧ್ಯಕ್ಷ ಗದ್ದಿಗೆತಿಪ್ಪೇಸ್ವಾಮಿ, ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಟಿ.ಶಶಿಧರ, ದ್ಯಾವರನಹಳ್ಳಿತಿಪ್ಫೇಸ್ವಾಮಿ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
