
Chitradurga news|nammajana.com |21-02-2025
ನಮ್ಮಜನ.ಕಾಂ, ಚಳ್ಳಕೆರೆ: ರಾಜ್ಯಸರ್ಕಾರ ಹಲವಾರು ಯೋಜನೆಗಳ ಅನುಷ್ಠಾನದ ಮೂಲಕ ಅಭಿವೃದ್ದಿಪರ ಚಿಂತನೆ ನಡೆಸುತ್ತಿದ್ದು, ಇದಕ್ಕೆ ಪೂರಕವಾಗುವಂತೆ ಪಂಚಾಯಿತ್ ರಾಜ್ ಹಾಗೂ ಗ್ರಾಮೀಣಾಭಿವೃದ್ದಿ ಇಲಾಖೆ ಗ್ರಾಮಸ್ವರಾಜ್ (Kayaka bandhu) ಯೋಜನೆಯಡಿ ಕೈಗೊಂಡ ವಿವಿಧ ತರಬೇತಿಗಳಲ್ಲಿ ಪಾಲ್ಗೊಂಡ ಕಾಯಕ ಬಂಧುಗಳಿಗೆ ಪ್ರಶಸ್ತಿ ಪತ್ರವನ್ನು ವಿತರಿಸಿ ಅವರೂ ಮುಂದಿನ ದಿನಗಳಲ್ಲಿ ಉದ್ಯೋಗದತ್ತ ಹೆಜ್ಜೆ ಇಡಲು ಪ್ರೇರಣೆ ನೀಡುತ್ತಿದೆ ಎಂದು ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.
ಅವರು, ನಗರದ ತಾಲ್ಲೂಕುಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಕಾಯಕಬಂಧುಗಳಿಗೆ ತರಬೇತಿ ಪ್ರಶಸ್ತಿಪ್ರಮಾಣಪತ್ರವನ್ನು ವಿತರಿಸಿ ಮಾತನಾಡಿದರು.

ಮಹಿಳಾ ಸಮುದಾಯದ ಅಭ್ಯುದಯಕ್ಕೆ ಸರ್ಕಾರ ಬದ್ದವಾಗಿದೆ. ಸುಮಾರು ೩೦೦ಕ್ಕೂ ಹೆಚ್ಚು ಕಾಯಕಬಂಧುಗಳು ಒಂದು ಪ್ರಶಸ್ತಿಪ್ರಮಾಣಪತ್ರವನ್ನು ಪಡೆದಿದ್ದಾರೆ. ಪ್ರಮಾಣಪತ್ರ ಪಡೆದವರೆಲ್ಲರಿಗೂ ತಮ್ಮ ಉದ್ಯೋಗಾವಕಾಶ ಮತ್ತು ಉಜ್ವಲ ಅವಕಾಶದ ಬಗ್ಗೆ ಆತ್ಮವಿಶ್ವಾಸ ಮೂಡುತ್ತಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಶಶಿಧರ, ಪಂಚಾಯಿತ್ರಾಜ್ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆಯ ಗ್ರಾಮ ಸ್ವರಾಜ್ ಅಭಿಯಾನದಡಿ ನಾಗರಿಕ ಸಮಾಜಸೇವಾಸಂಸ್ಥೆಗಳ (Kayaka bandhu) ಒಕ್ಕೂಟದೊಂದಿಗೆ ಜ.೨೩ರಿಂದಫೆ.೧೫ ತನಕ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಪಂಚಾಯಿತಿಗಳ ಆಯ್ದ ಮಹಿಳೆಯರಿಗೆ ತರಬೇತಿ ನೀಡಲಾಗಿದೆ.
ತರಬೇತಿ ಅವಧಿಯಲ್ಲಿ ವಿಶೇಷ ತಾಂತ್ರಿಕತೆಯಿಂದ ಕೂಡಿದ ವಿಚಾರಗಳ ಬಗ್ಗೆ ತಜ್ಞರು ಮಾಹಿತಿ ನೀಡಿದ್ಧಾರೆ. ಗ್ರಾಮೀಣ ಭಾಗದ ಜನರಲ್ಲಿ ಈ ತರಬೇತಿ ಹೆಚ್ಚು ಆತ್ಮವಿಶ್ವಾಸವನ್ನು ಹುಟ್ಟುಹಾಕಿದೆ. ಸರ್ಕಾರಿ ಉದ್ಯೋವನ್ನು ಬಯಸಿಹೋಗುವ ಬದಲಾಗಿ ಇಂತಹ ತರಬೇತಿ ಮೂಲಕ ಸ್ವಾವಲಂಬಿಗಳಾಗಿ ಬದುಕನ್ನು ಸಹ ರೂಪಿಸಿಕೊಳ್ಳಲು ಸರ್ಕಾರ ಈ ಮೂಲಕ ನೆರವು ನೀಡುತ್ತಿದೆ ಎಂದರು.
ಇದನ್ನೂ ಓದಿ: ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ? | Dina Bhavishya
ಸಹಾಯಕಕಾರ್ಯನಿರ್ವಾಹಕ ಅಧಿಕಾರಿ ಸಂತೋಷ್, ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆತಿಪ್ಪೇಸ್ವಾಮಿ, (Kayaka bandhu) ತಾಲ್ಲೂಕು ಪಂಚಾಯಿತಿ ಕೆಡಿಪಿಸದಸ್ಯರಾದ ಅಂಗಡಿರಮೇಶ್, ಸುರೇಶ್ಕುಮಾರ್, ನಗರಸಭಾ ಸದಸ್ಯ ರಮೇಶ್ಗೌಡ, ಶಶಿಧರ ಮುಂತಾದವರು ಭಾಗವಹಿಸಿದ್ದರು.
ಇದನ್ನೂ ಓದಿ: Library | ಮಕ್ಕಳ ಸ್ನೇಹಿ ಗ್ರಂಥಾಲಯ ನಿರ್ಮಿಸಿದ ಶಿಕ್ಷಕ
