
Chitradurga news|nammajana.com|26-02-2025
ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ಡಿಡಿಯುಜಿಕೆವೈ, ಜಿಲ್ಲಾ ಗ್ಯಾಂರಂಟಿ ಅನುಷ್ಠಾನ ಪ್ರಾಧಿಕಾರದ ವತಿಯಿಂದ ಮುಂಬರುವ ಮಾರ್ಚ್ 01ರಂದು ಬೆಳಿಗ್ಗೆ 9ಕ್ಕೆ (Chitradurga) ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಲಾಗಿದೆ.
ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಕೂಡಲೆ ಆನ್‍ಲೈನ್‍ನಲ್ಲಿ ನೊಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಉದ್ಯೋಗ ಮೇಳದಲ್ಲಿ ರಾಜ್ಯದ ಪ್ರತಿಷ್ಠಿತ ಕಂಪನಿಗಳು ಉದ್ಯೋಗ ನೀಡುವ ಸಲುವಾಗಿ ಭಾಗವಹಿಸಲಿವೆ. 18 ರಿಂದ 35 ವರ್ಷದ ವಯೋಮಿತಿಯ, ವಿವಿಧ ವಿದ್ಯಾರ್ಹತೆಗಳನ್ನು ಹೊಂದಿರುವ ನಿರುದ್ಯೋಗ ಯುವಕ-ಯುವತಿಯರು ಆನ್‍ಲೈನ್‍ನಲ್ಲಿ ಕಡ್ಡಾಯವಾಗಿ ನೊಂದಣಿ ಮಾಡಿಕೊಂಡು, ಉದ್ಯೋಗ ಮೇಳದಲ್ಲಿ ಭಾಗವಹಿಸ ಬಹುದಾಗಿದೆ.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯ ನೂತನ AC ಆಗಿ ಮಹಿಬೂಬ್ ಜಿಲಾನ್ ನೇಮಕ | Assistant Commissioner
ನೊಂದಣಿಗಾಗಿ ಜಿಲ್ಲಾ ಅಧಿಕೃತ ವೆಬ್‍ಸೈಟ್ ಹಾಗೂ ಜಾಹೀರಾತಿನಲ್ಲಿ ನೀಡಲಾಗಿರುವ ಗೂಗಲ್ ಫಾರ್ಮ್ ಲಿಂಕ್: https://forms.gle/
