
Chitradurga news|nammajana.com|14-03-2025
ನಮ್ಮಜನ.ಕಾಂ, ಚಿತ್ರದುರ್ಗ: ವಿಧಾನಸಭೆಯ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಅಪಘಾತಕ್ಕೀಡಾಗಿದ್ದು, ಅವರ ಸ್ಥಿತಿ (Rudrappa Lamani) ತೀರ (Chitradurga) ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪದಲ್ಲಿ ಲಮಾಣಿ ಅವರಿಗೆ ಸ್ಕೂಟರ್ ಡಿಕ್ಕಿಯಾಗಿದ್ದು, (Chitradurga) ಗಂಭೀರಗವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಸ್ವಗ್ರಾಮಕ್ಕೆ ತೆರಳುವಾಗ ಮಾರ್ಗಮಧ್ಯ, ಮೂತ್ರ ವಿಸರ್ಜನೆಗಾಗಿ ಕಾರಿನಿಂದ ಲಮಾಣಿ ಅವರು ಇಳಿದಾಗ ಅದೇ ವೇಳೆ ಬಂದಂತಹ ಸ್ಕೂಟರ್ ಡಿಕ್ಕಿ ಹೊಡೆದಿದೆ. ಆಗ ಅವರ ತಲೆ, ಕೈ, ಕಾಲುಗಳಿಗೆ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವವಾಗಿದೆ.
ಇದನ್ನೂ ಓದಿ: Chitradurga | ಚಿತ್ರದುರ್ಗದ ಬಿಸಿಲಿಗೆ ತತ್ತರಿಸಿದ ಜನ, ಆರೋಗ್ಯ ಇಲಾಖೆ ಮಾರ್ಗಸೂಚಿ ಪಾಲಿಸಿ
ಕೂಡಲೇ ಲಮಾಣಿ ಅವರನ್ನು ಹಿರಿಯೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ (Chitradurga) ಎಸ್ಎಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
