Chitradurga news|nammajana.com|26-03-2025
ನಮ್ಮಜನ.ಕಾಂ, ಚಿತ್ರದುರ್ಗ: ರೈತರ ಸಮಸ್ಯೆಗಳ ಪರಿಹಾರಕ್ಕೆ (CCTV installation) ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ರೈತರ ಸಭೆಯಲ್ಲಿ ಅವರು ಮಾತನಾಡಿದರು.

ಬೆಸ್ಕಾಂ, ಕೆಪಿಟಿಸಿಎಲ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳನ್ನು ಒಳಗೊಂಡಂತೆ ಇಲಾಖೆವಾರು ರೈತರ ಸಮಸ್ಯೆಗಳನ್ನು ಪಟ್ಟಿಮಾಡಿಕೊಂಡು, ಇಲಾಖೆ ಮುಖ್ಯಸ್ಥರ ಸಮ್ಮುಖದಲ್ಲಿ ರೈತರ ಸಮಸ್ಯೆ (CCTV installation) ಬಗೆಹರಿಸಲಾಗುವುದು. ರೈತರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಯತ್ನ ಮಾಡಲಾಗುವುದು ಎಂದು ಹೇಳಿದರು.
ಹೂವಿನ ಮಾರುಕಟ್ಟೆಯಲ್ಲಿ ಸಿ.ಸಿ ಟಿವಿ ಅಳವಡಿಸಿ:
ಎಪಿಎಂಸಿ ಆವರಣದ ಹೂವಿನ ಮಾರುಕಟ್ಟೆಯಲ್ಲಿ ಹೂವು ಅಳತೆಯಲ್ಲಿ ರೈತರಿಗೆ ಮೋಸವಾಗದಂತೆ ಹೆಚ್ಚಿನ ಸಿ.ಸಿ ಟಿವಿ ಕ್ಯಾಮೆರಾ ಅಳವಡಿಸಬೇಕು, ಜೊತೆಗೆ ಮೇಲ್ವಿಚಾರಣೆಗಾಗಿ ಎಪಿಎಂಸಿ ಸಿಬ್ಬಂದಿ ನೇಮಿಸಬೇಕು ಎಂದು ಎಪಿಎಂಸಿ (CCTV installation) ಕಾರ್ಯದರ್ಶಿ ಕೃಷ್ಣಪ್ಪ ಅವರಿಗೆ ಸೂಚನೆ ನೀಡಿದರು.
ರೈತರ ಜೀವನಾಡಿ ಎಪಿಎಂಸಿಗಳು, ರೈತರಿಗೆ ಮೋಸವಾದರೆ ನಿರ್ಧಾಕ್ಷಿಣ್ಯವಾಗಿ ಕ್ರಮವಹಿಸಬೇಕು. ಯಾರಿಗೂ ಹೆದರುವ ಅಗತ್ಯವಿಲ್ಲ. ನಿಸ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಎಪಿಎಂಸಿಯಲ್ಲಿ ಯಾವುದೇ ದೂರುಗಳು ಬಾರದಂತೆ ಕಾರ್ಯನಿರ್ವಹಿಸಬೇಕು ಎಂದು ಎಪಿಎಂಸಿ ಕಾರ್ಯದರ್ಶಿಗೆ ಸೂಚಿಸಿದರು.
ಕಳೆದ 25 ವರ್ಷದಿಂದಲೂ ಎಪಿಎಂಸಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಹೂವಿನ ಮಾರುಕಟ್ಟೆಯಲ್ಲಿ ಸಮಸ್ಯೆಗಳು ಇದ್ದರೆ ಲಿಖಿತವಾಗಿ ದೂರು ನೀಡಿದರೆ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಎಪಿಎಂಸಿ ಕಾರ್ಯದರ್ಶಿ ಕೃಷ್ಣಪ್ಪ ತಿಳಿಸಿದರು.
ಇಲಾಖಾವಾರು ರೈತರ ಸಮಸ್ಯೆಗಳನ್ನು ಪಟ್ಟಿ ಮಾಡಿ ರೈತರ ಸಮಸ್ಯೆ ಪರಿಹಾರ ಸಂಬಂಧ ಯುಗಾದಿ ಹಬ್ಬದ ನಂತರ ಸಭೆಯ ದಿನಾಂಕ ನಿಗದಿಪಡಿಸುವಂತೆ ಅಪರ ಜಿಲ್ಲಾಧಿಕಾರಿ (CCTV installation) ಬಿ.ಟಿ.ಕುಮಾರಸ್ವಾಮಿ ಅವರು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ: Dina Bhavishya | ದಿನ ಭವಿಷ್ಯ, ಇವತ್ತು ಹೇಗಿದೆ ದಿನ
ಸಭೆಯಲ್ಲಿ ಚಿತ್ರದುರ್ಗ ಉಪವಿಭಾಗ ಪೊಲೀಸ್ ಉಪಾಧೀಕ್ಷಕ ಪಿ.ಕೆ.ದಿನಕರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್, ರೈತ ಮುಖಂಡರಾದ ಹಂಪಯ್ಯನಮಾಳಿಗೆ ಧನಂಜಯ, (CCTV installation) ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ, ಕೆ.ಪಿ.ಭೂತಯ್ಯ, ಲಕ್ಷ್ಮಿಕಾಂತ್, ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಸೇರಿದಂತೆ ಮತ್ತಿತರರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252