Chitradurga news|nammajana.com|29-3-2025
ನಮ್ಮಜನ.ಕಾಂ, ಚಿತ್ರದುರ್ಗ: ಟಿಟಿ ವಾಹನ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು (Accident) ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಯುಗಾದಿ ಹಬ್ಬಕ್ಕೆ ಎಂದು ಮನೆಗೆ ತೆರೆಳುತ್ತಿದ್ದ ಮೂವರು ಮಸಣಕ್ಕೆ ಸೇರಿದ್ದಾರೆ.
ಯುಗಾದಿ ಹಬ್ಬದ ಹಿನ್ನಲೆ ಒಂದೇ ಕುಟುಂಬದ 8 ಜನ (Accident) ಟಿಟಿಯಲ್ಲಿ ಸ್ವಗ್ರಾಮವಾದ ಚಳ್ಳಕೆರೆ ತಾಲ್ಲೂಕಿನ ತಿಮ್ಮನಹಳ್ಳಿ ಗ್ರಾಮಕ್ಕೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ಚಿತ್ರದುರ್ಗದ ಹೆಗ್ಗರೆ ಗೇಟ್ ಬಳಿ ಲಾರಿ ಮತ್ತು ಟಿಟಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು.

ಅಪಘಾತದಲ್ಲಿ ಒಂದೇ ಕುಟುಂಬದ ಮೂವರು (Accident) ಸಾವನ್ನಪ್ಪಿದ್ದಾರೆ. ಮೃತರನ್ನು ಕುಮಾರನಾಯ್ಕ(45), ಶ್ವೇತ (38), ಶಂಕ್ರಿ ಬಾಯಿ(65) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: Challakere | ಶಾಸಕ ಟಿ.ರಘುಮೂರ್ತಿ ಪರಿಶ್ರಮಕ್ಕೆ 261 ಹಳ್ಳಿಗಳು ಸೇರಿ ಎಲ್ಲೂ ನೀರಿನ ಹಾಹಾಕಾರವಿಲ್ಲ
ಮೃತರು ಕೂಲಿ ಕೆಲಸಕ್ಕೆ ಬೆಂಗಳೂರಿಗೆ ಬಂದಿದ್ದರು. ಹಬ್ಬಕ್ಕೆ ಎಂದು ಟಿಟಿ ಬಾಡಿಗೆ ಮಾಡಿಕೊಂಡು ಸ್ವಗ್ರಾಮಕ್ಕೆ ತೆರೆಳುತ್ತಿದ್ದ ವೇಳೆ ದುರಂತ ಸಂಭವಿಸಿದ್ದು ಘಟನಾ ಸ್ಥಳಕ್ಕೆ ಚಳ್ಳಕರೆ (Accident) ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252