Chitradurga news|nammajana.com|03-05-2025
ನಮ್ಮಜನ.ಕಾಂ, ಚಳ್ಳಕೆರೆ: ಆರ್ಥಿಕ ಕ್ಷೇತ್ರವನ್ನು ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಕಾರ್ಮಿಕರ ಪರಿಶ್ರಮ ಬಹಳಷ್ಟಿದೆ. ಕಾರ್ಮಿಕರು ತಮಗೆ ವಹಿಸಿದ ಜವಾಬ್ದಾರಿಯನ್ನು (Challakere) ಪೂರ್ಣಪ್ರಮಾಣದಲ್ಲಿ ಮಾಡುವ ಮೂಲಕ ಅನೇಕ ಉತ್ಪಾದನೆಗಳು ಸಕಾಲದಲ್ಲಿ ಮಾರುಕಟ್ಟೆಗೆ ಬರಲು ನೆರವಾಗಿದ್ಧಾರೆ. ಕಾರ್ಮಿಕರಿಗೆ ಹೆಚ್ಚಿನ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.
ಅವರು, ನಗರದ ಶಾಸಕ ಭವನದಲ್ಲಿ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯಕಟ್ಟಡ ನಿರ್ಮಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ತರಬೇತಿ ಶಿಬಿರದಲ್ಲಿ ಪಾಲ್ಗೊಂಡ ಸುಮಾರು ೧೫೨ ಫಲಾನುಭವಿಗಳಿಗೆ ಸುರಕ್ಷಿತ ಕಿಟ್ ವಿತರಿಸಿ ಮಾತನಾಡಿದರು.

ಕಾರ್ಮಿಕ ಇಲಾಖೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಮುಂದಾಗಬೇಕು.ಕಾರ್ಮಿಕರು ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುವ ಪ್ರತಿಯೊಬ್ಬ ಕಾರ್ಮಿಕನೂ ನೊಂದಾವಣೆ ಮಾಡಿಸಿಕೊಂಡು ಕಾರ್ಡ್ ಪಡೆಯಬೇಕು. ಕಾರ್ಮಿಕ ಇಲಾಖೆ ಕಾರ್ಮಿಕರಿಗಾಗಿ ನಿರೂಪಿಸಿದ ವಿವಿಧ (Challakere) ಸೌಲಬ್ಯಗಳನ್ನು ಕಾರ್ಮಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಕಾರ್ಮಿಕ ಅಧಿಕಾರಿ ಕುಸುಮ ಮಾತನಾಡಿ, ಪ್ರಸ್ತುತ ತಾಲ್ಲೂಕಿನಾದ್ಯಂತ ಈಗಾಗಲೇ 35 ಸಾವಿರ ಕಾರ್ಮಿಕರು ಹೆಸರು ನೊಂದಾವಣೆ ಮಾಡಿಕೊಂಡಿದ್ಧಾರೆ. ನೊಂದಾವಣೆಯಿಂದ (Challakere) ದೂರ ಉಳಿದ ಕಾರ್ಮಿಕರನ್ನು ಪತ್ತೆಹಚ್ಚಿ ಅವರಿಗೂ ಇಲಾಖೆ ಕಾರ್ಡ್ ನೀಡಿ ಸೌಲಭ್ಯ ವ್ಯಪ್ತಿಗೆ ಒಳಪಡುವಂತೆ ಜಾಗ್ರತೆ ವಹಿಸಲಾಗುವುದು.
ಪ್ರಸ್ತುತ ತರಬೇತಿ ಪಡೆದ ೧೫೨ ಫಲಾನುಭವಿಗಳಿಗೆ ಪ್ರಭೂಧತಾ ಪ್ರವೇಟ್ ಖಾಸಗಿ ಕಂಪನಿ ಸುರಕ್ಷಣಾ ಸಲಕರಣೆ ಕಿಟ್‌ಗಳನ್ನು ನೀಡಿದೆ. ಅವುಗಳ ಸದುಪಯೋಗ ಪಡೆಯಲು ಕಾರ್ಮಿಕರಿಗೆ ಮನವಿ ಮಾಡಿದರು.
ಇದನ್ನೂ ಓದಿ: Chitradurga city | ಉಚಿತ ಮಕ್ಕಳ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ
ಪ್ರಭೂಧತಾ ಕಂಪನಿಯ ಯೋಜನಾ ಸಂಯೋಜಕ ಮಂಜುನಾಥ, ನಗರಸಭೆ ಅಧ್ಯಕ್ಷೆ ಆರ್.ಮಂಜುಳಾಪ್ರಸನ್ನಕುಮಾರ್, ಉಪಾಧ್ಯಕ್ಷ ಕವಿತಾಬೋರಯ್ಯ, ಸದಸ್ಯರಾದ ಸುಮಭರಮಣ್ಣ, ಶಿಲ್ಪಿಮುರುಳಿ, ರಮೇಶಗೌಡ, ಕೆ.ವೀರಭದ್ರಪ್ಪ, ಎಂ.ಜೆ.ರಾಘವೇAದ್ರ ಮುಂತಾದವರು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252