Chitradurga News | Nammajana.com |28-09-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಹಿರಿಯೂರು (accident) ತಾಲ್ಲೂಕಿನ ಐಮಂಗಲ ಉಪಾಧ್ಯ ಹೋಟೆಲ್ ಬಳಿ ಕೆ.ಎಸ್.ಆರ್.ಟಿ.ಸಿ. ಬಸ್ ಲಾರಿ ನಡುವೆ ಭೀಕರ ಅಪಘಾತ ನಡೆದಿದೆ.

ಇದನ್ನೂ ಓದಿ: journalists: ನಾಳೆ ಕಾರ್ಯನಿರತ ಪತ್ರಕರ್ತರಿಗಾಗಿ ಉಚಿತ ಹೃದಯ ರೋಗ ತಪಾಸಣೆ ಕಾರ್ಡ್ ವಿತರಣೆ
ಅಪಘಾತದಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನ ಹಿರಿಯೂರು ಹಾಗೂ ಚಿತ್ರದುರ್ಗದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೀಳಗಿಯಿಂದ ಬೆಂಗಳೂರಿಗೆ ಹೊರಟಿದ್ದ ಸರ್ಕಾರಿ ಬಸ್ ಐಮಂಗಲದ ಉಪಾಧ್ಯ ಹೋಟೆಲ್ ಬಳಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಇದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್ಸುನಲ್ಲಿದ್ದ ಚಾಲಕ ಮತ್ತು ನಿರ್ವಾಹಕ ಸೇರಿದಂತೆ 45 ಜನರಲ್ಲಿ ಸುಮಾರು 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.
ಸಂಸದರಿಂದ ಗಾಯಾಳುಗಳ ಭೇಟಿ:
ಸಂಸದರಾದ ಗೋವಿಂದ ಕಾರಜೋಳ, ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಮುಖಂಡರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಿದರು.
ಜಿಲ್ಲಾ ಆಸ್ಪತ್ರೆಯ ವೈದ್ಯರುಗಳಿಗೆ ಗಾಯಾಳುಗಳನ್ನು ಸರಿಯಾದ ರೀತಿಯಲ್ಲಿ ನೋಡಿಕೊಳ್ಳಿ ಉತ್ತಮವಾದ ಚಿಕಿತ್ಸೆ ನೀಡಿ, ಉತ್ತಮವಾದ ಔಷಧಿ ಕೋಡಿ ಎಂದುಸಂಸದರು ಸೂಚನೆ ನೀಡಿದರು.
ಇದನ್ನೂ ಓದಿ: Training: ಬ್ಯಾಂಕಿಂಗ್, ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿಗೆ ತರಬೇತಿ
ಬಿಜೆಪಿ ಖಂಜಾಚಿ ಮಾಧುರಿ ಗೀರಿಶ್, ಮುಖಂಡ ಡಾ.ಸಿದ್ದಾರ್ಥ ಗುಡಾರ್ಪಿ, ಮಾಜಿ ಅಧ್ಯಕ್ಷ ಎ.ಮುರಳಿ, ನಗರಸಭಾ ಸದಸ್ಯರಾದ ಸುರೇಶ್, ಶ್ರೀನಿವಾಸ್, ಮಾಜಿ ಸದಸ್ಯ ರವಿಶಂಕರ್, ನಗರಾಧ್ಯಕ್ಷ ಲೋಕೇಶ್, ಗ್ರಾಮಾಂತರ ಅಧ್ಯಕ್ಷ ಕೆ.ನಾಗರಾಜ್ ಉಪ್ಪೇರಿಗೆನಹಳ್ಳಿ, ಜಿಲ್ಲಾ ವಕ್ತಾರ ನಾಗರಾಜ್ ಬೇಂದ್ರೆ, ಛಲವಾದಿ ತಿಪ್ಪೇಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
