
Chitradurga news|Nammajana.com|5-7-2025
ನಮ್ಮಜನ.ಕಾಂ, ಚಿತ್ರದುರ್ಗ: ಖಾಸಗಿ ಬಸ್ಸು- ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಅಪಘಾತ ಬಳಿಕ ಖಾಸಗಿ ಬಸ್ಸಿನಲ್ಲಿ ಕಾಣಿಸಿಕೊಂಡ ಬೆಂಕಿ ಕೆನ್ನಾಲಿಗೆಯಿಂದ (Accident) ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿರುವ ಘಟನೆ ಚಿತ್ರದುರ್ಗ ಹೊರವಲಯದ ಮದಕರಿ ಪುರ ಬ್ರೀಡ್ಜ್ ಬಳಿ ಘಟನೆ ನಡೆದಿದೆ.
ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವು ಅನುಭವಿಸಿದ್ದು ಮೃತ ವ್ಯಕ್ತಿಯ ರಮೇಶ್ (47) ಬಚ್ಚಬೋರನಹಟ್ಟಿ ನಿವಾಸಿ ಎಂದು ತಿಳಿದು ಬಂದಿದೆ.

ದಾವಣಗೆರೆ ಕಡೆಯಿಂದ ಚಳ್ಳಕೆರೆ ಮೂಲಕ ಬೆಂಗಳೂರು ಕಡೆ ಹೋಗುತ್ತಿದ್ದ ಖಾಸಗಿ ಬಸ್ ನಲ್ಲಿ ಸುಮಾರು 40 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: Gold Rate | ಇಂದಿನ ಬಂಗಾರದ ಬೆಲೆಯಲ್ಲಿ ಏರಿಕೆ
ಬೆಂಕಿಯ ಕೆನ್ನಾಲಿಗೆಗೆ ನಡು ರಸ್ತೆಯಲ್ಲೆ ಹೊತ್ತಿ ಉರಿದ ಖಾಸಗಿ ಬಸ್ ಬೆಂಕಿ ನಂದಿಸಲು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ, ಬೆಂಕಿ ನಂದಿಸಲು ಹರಸಾಹಸ ಪಟ್ಟರು ಸ್ಥಳಕ್ಕೆ ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾರ್ ಬಂಡಾರೂ ಭೇಟಿ ನೀಡಿ ಮಾಹಿತಿ (Accident) ಸಂಗ್ರಹಿಸಿದ್ದು ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.