
Chitradurga News|Nammajana.com |05-07-2025
ಚಿತ್ರದುರ್ಗ: 2025-26ನೇ ಸಾಲಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಲು ಪರಿಶಿಷ್ಟ ಜಾತಿಯ ಕಾನೂನು ಪದವೀಧರ(law graduates)ರನ್ನು ಆಯ್ಕೆ ಮಾಡಲು, ಪರಿಶಿಷ್ಟ ಜಾತಿಯ ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ನಗರಸಭೆ | ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಸಂಬಂಧಪಟ್ಟ ಕಾನೂನು ಪದವೀಧರ(law graduates)ರು ಅರ್ಜಿಯನ್ನು ಇಲಾಖಾ ವೆಬ್‍ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾಜ ಕಲ್ಯಾಣ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಅಥವಾ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಮಾಹಿತಿ ಪಡೆಯಬಹುದಾಗಿದೆ.
ಷರತ್ತುಗಳು:
ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ದಿನಾಂಕಕ್ಕೆ ಕಾನೂನು ಪದವಿಯನ್ನು ಪಡೆದು 02 ವರ್ಷ ಮೀರಿರಬಾರದು. ತರಬೇತಿಯನ್ನು ಚಿತ್ರದುರ್ಗ ಜಿಲ್ಲೆಯಲ್ಲಿಯೇ ಪಡೆಯಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು, 40 ವರ್ಷ ಮೀರಿರಬಾರದು. ಆಯ್ಕೆ ಮಾಡಲಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಸರ್ಕಾರಿ ಆದೇಶ ರೀತ್ಯಾ ರೂ.10,000/- ಶಿಷ್ಯ ವೇತನ ನೀಡಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರಿ ವಕೀಲರು ಅಥವಾ 20 ವರ್ಷಗಳ ಕಾಲ ಕಡಿಮೆ ಇಲ್ಲದ ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ನ್ಯಾಯವಾದಿಗಳ ಬಳಿ ತರಬೇತಿ ಪಡೆಯುತ್ತೇವೆ ಎಂದು ಲಿಖಿತ ರೂಪದಲ್ಲಿ ತಿಳಿಸಿರಬೇಕು.
ಇದನ್ನೂ ಓದಿ: ಬೀದಿನಾಟಕ, ಜಾನಪದ ಸಂಗೀತ | ಕಲಾ ತಂಡಗಳಿಂದ ಅರ್ಜಿ ಆಹ್ವಾನ
ತರಬೇತಿ ಅವಧಿಯು 2 ವರ್ಷವಿದ್ದು ಮದ್ಯದಲ್ಲಿ ಬಿಡುವುದಿಲ್ಲ ಎಂದು ಅಥವಾ ಒಂದು ವೇಳೆ ಬಿಟ್ಟರೆ ತರಬೇತಿ ಅವಧಿಯಲ್ಲಿ ಪಡೆದ ಶಿಷ್ಯ ವೇತನವನ್ನು ಶೇ.10 ರಷ್ಟು ಬಡ್ಡಿಯೊಂದಿಗೆ ಸರ್ಕಾರಕ್ಕೆ ಮರುಪಾವತಿ ಮಾಡುವುದಾಗಿ ಮುಚ್ಚಳಿಕೆ ಬರೆದು ಕೊಡಬೇಕು.
ತರಬೇತಿಯ ಪಡೆಯುತ್ತಿರುವ ಅವಧಿಯಲ್ಲಿ ರಾಜ್ಯ ಮತ್ತು ಕೇಂರ ಸರ್ಕಾರದಲ್ಲಿ ನೌಕರಿ ಪಡೆದಲ್ಲಿ ಈ ನಿಯಮ ಅನ್ವಯಿಸುವುದಿಲ್ಲ.
ಆಯ್ಕೆಯಾದ ಅಭ್ಯರ್ಥಿಗಳು ಸುಳ್ಳು ಮಾಹಿತಿ ಸುಳ್ಳು ದಾಖಲೆಗಳನ್ನು ನೀಡಿ ಆಯ್ಕೆಯಾಗಿ ಶಿಷ್ಯ ವೇತನ ಪಡೆದರೆ, ಅಂತಹ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಪಡೆದ ಶಿಷ್ಯ ವೇತನವನ್ನು ಒಟ್ಟಿಗೆ 10% ರ ಬಡ್ಡಿಯೊಂದಿಗೆ ಸರ್ಕಾರಕ್ಕೆ ಹಿಂದಿರುಗಿಸಬೇಕು.
ತಪ್ಪಿದರೆ ಭೂ ಕಂದಾಯ ಬಾಕಿ ವಸೂಲಿಯಂತೆ ವಸೂಲಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿ ಆಯ್ಕೆ ಸಮಿತಿಯಲ್ಲಿ ಮಂಡಿಸಿ, ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು.
ಇದನ್ನೂ ಓದಿ: ಚಿಕ್ಕಗೊಂಡನಹಳ್ಳಿಯಲ್ಲಿ ಮೂರು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗೆ ಶಾಸಕ ಟಿ.ರಘುಮೂರ್ತಿ ಚಾಲನೆ
ವರ್ಷದ ಎಲ್ಲ ದಿನಗಳು (365) ಆನ್‍ಲೈನ್ ಮೂಲಕ ಅರ್ಜಿ ಸ್ವೀಕರಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.