Chitradurga News | Nammajana.com | 27-4-2024
ನಮ್ಮಜನ.ಕಾಂ.ಚಿತ್ರದುರ್ಗ :2024-25ನೇ ಸಾಲಿಗೆ ಕೃಷಿ ಕೋಟಾದಡಿ ರಾಜ್ಯದ ಕೃಷಿ ಹಾಗೂ ಕೃಷಿ ಸಂಬಂಧಿತ ವಿಶ್ವವಿದ್ಯಾನಿಲಯಗಳಿಗೆ ಸ್ನಾತಕ ಪದವಿಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ನಗರದ ಎ.ಪಿ.ಎಂ.ಸಿ ಆವರಣದ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಪ್ರಾಯೋಗಿಕ ತರಬೇತಿಯನ್ನು ಮೇ 8 ಮತ್ತು 9ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಕೃಷಿ ಪ್ರಾಯೋಗಿಕ ತರಬೇತಿಯನ್ನು ಈ ಹಿಂದೆ ಮೇ 6 ಮತ್ತು 7ರಂದು ನಡೆಸಲು ಉದ್ದೇಶಿಸಲಾಗಿತ್ತು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಕಾರಣದಿಂದ ಕೃಷಿ ಪ್ರಾಯೋಗಿಕ ತರಬೇತಿಯನ್ನು ಮೇ 8 ಮತ್ತು 9ಕ್ಕೆ ಮುಂದೂಡಲಾಗಿದೆ.

2024ರ ಮೇ 14ರಂದು 17 ಕೇಂದ್ರಗಳಲ್ಲಿ ನಿಗಧಿಯಾಗಿರುವ ಪ್ರಾಯೋಗಿಕ ಪರೀಕ್ಷೆ ಕುರಿತ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 2024ರ ಏಪ್ರಿಲ್ 6ರ ಪರಿಸ್ಕøತ ಅಧಿಸೂಚನೆಯ ಪ್ರತಿಯನ್ನು ಸಂಸ್ಥೆಯ ಆವರಣದಲ್ಲಿ ಪ್ರಕಟಿಸಲಾಗಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು.
ಇದನ್ನೂ ಓದಿ: ಕುಡಿಯುವ ನೀರಿನ ಸಮಸ್ಯೆಗೆ ಬೇಸತ್ತು ಗ್ರಾ.ಪಂ.ಬೀಗ ಹಾಕಿ ಅಡುಗೆ ಮಾಡಿದ ಮಹಿಳೆಯರು
ಹೆಚ್ಚಿನ ಮಾಹಿತಿಗಾಗಿ 9742455666 ಅಥವಾ 9448656231 ದೂರವಾಣಿ ಮೂಲಕ ಸಂಪರ್ಕಿಸಬಹುದು ಎಂದು ಐಎಟಿ ಸಂಸ್ಥೆಯ ಅಧ್ಯಕ್ಷ ಜಿ.ಸಿ.ರಂಗಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252