Chitradurga news| nammajana.com|20-12-2024
ನಮ್ಮಜನ.ಕಾಂ, ಚಿತ್ರದುರ್ಗ: ಡಾ.ಬಾಬಾ ಸಾಹೇಬ (Ambedkar) ಅಂಬೇಡ್ಕರ್ ಅವರ ಬಗ್ಗೆ ಮಾತನಾಡುವ ಯಾವ ನೈತಿಕ ಹಕ್ಕು ಕಾಂಗ್ರೆಸ್ ಪಕ್ಷದವರಿಗೆ ಇಲ್ಲ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ ಹೇಳಿದರು.
ಪತ್ರಿಕಾ ಹೇಳಿಕೆ ನೀಡಿರುವ ಅವರು ಅಂಬೇಡ್ಕರ್ ಅವರ ಜೀವಿತಾವಧಿಯ ಕಾಲದಲ್ಲಿ ಅವರನ್ನು ನಿರಂತರ ಮಾನಿಸಿ ಅಪ ಅವರ ಅರ್ಹತೆ, ವಿದ್ವತ್ತನ್ನು ಗೌರವಿಸದೇ ಅವರನ್ನು ರಾಜಕೀಯ ವಾಗಿ, ಸಾಮಾಜಿಕವಾಗಿ ತುಳಿದು ಅವರನ್ನು ಚುನಾವಣೆ ಯಲ್ಲಿ ಸೋಲಿಸಿ ಬಳಿಕ ಅವರನ್ನು (Ambedkar) ಸೋಲಿಸಿದವರಿಗೆ ಕಾಂಗ್ರೆಸ್ ಪಕ್ಷ ಪದ್ಮಭೂಷಣ ಗೌರವಿಸಿತ್ತು. ಕಾಂಗ್ರೆಸ್ ಶೋಷಿ ತರನ್ನು ಮತ ಬ್ಯಾಂಕ್ ಮಾಡಿ ಕೊಂಡು ಇದುವರೆಗೂ ಅಧಿ ಕಾರದ ಸವಿ ಅನುಭವಿಸುತ್ತಾ ಬಂದಿದೆ.

ಅಂಬೇಡ್ಕರ್ ಅಂತ್ಯ ಸಂಸ್ಕಾರಕ್ಕೆ ಜಾಗ ಕೊಡಲಿಲ್ಲ
ಅಂಬೇಡ್ಕರ್ ಅವರ ನಿಧನದ ನಂತರ ಅವರ ಪಾರ್ಥಿವ ಶರೀರ ಮಣ್ಣು ಮಾಡಲು ದೆಹಲಿಯಲ್ಲಿ ಕನಿಷ್ಠ ಅಡಿಯಜಾಗವನ್ನು ನೀಡದೆ ಮುಂಬೈಗೆ ಅವರದೇಹಸಾಗಿಸುವ ವ್ಯವಸ್ಥೆಯನ್ನೂ ಮಾಡದೆ ಅವ ರನ್ನು ತಾತ್ಸಾರವಾಗಿ ನೋಡಿ (Ambedkar) ಕೊಂಡಕಾಂಗ್ರೆಸ್ಸಿಗರಿಗೆ ಅಂಬೇಡ್ಕರ್ ಅವರ ಬಗ್ಗೆ (Ambedkar) ಮಾತನಾಡುವ ಯಾವ ನೈತಿಕ ಹಕ್ಕು ಇಲ್ಲ. ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಿ ಗೌರವಿಸಿದ ಹೆಗ್ಗಳಿಕೆ ಬೆಜೆಪಿಯದ್ದು. ಅಂಬೇಡ್ಕರ್ ಅವರ ಇತಿಹಾಸ ಮುಂದಿನ ಪೀಳಿಗೆಗೆ ತಿಳಿಯು ವಂತೆ ಸಂವಿಧಾನ ದಿನ ವನ್ನು ಆಚರಿಸುವ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದು ಬಿಜೆಪಿ.
ಇದನ್ನೂ ಓದಿ: Dina Bhavishya | ದಿನ ಭವಿಷ್ಯ 20 ಡಿಸೆಂಬರ್ 2024
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಕಾಂಗ್ರೆಸಿಗರು ಅಂದು ಅಂಬೇಡ್ಕರ್ ಅವರನ್ನು ಅವಮಾನಿಸಿ ಇಂದು ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಅಂಬೇಡ್ಕರ್ ಅವರ ಹೆಸರನ್ನು (Ambedkar) ಪಠಿಸುತ್ತಿರುವ ಕಾಂಗ್ರೆಸ್ಸಿಗರ ಗೋಮುಖ ವ್ಯಾಘ್ರತನವನ್ನು ಬಯಲು ಮಾಡುವ ನಿಟ್ಟಿನಲ್ಲಿ ಆಡಿದ ಮಾತುಗಳನ್ನು ತಿರುಚುವ ಮೂಲಕ ಅಪಪ್ರಚಾರ ನಡೆಸಿ ರಾಜಕೀಯ ಬಂಡವಾಳ ಮಾಡಿ ಕೊಳ್ಳಲು ಹೊರಟಿರುವ ಕಾಂಗ್ರೆ ಸಿಗರ ನಡೆ ನಾಚಿಕೆಗೇಡಿನ ತನದ ಪರಮಾವಧಿಯಾಗಿದೆ ಎಂದಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252