Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ವಿವಿಧ ಸೌಲಭ್ಯಕ್ಕೆ ವಿಕಲಚೇತನರಿಂದ ಅರ್ಜಿ ಆಹ್ವಾನ | Application for Disability Facility
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ವಿವಿಧ ಸೌಲಭ್ಯಕ್ಕೆ ವಿಕಲಚೇತನರಿಂದ ಅರ್ಜಿ ಆಹ್ವಾನ | Application for Disability Facility
ಇಂದಿನ ಸುದ್ದಿ

ವಿವಿಧ ಸೌಲಭ್ಯಕ್ಕೆ ವಿಕಲಚೇತನರಿಂದ ಅರ್ಜಿ ಆಹ್ವಾನ | Application for Disability Facility

Editor Nammajana
Last updated: 4 July 2024 11:46
By Editor Nammajana 2 Min Read
Share
SHARE

chitradurga news | nammajana.com | 4-7-2024

ನಮ್ಮಜನ.ಕಾಂ, ಚಿತ್ರದುರ್ಗ: 2024-25ನೇ ಸಾಲಿಗೆ ವಿಕಲಚೇತನ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆಯ 13 ಫಲಾನುಭವಿ ಆಧಾರಿತ ಯೋಜನೆಗಳನ್ನು (Application for Disability Facility) ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿದೆ. ಆದ್ದರಿಂದ ಜಿಲ್ಲೆಯ ವಿಕಲಚೇತನರು (ಅಂಗವಿಕಲರು) ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.ಇದೇ ಜುಲೈ 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಫಲಾನುಭವಿ ಆಧಾರಿತ ಯೋಜನೆಗಳು: (Application for Disability Facility)

ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ ಯೋಜನೆ, ಶಿಶು ಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ (ಎಂ.ಆರ್.ಡಬ್ಲ್ಯೂ ಮತ್ತು ವಿಆರ್‍ಡಬ್ಲ್ಯೂ) ಸಾಧನೆ ಯೋಜನೆ, ಪ್ರತಿಭೆ ಯೋಜನೆ, (Application for Disability Facility) ವೈದ್ಯಕೀಯ ಪರಿಹಾರ ನಿಧಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನೆ ಸಲಕರಣೆ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ ಹಾಗೂ ದೃಷ್ಠದೋಷ ಹೊಂದಿರುವ ವಿಕಲಚೇನರಿಗೆ ಬ್ರೈಲ್ ಕಿಟ್ ಯೋಜನೆ ಸೇರಿದಂತೆ ಒಟ್ಟು 13 ಯೋಜನೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: New Ration card | ಹೊಸ ರೇಷನ್ ಕಾರ್ಡ್ ಗೆ ಸರ್ವರ್ ಸಮಸ್ಯೆ | ಜನರ ಪರದಾಟಪರದಾಟ

ಅರ್ಹ ಫಲಾನುಭವಿಗಳು ಯೋಜನೆಗಳಿಗೆ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಸೇವಾಸಿಂಧು ಕೇಂದ್ರಗಳಲ್ಲಿ hhttps://sevasindhu.karnataka.gov.in/sevasindhu/departmentserviceskannada ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. (Application for Disability Facility) ಅರ್ಜಿ ಸಲ್ಲಿಸಿದ ಹಾರ್ಡ್ ಪ್ರತಿಯನ್ನು ಆಯಾ ತಾಲ್ಲೂಕಿನ, ತಾಲ್ಲೂಕು ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ, ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡಬ್ಲ್ಯೂ) ಗಳಿಗೆ ಸಲ್ಲಿಸಲು ಸೂಚಿಸಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ. (Application for Disability Facility)

ನಗರದ ಸ್ಟೇಡಿಯಂ ಹತ್ತಿರದ ಬಾಲಭವನ ಆವರಣದ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯ ದೂರವಾಣಿ ಸಂಖ್ಯೆ 08194-235284 ಹಾಗೂ ತಾಲ್ಲೂಕು ವಾರು ಎಂ.ಆರ್.ಡಬ್ಲ್ಯೂಗಳ ದೂರವಾಣಿ ಸಂಖ್ಯೆ ಚಿತ್ರದುರ್ಗ – 9880821934, ಚಳ್ಳಕೆರೆ – 9611266930, ಹಿರಿಯೂರು – 9902888901, 9902898901, ಹೊಳಲ್ಕೆರೆ – 9740030227, ಹೊಸದುರ್ಗ -9741829990, ಮೊಳಕಾಲ್ಮೂರು -9742725576 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು (Application for Disability Facility) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Application InvitationBeneficiary Based SchemeChitradurgaChitradurga DistrictChitradurga NewsDepartment of DisabilityDisability FacilityKannada Newskannada suddiMiscellaneous FacilityNammajana.comಅರ್ಜಿ ಆಹ್ವಾನಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಜಿಲ್ಲೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಫಲಾನುಭವಿ ಆಧಾರಿತ ಯೋಜನೆವಿಕಲಚೇತನ ಇಲಾಖೆವಿಕಲಚೇತನ ಸೌಲಭ್ಯವಿವಿಧ ಸೌಲಭ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article 20 ವರ್ಷ ಪೂರೈಸಿದ ವಾಹನಗಳ ನೊಂದಣಿ ರದ್ದು | ಯಾವೆಲ್ಲ ವಾಹನ ರದ್ದು | Deregistration of 20 year old vehicles
Next Article ವಿದ್ಯಾರ್ಥಿ ನಿಲಯ ಮತ್ತು ಆಶ್ರಮ ಶಾಲೆ ಪ್ರವೇಶಕ್ಕೆ ಅರ್ಜಿ | Ashram School
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?