Chitradurga news|nammajana.com|8-7-2024
ನಮ್ಮಜನ.ಕಾಂ, ಚಿತ್ರದುರ್ಗ: ಮಿಲಿಟರಿ ಪಿಂಚಣಿ ರಹಿತ ಕರ್ನಾಟಕದ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತು ಪಡಿಸಿ) (Application for Ex-Servicemen Child Benefit) ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಒಂದನೇ ತರಗತಿಯಿಂದ ಪಿ.ಯು.ಸಿ ಎರಡನೇ ವರ್ಷದವರೆಗೆ ಓದುವ ಮಕ್ಕಳಿಗೆ ಪುಸ್ತಕ ಅನುದಾನಕ್ಕಾಗಿ ಮತ್ತು ಡಿಗ್ರಿ, ಡಿಪ್ಲೊಮಾ ಜೆ.ಓ.ಸಿ, ವೃತ್ತಿಪರ (ಪ್ರೊಫೆಷನಲ್) ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯಲ್ಲಿ ಡೆಂಗ್ಯೂಜ್ವರ ಪಾಸಿಟಿವ್ ಎಷ್ಟು | ಸಾವು ಎಷ್ಟು | Dengue case Chitradurga

ಶುಲ್ಕ ರಹಿತ ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಿಂದ ಪಡೆದು ಭರ್ತಿ ಮಾಡಿದ (Application for Ex-Servicemen Child Benefit) ಅರ್ಜಿಗಳನ್ನು ಯಾವ ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವರೋ, ಆಯಾ ಜಿಲ್ಲೆಗೆ ಸಂಬಂಧಿತ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಗೆ ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗೆ
ಶಿವಮೊಗ್ಗ ಕಚೇರಿಯ ದೂರವಾಣಿ ಸಂಖ್ಯೆ 08182-220925 ಗೆ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ (Application for Ex-Servicemen Child Benefit) ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ಡಾ. ಸಿ.ಎ.ಹಿರೇಮಠ್ ತಿಳಿಸಿದ್ದಾರೆ.
ಇದನ್ನೂ ಓದಿ: ಹಿರಿಯೂರು | ಶಾಲೆಯಲ್ಲೇ ನೇಣು ಹಾಕಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ | student hanged Navodaya School
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252