Chitradurga News|Nammajana.com |13-6-2025
ನಮ್ಮಜನ.ಕಾಂ, ಚಿತ್ರದುರ್ಗ: 2025-26ನೇ ಸಾಲಿಗೆ ಯುಪಿಎಸ್‍ಸಿ, ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಹಾಗೂ ಕೆಪಿಎಸ್‍ಪಿ ಗ್ರೂಪ್ ಸಿ, ಆರ್‍ಆರ್‍ಬಿ ಮತ್ತು ಎಸ್‍ಎಸ್‍ಸಿ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆ ಮಾಡಲು ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 02 ಕೊನೆಯ ದಿನವಾಗಿದೆ.
ಇದನ್ನೂ ಓದಿ: Chitradurga ನೂತನ ಜಿಲ್ಲಾ ಸಮಾಜ ಕಲ್ಯಾಣಧಿಕಾರಿಯಾಗಿ ಬಿ.ಮಲ್ಲಿಕಾರ್ಜುನ್ ನೇಮಕ | Transfer

ಅರ್ಜಿಗಳನ್ನು ಸೇವಾಸಿಂಧು ವೆಬ್‍ಸೈಟ್ https://sevasindhu.karnataka.gov.in/sevasindhu/Departmentsservices ಈ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಲು ಸೂಚಿಸಲಾಗಿದೆ.
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು: ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ಸೇರಿದವಾಗಿರಬೇಕು. ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು.
ಅಭ್ಯರ್ಥಿಯ ವಯೋಮಿತಿ ಯುಪಿಎಸ್‍ಸಿ/ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಹಾಗೂ ಕೆಪಿಎಸ್‍ಸಿ ಗ್ರೂಪ್ ಸಿ ತರಬೇತಿಗೆ 21 ಹಾಗೂ 35 ವರ್ಷಗಳು ಮತ್ತು ಆರ್‍ಆರ್‍ಬಿ ಮತ್ತು ಎಸ್‍ಎಸ್‍ಸಿ ತರಬೇತಿಗೆ ಕನಿಷ್ಟ 18 ಹಾಗೂ ಗರಿಷ್ಟ 30 ವರ್ಷಗಳು ಮೀರಿರಬಾರದು.
ಇದನ್ನೂ ಓದಿ: ಜಿಲ್ಲಾಸ್ಪತ್ರೆ: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ
ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ. ಹಿಂದಿನ ಸಾಲಿನಲ್ಲಿ ಐಎಎಸ್, ಕೆಎಎಸ್ ತರಬೇತಿ ಪಡೆದ ಅಭ್ಯರ್ಥಿಗಳು ಅರ್ಹರಿರುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252