
Chitradurga News|Nammajana.com |05-07-2025
ಚಿತ್ರದುರ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಯೋಜನೆಗಳು, ಸಾಧನೆಗಳ ಕುರಿತು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ ಅರ್ಜಿ(Application) ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನಾಂಕವಾಗಿದೆ.
ಇದನ್ನೂ ಓದಿ: ಚಿಕ್ಕಗೊಂಡನಹಳ್ಳಿಯಲ್ಲಿ ಮೂರು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗೆ ಶಾಸಕ ಟಿ.ರಘುಮೂರ್ತಿ ಚಾಲನೆ

ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಪ್ರತಿ ಬೀದಿನಾಟಕ ತಂಡದಲ್ಲಿ 8 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರಿರಬೇಕು.
ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ 3 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರಿರಬೇಕು. ಈ ಹಿಂದೆ ವಿವಿಧ ಇಲಾಖೆಗಳ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿರುವ ಅನುಭವ ಹೊಂದಿರಬೇಕು. ಬೀದಿನಾಟಕ ತಂಡವು ನೊಂದಾಯಿತ ತಂಡವಾಗಿರಬೇಕು.
ಇದನ್ನೂ ಓದಿ: ಇಂದಿನ ಬಂಗಾರದ ಬೆಲೆಯಲ್ಲಿ ಏರಿಕೆ
ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿ, ವಾರ್ತಾ ಭವನ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಚಿತ್ರದುರ್ಗ ಇವರಿಂದ ಉಚಿತವಾಗಿ ಪಡೆದು, ಭರ್ತಿ ಮಾಡಿದ ಅರ್ಜಿ(Application)ಯೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಜುಲೈ 21 ರ ಒಳಗಾಗಿ ಸಲ್ಲಿಸಬೇಕು ಎಂದು ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.