Chitradurga News | Nammajana.com | 17-09-2025
ನಮ್ಮಜನ ನ್ಯೂಸ್ ಕಾಂ,ಚಳ್ಳಕೆರೆ: ಜೂಜಾಟ(gambling) ನಿಯಂತ್ರಣಕ್ಕೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಾನೂನು ಕ್ರಮ ಕೈಗೊಂಡಿದ್ದರೂ ಸಹ ಇಲಾಖೆ ಕಣ್ಣುತ್ತಪಿಸಿ ಜೂಜಾಟ ಮುಂದುವರೆಸಿದ್ದು, ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ಈರೇಶ್ ಮತ್ತು ಸಿಬ್ಬಂದಿ ವರ್ಗ ಜೂಜಾಟವಾಡುತ್ತಿದ್ದ ತಂಡದ ಮೇಲೆ ದಾಳಿ ನಡೆಸಿ ಹಣ ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ನಕಲಿ ವೈದ್ಯರ ಪತ್ತೆಗೆ ಜಿಲ್ಲಾ ಮಟ್ಟದ ವಿಶೇಷ ಕಾರ್ಯಪಡೆ | ಪ್ರತಿ ತಾಲ್ಲೂಕಿನಲ್ಲಿಯೂ ಪ್ರತ್ಯೇಕ ಜಾರಿ ತಂಡ | ಜಿಲ್ಲಾಧಿಕಾರಿ ಟಿ. ವೆಂಕಟೇಶ್ : Fake Doctors
ಖಚಿತ ಮಾಹಿತಿ ಮೇರೆಗೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮಂಗಳವಾರ ಮಧ್ಯಾಹ್ನ ರಿಂಗ್ ರೋಡ್‌ನಲ್ಲಿ ಹಾಡಹಗಲೇ ಜೂಜಾಟವಾಡುತ್ತಿದ್ದ ಚಿತ್ರಯ್ಯನಹಟ್ಟಿಯ ಈರಣ್ಣ ಹಾಗೂ ಇತರೆ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು ಅವರಿಂದ ಜೂಜಾಟ 5700 ರು. ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡು ಪ್ರಕರಣದಾಖಲಿಸಿದ್ದಾರೆ.
