Chitradurga News |Nammajana. Com |22-4-2024
ನಮ್ಮಜನ.ಕಾಂ .ಚಿತ್ರದುರ್ಗ: ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದಲ್ಲಿ ಮೈತ್ರಿ ಧರ್ಮ ಪಾಲಿಸುವ ಮೂಲಕ ಎನ್ ಡಿಎ ಅಭ್ಯರ್ಥಿ ಗೋವಿಂದ ಕಾರಜೋಳ ಅವರಿಗೆ ಹೆಚ್ಚಿನ ಮತಗಳನ್ನು ತಮ್ಮ ಬೂತನಲ್ಲಿ ಕೊಡಿಸಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ಕರೆ ನೀಡಿದರು.
ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಯಾವ ರೀತಿ ಆಡಳಿತ ಮಾಡುತ್ತಿದೆ ಎಂಬುದು ಎಲ್ಲಾರಿಗೂ ಗೊತ್ತಿದೆ. ಸತ್ಯವನ್ನು ಮರೆಮಾಚಿ ಕಾಂಗ್ರೆಸ್ ಆಡಳಿತ ನಡೆಸುತ್ತಿದೆ. ನಮ್ಮ ಅಭ್ಯರ್ಥಿ ಅವರು ರಾಷ್ಟ್ರ ಮಟ್ಟದಲ್ಲಿ ಉತ್ತಮ ಹೆಸರು ಪಡೆದಿದ್ದು ಅವರ ಗೆಲುವಿನಿಂದ ಜಿಲ್ಲೆಯ ಅಭಿವೃದ್ಧಿಗೆ ಸಹಕಾರವಾಗಲಿದೆ.

ಕೊಟ್ಟ ಮಾತಿನಂತೆ ಮದಕರಿ ಥೀಮ್ ಪಾರ್ಕ್ ಮಾಡುವ ನಂಬಿಕೆ
ಕಳೆದ ಬಾರಿ ಚುನಾವಣೆ ಸಮಯದಲ್ಲಿ ಕೊಟ್ಟ ಮಾತಿನಂತೆ ಮದಕರಿ ಥೀಮ್ ಪಾರ್ಕ್ ಮಾಡಿ ನಂಬಿಕೆ ಉಳಿಸಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಐತಿಹಾಸಿಕ ಕೋಟೆ ಅಭಿವೃದ್ಧಿಗೆ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ ಎಂದರು.
ರಾಜ್ಯದಲ್ಲಿ ಮೈತ್ರಿ ಧರ್ಮದಂತೆ ನಗರ ಮತ್ತು ಗ್ರಾಮೀಣ ಭಾಗದ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಮತಗಳನ್ನು ಕೊಡಿಸಬೇಕು.ಕಾಂಗ್ರೆಸ್ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ಕೇಂದ್ರ ಸರ್ಕಾರದಲ್ಲಿ ಮೋದಿ ಅವರ ಸರ್ಕಾರ ಬರುವುದು ಖಚಿತ ಹಾಗೂ ಗೋವಿಂದ ಕಾರಜೋಳ ಅವರು ಸಹ ಕೇಂದ್ರ ಮಂತ್ರಿ ಆಗುವುದು ಸಹ ಅಷ್ಟೆ ಸತ್ಯವಾಗಿದೆ.
ಇದನ್ನೂ ಓದಿ: ಮಹಿಳೆಯರ ಮನ ಗೆಲ್ಲಲು ಚಿತ್ರದುರ್ಗಕ್ಕೆ ನಾಳೆ ಪ್ರಿಯಾಂಕಾ ಗಾಂಧಿ
ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ಕಾರ್ಯಕರ್ತರು ಹಗಳಿರುಳು ಎನ್ ಡಿಎ ಅಭ್ಯರ್ಥಿ ಗೆಲುವಿಗೆ ಟೊಂಕಾ ಕಟ್ಟಿ ನಿಂತಿದ್ದಾರೆ. ಬಿಜೆಪಿ ಅಭ್ಯರ್ಥಿ ಪರವಾಗಿ ನಗರದಲ್ಲಿ ಎರಡು ಸುತ್ತಿನ ಪ್ರಚಾರ ಮುಗಿಸಿದ್ದು ಮನೆ ಮನೆ ಪ್ರಚಾರ ಮಾಡುತ್ತಿದ್ದೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಗುರುಸಿದ್ದಪ್ಪ , ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಲಸ್ವಾಮಿ ನಾಯಕ್, ಜೆಡಿಎಸ್ ನಗರ ಅಧ್ಯಕ್ಷ ತಿಮ್ಮಣ್ಣ, ಜೆಡಿಎಸ್ ಯುವ ಪ್ರತಾಪ್ ಜೋಗಿ, ಮಠದಹಟ್ಟಿ ವೀರಣ್ಣ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252