Chitradurga News | Nammajana.com | 18-04-2024
ನಮ್ಮಜನ , ಹೊಳಲ್ಕೆರೆ: ದೇಶದ ಸ್ವಾತಂತ್ರö್ಯಕ್ಕಾಗಿ ಹೋರಾಡಿ ದೇಶವನ್ನು ಸ್ವಾತಂತ್ರ್ಯಕ್ಕಾಗಿ ಮತ್ತು ದೇಶದ ಕಲ್ಯಾಣಕ್ಕೆ ಶ್ರಮಿಸಿದ ಕಾಂಗ್ರೆಸ್ ಪಕ್ಷವನ್ನು ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸಬೇಕೆಂದು ಕಾಂಗ್ರೇಸ್ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ ತಿಳಿಸಿದರು.
ಅವರು ಬುಧವಾರ ಪಟ್ಟಣದ ಗಣಪತಿ ಕಲ್ಯಾಣ ಮಂಟಪದಲ್ಲಿ ಪೂಜೆ ಸಲ್ಲಿಸಿ ಕಾಂಗ್ರೆಸ್ ಪಕ್ಷದ ಪರ ಬೈಕ್ ರ‍್ಯಾಲಿಗೆ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದರು.

ದೇಶದ ಅಭವೃದ್ಧಿಗೆ ಕಾಂಗ್ರೆಸ್ ಪಕ್ಷ ನೂರಾರು ಯೋಜನೆ ಜಾರಿಗೆ ತಂದು ಜನರ ಕಲ್ಯಾಣಕ್ಕೆ ಶ್ರಮಿಸಿದೆ. ಬ್ಯಾಂಕ್ ರಾಷ್ಟೀಕರಣ , ಭೂಮಿ ಒಡೆತನದ ಹಕ್ಕು , ಅಣು ಶಕ್ತಿ ಸ್ಥಾಪನೆ ,ವಿಮಾನ ತಯಾರಿಕೆ, ನಿಲ್ದಾಣಗಳು, ರೈಲ್ವೆ ಆಭಿವೃದ್ಧಿ, ರಸ್ತೆಗಳು, ಹಡಗು ಬಂದರು ಅಭಿವೃದ್ಧಿಗೊಳಿಸಿದೆ. ನೂರಾರು ವಿಶ್ವವಿದ್ಯಾನಿಲಯ ಸ್ಥಾಪಿಸಿದೆ. ನೂರಾರು ಕಂಪನಿಗಳನ್ನು ಸ್ಥಾಪಿಸಿದೆ. ಕೃಷಿ ಕ್ಷೇತ್ರಕ್ಕೆ ನೀರಾವರಿ ಯೋಜನೆಗಳು, ವಿದ್ಯುತ್ ಉತ್ವಾದನೆ ಸೇರಿ ಎಲ್ಲಾ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಕಾಂಗ್ರೇಸ್ ಪಕ್ಷ ಅಪಾರ ಕೊಡುಗೆ ನೀಡಿದೆ ಎಂದರು.
Read also: ಚಿತ್ರದುರ್ಗದ ಹಿಂದುಳಿದ ವರ್ಗಗಳ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
ಮಾಜಿ ಪ್ರಧಾನಿ ನೇಹರು ದೂರ ದೃಷ್ಟಿ
ಮಾಜಿ ಪ್ರಧಾನಿ ನೇಹರು ದೂರ ದೃಷ್ಟಿ ಯೋಜನೆಗಳು, ಇಂದಿಗಾಂಧಿ ಬಡವರ ಕಲ್ಯಾಣ ಕಾರ್ಯಕ್ರಮಗಳು, ರಾಜೀವ್ ಗಾಂಧಿ ತಂತ್ರಜ್ಞಾನಕ್ಕೆ ಒತ್ತು ನೀಡಿದ್ದರು ಎಂದರು.
ಕಾಂಗ್ರೆಸ್ ಮುಖಂಡ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ರಘು ಮಾತನಾಡಿ ಮನ್‌ಮೋಹನ್ ಸಿಂಗ್ ಆರ್ಥಿಕ ಕ್ಷೇತ್ರದಲ್ಲಿ ಪ್ರಗತಿ, ಜಿಡಿಪಿ ಪ್ರಗತಿ, ಕೃಷಿ ಸಾಲ ಮನ್ನ, ಉದ್ಯೋಗ ಖಾತರಿ ಯೋಜನೆ, ಮಾಹಿತಿ ಹಕ್ಕು, ಹಲವಾರು ಯೋಜನೆಗಳನ್ನು ಜಾರಿಗೆ ತಂದು ದೇಶವನ್ನು ಕಟ್ಟಿದ್ದಾರೆ. ಇದೆಲ್ಲ ಬಿಜೆಪಿ ಪಕ್ಷಕ್ಕೆ ಗೊತ್ತಿಲ್ಲ ಎಂದರು.
ಸಿಎಂ. ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವ ಕಾಂಗ್ರೇಸ್ ಪಕ್ಷದ ಸರಕಾರ ೫ ಕ್ಯಾರಂಟಿ ಯೋಜನೆೆಗಳಿಂದ ಬರಗಾಲದಲ್ಲಿ ಜನರು ಬದುಕುತ್ತಿದ್ದಾರೆ. ಅನ್ನಭಾಗ್ಯ, ಗೃಹಲಕ್ಷ್ಮಿ, ಉಚಿತ ವಿದ್ಯುತ್, ಉಚಿತ ಬಸ್ ಪ್ರಯಾಣ ಜನರಿಗೆ ಸಾಕಷ್ಟು ಅನುಕೂಲ ಕಲ್ಪಿಸಿದೆ. ಗೃಹಲಕ್ಷ್ಮಿ ಹಣದಿಂದ ಕೋಟ್ಯಾಂತರ ಕುಟುಂಬಗಳು ನೆಮ್ಮದಿಯಿಂದ ಬದುಕು ಕಟ್ಟಿಕೊಂಡಿವೆ. ಇದನ್ನು ಸಹಿಸಲು ಸಾಧ್ಯವಿಲ್ಲದ ಬಿಜೆಪಿ ಅವುಗಳನ್ನು ವಿರುದ್ದ ಅಪಪ್ರಚಾರ ಕೈಗೊಂಡಿದೆ. ಹಾಗಾಗಿ ಕಾಂಗ್ರೇಸ್ ಪಕ್ಷದವನ್ನು ದೇಶದಲ್ಲಿ ಆಧಿಕಾರಕ್ಕೆ ತರಬೇಕು. ದೇಶವನ್ನು ಬಲಿಷ್ಠಗೊಳಿಸಬೇಕು. ಈ ನಿಟ್ಟಿನಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಇವರಿಗೆ ಮತ ನೀಡಬೇಕೆಂದು ಮನವಿ ಮಾಡಿದರು.
ಮಾಜಿ ಶಾಸಕ ಎ.ವಿ.ಉಮಾಪತಿ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಕಿರಣ್ ಯಾದವ್, ವಕೀಲರಾದ ಪ್ರಶಾಂತ್, ಚಂದ್ರಕಾಂತ್, ಮಾತನಾಡಿದರು. ಕಾಂಗ್ರೇಸ್ ಪಕ್ಷದ ಸಾವಿರಾರು ಕಾರ್ಯಕರ್ತರು ಬೈಕ್ ರ‍್ಯಾಲಿ ಮೂಲಕ ಪಟ್ಟಣದ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಸಂಚರಿಸಿ ಪಕ್ಷದ ಪರ ಮತ ನೀಡುವಂತೆ ಮನವಿ ಮಾಡಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252