Chitradurga news|nammajana.com|11-03-2025
ನಮ್ಮಜನ.ಕಾಂ, ಮೊಳಕಾಲ್ಮುರು: ಕಳೆದ ಬಾರಿ ನನಗೆ ಸಿಕ್ಕಂತ (B. Sriramulu) ಅವಕಾಶವನ್ನು ಸಮರ್ಥವಾಗಿ ಬಳಕೆ ಮಾಡಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.
ತಾಲೂಕಿನ ರಾಯಾಪುರ ಸಮೀಪದಲ್ಲಿ ನಿರ್ಮಾಣವಾಗಿರುವ ಸರ್ಕಾರಿ ಬಸ್ ಡಿಪೋ ಸ್ಥಳಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ದಕ್ಷಿಣ ಭಾರತದಲ್ಲಿಯೇ ಅತಿದೊಡ್ಡ ಕ್ಷೇತ್ರವಾಗಿರುವ ಮೊಳಕಾಲ್ಮುರು ಹಿಂದುಳಿದ ಪ್ರದೇಶವಾಗಿದೆ. ಇಲ್ಲಿನ ಜನತೆಗೆ ಮೂಲಸೌಲಬ್ಯಗಳ ಕೊರತೆ ಕಾಡುತ್ತಿದೆ.
ಹಾಗಾಗಿ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ನಾನು ಸಾರಿಗೆ ಸಚಿವನಾಗಿದ್ದ ವೇಳೆ ತಾಲೂಕು ಕೇಂದ್ರ ಸ್ಥಾನದಲ್ಲಿ ಸರ್ಕಾರಿ ಬಸ್ ನಿಲ್ದಾಣ ಹಾಗು ರಾಯಪುರದಲ್ಲಿ ಬಸ್ ಡಿಪೋ ಮುಂಜೂರು ಮಾಡಿಸಿದ್ದೆ. ಹಾಗೂ ಆರೋಗ್ಯ ಸಚಿವನಾಗಿದ್ದ ವೇಳೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮೂಲಸೌಲಭ್ಯ ಕಲ್ಪಿಸಿ ವೈದ್ಯರ ಕೊರತೆ (B. Sriramulu) ನೀಗಿಸಿದ್ದೆ.ಅಲ್ಲದೆ ಬಿ.ಜಿ.ಕೆರೆ ಮತ್ತು ದೊಡ್ಡ ಉಳ್ಳಾರ್ತಿ ಗ್ರಾಮದಲ್ಲಿ ಸಮುದಾಯ ಆರೋಗ್ಯ ಕೇಂದ್ರವನ್ನು ಮುಂಜೂರಾತಿ ನೀಡಿದ್ದೆ. ಈಗ ಆ ಎಲ್ಲಾ ಕಾಮಗಾರಿ ಕಟ್ಟಡಗಳುಪೂರ್ಣಗೊಂಡಿದ್ದು ಸರ್ಕಾರ ಆದಷ್ಟು ಶೀಘ್ರವಾಗಿ ಉದ್ಘಾಟನೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದರು.
ಎಲ್ಲಾ ಪಕ್ಷದಲ್ಲೂ ಆತ್ಮೀಯರು ಇದ್ದಾರೆ. ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಜಿಲ್ಲೆಗಳಿಂದಲೂ ಸ್ಪರ್ಧಿಸಲು ಒತ್ತಡ ಇದೆ. ರಾಜ್ಯ ತುಂಬಾ ಓಡಾಡಿ ಪಕ್ಷ ಕಟ್ಟುವ ಕೆಲಸ ಮಾಡುವ ಜೊತೆಗೆ ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ: Theft | ಚಳ್ಳಕೆರೆ ನಗರದಲ್ಲಿ ಬ್ಯಾಂಕ್ ನಿಂದ ಡ್ರಾ ಮಾಡಿದ 5 ನಿಮಿಷದಲ್ಲಿ 1.70 ಲಕ್ಷ ಕಳ್ಳತನ
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಶ್ರೀರಾಮರೆಡ್ಡಿ, ನಿಕಟ ಪೂರ್ವ ಅಧ್ಯಕ್ಷಡಾ. ಪಿ. ಎಂ.ಮಂಜುನಾಥ್, ಪಪಂ ಮಾಜಿ ಅಧ್ಯಕ್ಷ ಲಕ್ಷ್ಮಣ, ಸದಸ್ಯ ಮಂಜಣ್ಣ ಎಸ್ಸಿ ಮೋರ್ಚಾ ಸಿದ್ದಾರ್ಥ ಪ್ರಭಾಕರ ಮುಖಂಡರಾದ ಪಾಪೇಶ್ ನಾಯಕ,ಓಬಣ್ಣ, ಜಿರಳ್ಳಿ ತಿಪ್ಪೇಸ್ವಾಮಿ,ಹಾನಗಲ್ ರಮೇಶ್, ಭೀಮಣ್ಣ, ಸಿದ್ದಯ್ಯನ ಕೋಟೆ ಮರಿಸ್ವಾಮಿ, ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252