Chitradurga news|nammajana.com|17-6-2024
ನಮ್ಮಜನ.ಕಾಂ, ಚಿತ್ರದುರ್ಗ: ತ್ಯಾಗ ಬಲಿದಾನಗಳ ಸಂಕೇತ ಬಕ್ರೀದ್ (Bakrid) ಹಬ್ಬದ ಪ್ರಯುಕ್ತ ಚಂದ್ರವಳ್ಳಿ ಮೈದಾನ ಹಾಗೂ ದಾವಣಗೆರೆ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸೋಮವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಶ್ವೇತ ವಸ್ತ್ರದಾರಿಗಳಾಗಿದ್ದ ಮುಸ್ಲಿಂರು ತಲೆಗೆ ಬಿಳಿ ಟೋಪಿ ಧರಿಸಿ ಪ್ರಾರ್ಥನೆಯಲ್ಲಿ ತೊಡಗಿದ್ದರು.
ಕೆಲವರು ಮನೆಯಿಂದ ಚಾಪೆ, ಜಮಖಾನ ತಂದು ನೆಲದಲ್ಲಿ ಹಾಸಿಕೊಂಡು ಅಲ್ಲಾನನ್ನು ಪ್ರಾರ್ಥಿಸಿದರು.
ಚಂದ್ರವಳ್ಳಿ ಫೈರಿಂಗ್ ರೇಂಜ್ ಮೈದಾನದಲ್ಲಿ ನಡೆದ (Bakrid) ಸಾಮೂಹಿಕ ಪ್ರಾರ್ಥನೆಯಲ್ಲಿ ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ಇಲಾಹಿಮುನ್ನ, ಮೆಹಬೂಬ್‍ಖಾನ್, ಅಯೂಬ್, ರಿಜ್ವಾನ್, ಇರ್ಫಾನ್, ಎಜಾಜ್, ಅಶ್ವಾಖ್, ವಿಖಾರ್, ನಾಸಿರ್, ಗೌಸ್‍ಪೀರ್ ಇನ್ನು ಅನೇಕರು ಪ್ರಾರ್ಥನೆ ಸಲ್ಲಿಸಿದರು.
ಈದ್ಗಾ ಮೈದಾನದಲ್ಲಿ ನಡೆದ ಪ್ರಾರ್ಥನೆಯಲ್ಲಿ ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಎ.ಜಾಕಿರ್‍ಹುಸೇನ್, ಚಾಂದ್‍ಪೀರ್ ಸೇರಿದಂತೆ ನೂರಾರು ಮುಸ್ಲಿಂ ಬಾಂಧವರು (Bakrid) ಪ್ರಾರ್ಥನೆಯಲ್ಲಿ ತೊಡಗಿದ್ದರು.
ಇದನ್ನೂ ಓದಿ: Petrol diesel price hike: ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ | ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
ಪ್ರಾರ್ಥನೆಯ ನಂತರ ಪರಸ್ಪರರು ಅಪ್ಪಿಕೊಂಡು ಬಕ್ರೀದ್ ಹಬ್ಬದ ಶುಭಾಷಯಗಳನ್ನು ವಿನಿಮಯ ಮಾಡಿಕೊಂಡರು.
ದಾವಣಗೆರೆ ರಸ್ತೆಯಲ್ಲಿ ಬ್ಯಾರಿಕೇಡ್‍ಗಳನ್ನು ಅಡ್ಡವಿಟ್ಟು ಪೊಲೀಸರು ಸಂಚಾರವನ್ನು ನಿಯಂತ್ರಿಸುತ್ತಿದ್ದರು.