Chitradurga News | Nammajana.com | 3-5-2024
ನಮ್ಮಜನ.ಕಾಂ. ಚಿತ್ರದುರ್ಗ: ಋಷಿಸಂಸ್ಕೃತಿ ಗುರುಕುಲ ಮಹಾಸಂಸ್ಥಾನ ಮತ್ತು ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತು ವತಿಯಿಂದ “ಬಸವ ಜಯಂತಿ ಅಂಗವಾಗಿ ಮನೆಯಂಗಳದಲ್ಲಿ ಮಕ್ಕಳ ಹಬ್ಬ” ಹೆಸರಿನಲ್ಲಿ ” ಜಿಲ್ಲಾ ಮಟ್ಟದ ಮಕ್ಕಳ ಕವಿಗೋಷ್ಠಿ ” ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೀತಾ ಭರಮಸಾಗರ ತಿಳಿಸಿದ್ದಾರೆ.
ಐದನೇ ತರಗತಿ ಯಿಂದ ದ್ವಿತೀಯ ಪಿಯುಸಿ ವರೆಗಿನ ಮಕ್ಕಳು ಕವಿಗೋಷ್ಟಿಯಲ್ಲಿ ಭಾಗವಹಿಸಬಹುದು. (ಹಸಿರು ಕರ್ನಾಟಕ, ಅರಣ್ಯ ಅಭಿವೃದ್ಧಿ, ಪರಿಸರ ಪ್ರಾಣಿ ಪಕ್ಷಿ, ಜೀವವೈವಿಧ್ಯ ಅಳಿವು ಉಳಿವು, ಪ್ಲಾಸ್ಟಿಕ್ ನಿಷೇಧ, ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣ ಈ ವಿಷಯಗಳ ಕುರಿತು ಕವಿತೆ ಬರೆಯಬಹುದು)

ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರಹಾಕುವುದು. ಮೊಬೈಲ್ ಗೀಳಿನಿಂದ ಮಕ್ಕಳು ಹೊರಬಂದು ಬರಹದ ಕಡೆ ಗಮನಕೊಡುವುದನ್ನು ಕಲಿಸುವುದು, ವಿದ್ಯಾರ್ಥಿಗಳು ಸಾಹಿತ್ಯಿಕ ಸಾಂಸ್ಕೃತಿಕ ವೇದಿಕೆಗಳಲ್ಲಿ ಮಾತನಾಡುವುದನ್ನು ಕಲಿಸುವುದು, ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸುವುದು ನಮ್ಮ ಉದ್ದೇಶವಾಗಿದೆ.
ಈ ಹಿನ್ನೆಲೆಯಲ್ಲಿ ಹೊಸ ಕವಿಗಳನ್ನು ಹುಡುಕುವ ಜೊತೆಗೆ ಪ್ರೋತ್ಸಾಹ ಮಾಡುವ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಮಕ್ಕಳ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ ಎಂದು ಗೀತಾ ಭರಮಸಾಗರ ಅವರು ತಿಳಿಸಿದ್ದಾರೆ.
ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಗುತ್ತದೆ.
ವಿದ್ಯಾರ್ಥಿಗಳು ಕಡ್ಡಾಯವಾಗಿ ಈ ದಾಖಲೆ ಕಳಿಸಿ
ಆಧಾರ್ ಕಾರ್ಡ್, ಭಾವಚಿತ್ರ ದೊಂದಿಗೆ ಪೋನ್ ನಂಬರ್ ಹಾಕಿ ಅಂಚೆ ಅಥವಾ ಕೋರಿಯರ್ ಮೂಲಕ ಈ ಕೆಳಗಿನ ವಿಳಾಸಕ್ಕೆ ಕವಿತೆಗಳನ್ನು ಕೈ ಬರಹದಲ್ಲಿ ಬರೆದು ಕಡ್ಡಾಯವಾಗಿ ಕಳುಹಿಸಬೇಕು.
ಜೊತೆಗೆ Gmail: rushigurukula@gmail.com, ಈ ವಿಳಾಸಕ್ಕೆ ಟೈಪ್ ಮಾಡಿ ಮೇಲ್ ಕಳಿಸಿ ಎಂದು ತಿಳಿಸಿದ್ದಾರೆ. ಉತ್ತಮ ಮತ್ತು ಸುಂದರ ಕೈ ಬರಹಕ್ಕೆ ಸೂಕ್ತ ಬಹುಮಾನ ವಿರುತ್ತದೆ.
ಕವಿತೆಗಳನ್ನು ಕಳುಹಿಸುವ ವಿಳಾಸ
ಆಡಳಿತಾಧಿಕಾರಿಗಳು
ಋಷಿಸಂಸ್ಕೃತಿ ಗುರುಕುಲ ಮಹಾಸಂಸ್ಥಾನ (ರಿ)
ನಂ 315/ಬಿ. ಒಂದನೇ ಅಡ್ಡ ರಸ್ತೆ, ಹತ್ತನೇ ಮುಖ್ಯ ರಸ್ತೆ. ಐಯುಡಿಪಿ ಬಡಾವಣೆ. ಚಿತ್ರದುರ್ಗ. 577501
ಇದನ್ನೂ ಓದಿ: ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ ಮಾಡಿದ್ದೇಕೆ?
ಹೆಚ್ಚಿನ ಮಾಹಿತಿಗಾಗಿ:
8073744244. 9113694200
ಸಂಪರ್ಕಿಸಲು ಕೋರಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252