Chitradurga news|nammajana.com|28-9-2024
ನಮ್ಮಜನ.ಕಾಂ, ಚಳ್ಳಕೆರೆ: ತಾಲ್ಲೂಕಿನಾದ್ಯಂತ ಮತ್ತೊಮ್ಮೆ ಮಳೆ ವಿಫಲವಾಗಿ ಈಗಾಗಲೇ ಬಿತ್ತನೆ ಮಾಡಿದ ಬಹುತೇಕ ಎಲ್ಲಾ (Bele parihara) (MLA) ಜಮೀನಿಗಳಲ್ಲಿರುವ ಶೇಂಗಾ ಬೆಳೆ ಒಣಗಲು ಪ್ರಾರಂಭಿಸಿದ್ದು ರೈತರನ್ನು ಸಂಕಷ್ಟಕ್ಕೆ ತಳ್ಳಿದೆ.
ಈ ಬಗ್ಗೆ ಮಾಹಿತಿ ಪಡೆದ ಶಾಸಕ ಟಿ.ರಘುಮೂರ್ತಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್ ವಾಸ್ತಾಂಶವನ್ನು ಅರಿಯಲು ತಾಲ್ಲೂಕಿನ ನಗರಂಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರಹರಿನಗರದ ರಿ, ಸರ್ವೆ, ನಂ ೩೯ ಜಮೀನಲ್ಲಿರುವ ಒಣಗಿದ ಶೇಂಗಾ ಬೆಳೆಯನ್ನು ವೀಕ್ಷಿಸಿದರು.

ಜಮೀನಿನ ರೈತ ಪ್ರಕಾಶ್, ಮಂಜುನಾಥ ಮಾತನಾಡಿ, ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡಿ ಶೇಂಗಾ ಬಿತ್ತನೆ ಮಾಡಿದ್ದೆ. ಕಳೆದ ಸುಮಾರು ೨೦ ದಿನಗಳಿಂದ ನಿರಂತರವಾಗಿ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಜಮೀನಿನಲ್ಲಿದ್ದ ಶೇಂಗಾ ಬೆಳೆ (Bele parihara) ಒಣಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ನೋವನ್ನು ಅನುಭವಿಸಬೇಕಾದ ಪರಿಸ್ಥಿತಿ ಉಂಟಾಗಿದೆ. (MLA) ಸರ್ಕಾರದಿಂದ ಸೂಕ್ತ ಪರಿಹಾರವನ್ನು ಕೊಡಿಸುವಂತೆ ಮನವಿ ಮಾಡಿದರು.
ಶಾಸಕ ಟಿ.ರಘುಮೂರ್ತಿ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ, ಚಳ್ಳಕೆರೆ ತಾಲ್ಲೂಕಿನ ಶೇಂಗಾ ಸೇರಿದಂತೆ ಎಲ್ಲಾ ಬೆಳೆಗಳು ಒಣಗಿ ನೆಲಕಚ್ಚಿವೆ. ರೈತರು ಬೆಳೆವಿಮೆ ಮಾಡಿಸಿದ್ದು ಕೆಲವೊಮ್ಮೆ ದಾಖಲಾತಿಗಳ ಸಲ್ಲಿಕೆ ವಿಳಂಬ ನೆಪವೊಡ್ಡಿ ರೈತರಿಗೆ (Bele parihara) ಬೆಳೆಪರಿಹಾರವನ್ನು ನೀಡಲಾಗುತ್ತಿಲ್ಲ. ಇದರಿಂದ ರೈತರು ವಂಚಿತರಾಗುತ್ತಾರೆ.
ಇದನ್ನೂ ಓದಿ: Chitradurga DC ಟಿ.ವೆಂಕಟೇಶ್ ಮತ್ತು ತಹಶೀಲ್ದಾರ್ ರೇಹಾನ್‌ಪಾಷ ಗೆ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ
ಸಾವಿರಾರು ರೈತರು ಈ ಬಗ್ಗೆ ತಮ್ಮ ಅಳಲುತೋಡಿಕೊಂಡಿದ್ಧಾರೆ. ಆದ್ದರಿಂದ ಜಿಲ್ಲಾಧಿಕಾರಿಗಳಾದ ತಾವು ಕೃಷಿ, ಕಂದಾಯ ಇಲಾಖೆ ಅಧಿಕಾರಿಗಳಿಗೆ ನಿರ್ಧಿಷ್ಟ ಸೂಚನೆ ನೀಡಿ ಯಾವುದೇ ರೈತರಿಗೆ ಅನ್ಯಾಯವಾಗದಂತೆ ಕ್ರಮಕೈಗೊಳ್ಳಬೇಕೆಂದರು.(MLA) ತಹಶೀಲ್ಧಾರ್ ರೇಹಾನ್‌ಪಾಷ, ಕಂದಾಯಾಧಿಕಾರಿ (Bele parihara) ತಿಪ್ಪೇಸ್ವಾಮಿ, ಗ್ರಾಮ ಲೆಕ್ಕಿಗ ರಘುನಾಥಸಿಂಗ್, ಗ್ರಾಮ ಪಂಚಾಯಿತಿ ಸದಸ್ಯ ಎನ್.ಮಂಜುನಾಥ, ನಾಗರಾಜು, ಡಿವೈಎಸ್ಪಿ ಟಿ.ಬಿ.ರಾಜಣ್ಣ ಮುಂತಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ: ಮೊಳಕಾಲ್ಮೂರು ತಾಲೂಕು ಪಂಚಾಯತಿ ವ್ಯವಸ್ಥಾಪಕ ಅಮಾನತು | Suspended
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252