Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Bhadra Upper Bank Project: ಭದ್ರಾ ಮೇಲ್ದಂಡೆ ಯೋಜನೆಗೆ ತಕ್ಷಣ 5300 ಕೋಟಿ ಅನುದಾನ ಬಿಡುಗಡೆ ಮಾಡಿ: ಗೋವಿಂದ್ ಕಾರಜೋಳ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Bhadra Upper Bank Project: ಭದ್ರಾ ಮೇಲ್ದಂಡೆ ಯೋಜನೆಗೆ ತಕ್ಷಣ 5300 ಕೋಟಿ ಅನುದಾನ ಬಿಡುಗಡೆ ಮಾಡಿ: ಗೋವಿಂದ್ ಕಾರಜೋಳ
ಇಂದಿನ ಸುದ್ದಿ

Bhadra Upper Bank Project: ಭದ್ರಾ ಮೇಲ್ದಂಡೆ ಯೋಜನೆಗೆ ತಕ್ಷಣ 5300 ಕೋಟಿ ಅನುದಾನ ಬಿಡುಗಡೆ ಮಾಡಿ: ಗೋವಿಂದ್ ಕಾರಜೋಳ

Editor Nammajana
Last updated: 27 July 2024 08:41
By Editor Nammajana 3 Min Read
Share
SHARE

Chitradurga news|nammajana.com|27-7-2024

ಕೇಂದ್ರ ಜಲಶಕ್ತಿ ಸಚಿವ ಸಿ.ಆ‌ರ್.ಪಾಟೀಲರಿಗೆ ಮನವಿ ಸಲ್ಲಿಸಿದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ

ನಮ್ಮಜನ.ಕಾಂ, ಚಿತ್ರದುರ್ಗ: ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಮಹತ್ವದ ಭದ್ರಾ ಮೇಲ್ದಂಡೆ ಯೋಜನೆಗೆ ತಕ್ಷಣವೇ (Bhadra Upper Bank Project) ಬಜೆಟ್ ಘೋಷಿತ 5300 ಕೋಟಿ ರು. ಅನುದಾನ ಬಿಡುಗಡೆ ಮಾಡುವಂತೆ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಕೇಂದ್ರ ಜಲಶಕ್ತಿ ಸಚಿವ ಸಿ. ಆರ್.ಪಾಟೀಲ್ ಅವರಲ್ಲಿ ಮನವಿ ಮಾಡಿದ್ದಾರೆ.

ಸಂಸತ್ ಅಧಿವೇಶನದ ನಡುವೆಯೇದೆಹಲಿಯಲ್ಲಿ ಜಲಶಕ್ತಿ ಸಚಿವರ ಭೇಟಿಯಾದ ಸಂಸದ್ವಯರು, ಪ್ರಧಾನಮಂತ್ರಿ ಕೃಷಿ ಸಿಂಚಯಿ ಯೋಜನೆಯ ವೇಗ ವರ್ಧಿತ ನೀರಾವರಿ (Bhadra Upper Bank Project) ಪ್ರಯೋಜನಾ ಯೋಜನೆಯಡಿ 5300 ಕೋಟಿ ಅನುದಾನ ಬಿಡುಗಡೆ ಮಾಡಿ, ಕರ್ನಾಟಕದ ರೈತರ ನೆರವಿಗೆ ಧಾವಿಸಬೇಕು ಎಂದು ವಿನಂತಿಸಿದ್ದಾರೆ.

5300 ಕೋಟಿ ರೂ ಅನುದಾನ ಕೂಡಲೇ ಬಿಡುಗಡೆಗೊಳಿಸಿ (Bhadra Upper Bank Project)

ಮಧ್ಯ ಕರ್ನಾಟಕದ ಬರಪೀಡಿತ ಜಿಲ್ಲೆಗಳಾದ ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ನೀರುಣಿಸುವ ಮಹತ್ವದ ನೀರಾವರಿಯೋಜನೆಯಾಗಿದ್ದು ಮೊದಲಹಂತದಲ್ಲಿ ಭದ್ರಾ ಮೇಲ್ದಂಡೆಗೆ ಘೋಷಿತ 5300 ಕೋಟಿ ರೂ ಅನುದಾನ ಬಿಡುಗಡೆಗೆ ಆಗ್ರಹಿಸಿ ಸಂಸದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ ಕೇಂದ್ರ ಜಲಶಕ್ತಿ ಸಚಿವ (Bhadra Upper Bank Project) ಸಿ.ಆರ್.ಪಾಟೀಲರಿಗೆ ಮನವಿ ಸಲ್ಲಿಸಿದರು.

367 ಕೆರೆಗಳಿಗೆ ನೀರು ತುಂಬಿಸುವ ಯೋಜನೆ

ತುಂಗಾ ನದಿಯಿಂದ 17.40 ಟಿಎಂಸಿ ನೀರನ್ನು ಭದ್ರಾ ಜಲಾಶಯಕ್ಕೆ ಲಿಫ್ಟ್ ಮಾಡಿ, 2ನೇ ಹಂತದಲ್ಲಿ ಭದ್ರಾ ಜಲಾಶಯದಿಂದ 29.90 ಟಿಎಂಸಿ ನೀರನ್ನು ನಾಲ್ಕು ಬರಪೀಡಿತ ಜಿಲ್ಲೆಗಳ 2,55,515 ಹೆಕ್ಟೇರ್‌ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಕಲ್ಪಿಸುವುದಾಗಿದೆ. ಮುಂಗಾರು ಹಂಗಾಮಿನಲ್ಲಿ ಬೆಳೆಗಳಿಗೆ ನೀರಾವರಿ ಕಲ್ಪಿಸುವುದು ಹಾಗೂ 367 ಕೆರೆಗಳ (Bhadra Upper Bank Project) ತುಂಬಿಸುವ ಮೂಲಕ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದಾಗಿದೆ.

20200 2.160 21,473 ಕೋಟಿ ರು. ಪರಿಷ್ಕೃತ ಅಂದಾಜು ವೆಚ್ಚಕ್ಕೆ ಆಡಳಿ ತಾತ್ಮಕ ಒಪ್ಪಿಗೆ ನೀಡಿದ್ದು, ಜಲ ಸಂಪನ್ಮೂಲ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ 2020ರ ಡಿಸೆಂಬ‌ರ್ 24 ರಂದು 16,125 ಕೋಟಿ ರು.ಗಳಿಗೆ ಸ್ಥಿರೀಕರಿಸಿದೆ. ಬಂಡವಾಳ ಒಪ್ಪಿಗೆ ಸಮಿತಿ 2021ರ ಮಾರ್ಚ್ 25 ರಂದು ಒಪ್ಪಿಗೆ (Bhadra Upper Bank Project) ನೀಡಿದೆಯಲ್ಲದೇ ಉನ್ನತ ಮಟ್ಟದ ಪರಿಶೀಲನಾ ಸಮಿತಿ ಭದ್ರಾ ಮೇಲ್ದಂಡೆ ಯೋಜನೆ ಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವಂತೆ ಶಿಫಾರಸ್ಸು ಮಾಡಿದೆ. 2022ರ ಅ.12ರಂದು ನಡೆದ ಸಾರ್ವಜನಿಕ ಹೂಡಿಕೆ ಮಂಡಳಿ ಸಭೆಯಲ್ಲಿ ಭದ್ರಾ ಮೇಲ್ದಂಡೆಯೋಜನೆಗೆ 5300 ಕೋಟಿ ರು. ನೀಡಲು ಒಪ್ಪಿಗೆ ಸೂಚಿಸಿದೆ.

ಭದ್ರಾ ಮೇಲ್ದಂಡೆ ಯೋಜನೆಗೆ ನೆರವಾಗಿ

ಕಳೆದ ವರ್ಷದ ಕೇಂದ್ರದ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ನೆರವಾಗಿ ಘೋಷಣೆ ಮಾಡಲಾಗಿದೆ. ಬರಪೀಡಿತ ಜಿಲ್ಲೆಗಳ ರೈತರು ಮಳೆಯ ಕೊರತೆಯಿಂದ ನೀರಿನ ಸಮಸ್ಯೆ ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ಈ (Bhadra Upper Bank Project) ಯೋಜನೆಯನ್ನು ಶೀಘ್ರ ಕಾರ್ಯಗೊತ ಗೊಳಿಸುವ ಅಗತ್ಯವಿದೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಡಿ ಘೋಷಿಸುವ ಕೆಲಸ ನಿಧಾನವಾಗುತ್ತಿರುವ ಹಿನ್ನೆಲೆ ಹಾಗೂ ಕೇಂದ್ರದ ಅನುದಾನ ಬಿಡುಗಡೆ ಆಗದಿರುವುದರಿಂದ ಕಾಮ ಗಾರಿ ಪೂರ್ಣಗೊಳಿಸುವುದು ವಿಳಂಬವಾ ಗುತ್ತಿದೆ.

ಇದನ್ನೂ ಓದಿ: ಪಿಡಿಓ ಎನ್.ಪಾಲಯ್ಯ ಸಸ್ಪೆಂಡ್ ಗೆ ಏಳು ಮುಖ್ಯ ಕಾರಣಗಳು| PDO SASPENDED

ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕೃಷಿ ಸಿಂಚಯಿ ಯೋಜನೆಯ ವೇಗವರ್ಧಿತ ನೀರಾವರಿ (Bhadra Upper Bank Project) ಪ್ರಯೋಜನಾ ಯೋಜನೆ ಅಡಿ5300ಕೋಟಿ ಅನುದಾನ ಬಿಡಗಡೆ ಮಾಡಬೇಕು ಹಾಗೂ ರಾಷ್ಟ್ರೀಯ ಯೋಜನೆ ಎಂದು ಘೋಷಿಸು ವಂತೆ ಸಿ.ಆರ್.ಪಾಟೀಲರಿಗೆ ಸಲ್ಲಿಸಲಾದ ಮನವಿಯಲ್ಲಿ ಆಗ್ರಹಿಸಲಾಗಿದೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Basavaraj BommaiBhadraBhadra Upper Bank ProjectC.R. PatilChitradurgaChitradurga Newsfor Immediate ReleaseFormer CMGovinda KarajolaGrantsKannada Newskannada suddiMPNammajana.comNational ProjectPrime Minister Agriculture SinchaiUnion Hydropower MinisterUnion Ministerಅನುದಾನಕನ್ನಡ ನ್ಯೂಸ್ಕನ್ನಡ ಸುದ್ದಿಕೇಂದ್ರ ಜಲಶಕ್ತಿ ಸಚಿವಕೇಂದ್ರ ಸಚಿವಗೋವಿಂದ ಕಾರಜೋಳಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿತಕ್ಷಣ ಬಿಡುಗಡೆಗೆನಮ್ಮಜನ.ಕಾಂಪ್ರಧಾನಮಂತ್ರಿ ಕೃಷಿ ಸಿಂಚಯಿಬಸವರಾಜ್ ಬೊಮ್ಮಾಯಿಭದ್ರಾಭದ್ರಾ ಮೇಲ್ದಂಡೆ ಯೋಜನೆಮಾಜಿ ಸಿಎಂರಾಷ್ಟೀಯ ಯೋಜನೆಸಂಸದಸಿ.ಆರ್.ಪಾಟೀಲ್
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಪಿಡಿಓ ಎನ್.ಪಾಲಯ್ಯ ಸಸ್ಪೆಂಡ್ ಗೆ ಏಳು ಮುಖ್ಯ ಕಾರಣಗಳು| PDO SASPENDED
Next Article Nurse suicide: ನಿದ್ರೆ ಮಾತ್ರೆ ಸೇವಿಸಿ ಖಾಸಗಿ ಆಸ್ಪತ್ರೆ ನರ್ಸ್ ಸೂಸೈಡ್
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?