Chitradurga news|nammajana.com|18-12-2024
ನಮ್ಮಜನ.ಕಾಂ, ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಮಾರ್ಚ್-2028ರ ಅಂತ್ಯಕ್ಕೆ ಅನುದಾನದ ಲಭ್ಯತೆಗೆ ಅನುಗುಣವಾಗಿ ಪೂರ್ಣಗೊಳಿಸಲು (Bhadra Upper Bank Project) ಉದ್ದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರ ಕೇಳಿದ ಭದ್ರಾ ಮೇಲ್ದಂಡೆ (Bhadra Upper Bank Project) ಯೋಜನೆಯ ಕಾಮಗಾರಿಯ ಪ್ರಗತಿಯ ಕುರಿತು ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಯನ್ನು ಮಧ್ಯ ಕರ್ನಾಟಕದ ಬರಪೀಡಿತ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿನ 2,25,515 ಹೆಕ್ಟೇರ್ (5,57,022 ಎಕರೆ) ಭೂ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಪದ್ಧತಿಯಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಲು ಹಾಗೂ 367 ಕೆರೆಗಳಿಗೆ ಅವುಗಳ ಸಾಮಾಥ್ರ್ಯದ ಶೇ.50ರಷ್ಟು ನೀರನ್ನು ತುಂಬಿಸಲು ಉದ್ದೇಶಿಸಿ ರೂಪಿಸಲಾಗಿದೆ.
ಈ ಯೋಜನೆಗೆ 29.90 ಟಿಎಂಸಿ ನೀರನ್ನು (ಸೂಕ್ಷ್ಮ ನೀರಾವರಿ ಸೌಲಭ್ಯ ಕಲ್ಪಿಸಲು 21.90 ಟಿಎಂಸಿ, ಕೆರೆ ತುಂಬಿಸಲು 6 ಟಿಎಂಸಿ, ವಾಣಿ ವಿಲಾಸ ಸಾಗರಕ್ಕೆ 2 ಟಿಎಂಸಿ) ಹಂಚಿಕೆ ಮಾಡಲಾಗಿದೆ. ಈ ಯೋಜನೆಯ ರೂ.21,473.67 ಕೋಟಿ ಮೊತ್ತದ ಸಮಗ್ರ ಪುನರ್ ಪರಿಷ್ಕøತ ಯೋಜನಾ ವರಿಗೆ (Bhadra Upper Bank Project) 2020ರ ಡಿಸೆಂಬರ್ 16ರಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳಿಗೆ ಅವಶ್ಯವಿರುವ ಜಮೀನಿನ ಭೂಸ್ವಾಧೀನದ ಪ್ರಕ್ರಿಯೆಯನ್ನು ಚುರುಕುಗೊಳಿಸಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮವಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದಿಂದ 2023-24ನೇ ಸಾಲಿನ ಅಯವ್ಯಯದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿಗಳ ಅನುದಾನ ಘೋಷಣೆ ಮಾಡಲಾಗಿರುತ್ತದೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಪ್ರಕ್ರಿಯೆ ವಿಳಂಬವಾಗುತ್ತಿದ್ದು, ಯೋಜನೆಯನ್ನು ಅತೀ ಶೀಘ್ರವಾಗಿ ಪೂರ್ಣಗೊಳಿಸುವ ಉದ್ದೇಶದಿಂದ ರೂ.5,300 ಕೋಟಿಗಳ ಧನ ಸಹಾಯವನ್ನು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ-ವೇಗವರ್ಧಿತ ನೀರಾವರಿ ಪ್ರಯೋಜನ ಕಾರ್ಯಕ್ರಮ ಯೋಜನೆ/ರಾಷ್ಟ್ರೀಯ ಯೋಜನೆಯಡಿ ಅಡಿ ಬಿಡುಗಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆ ನಿರೀಕ್ಷಿಸಲಾಗಿದೆ.
ಭದ್ರ ಮೇಲ್ದಂಡೆ ಯೋಜನೆಗಾಗಿ 2024-25ನೇ ಸಾಲಿನಲ್ಲಿ ರೂ.1430 ಕೋಟಿಗಳ ಅನುದಾನ ಹಂಚಿಕೆಯಾಗಿದ್ದು, 2024ರ ಅಕ್ಟೋಬರ್ ಅಂತ್ಯಕ್ಕೆ ಒಟ್ಟಾರೆ ಸಂಚಿತ (Bhadra Upper Bank Project) ರೂ.10,115.13 ಕೋಟಿಗಳ ಆರ್ಥಿಕ ಪ್ರಗತಿ ಸಾಧಿಸಲಾಗಿದೆ.
ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರಕ್ಕೆ ಶಿಫಾರಸ್ಸು: ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಸಚಿವ ಸಂಪುಟ ಸಭೆಗೆ ಅನುಮೋದನೆಗಾಗಿ ಶಿಫಾರಸ್ಸು ಮಾಡಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯು ತಾಂತ್ರಿಕವಾಗಿ ಹಾಗೂ ಆರ್ಥಿಕವಾಗಿ ಕಾರ್ಯಸಾಧ್ಯತೆಯ ಬಗ್ಗೆ ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಯದ ತಾಂತ್ರಿಕ ಸಲಹಾ ಸಮಿತಿಯು ತೀರುವಳಿ ನೀಡಿರುತ್ತದೆ.
ಕೇಂದ್ರದ ಇನ್‍ವೆಸ್ಟ್‍ಮೆಂಟ್ ಕ್ಲಿಯರೆನ್ಸ್ ಸಮಿತಿಯು ರೂ.16,125.48 ಕೋಟಿಗಳ ಯೋಜನಾ ಮೊತ್ತಕ್ಕೆ ಸ್ಥಿರೀಕರಿಸಿ ಅನುಮೋದನೆ ನೀಡಿದೆ. 2022ರ ಫೆ.15ರ ಕೇಂದ್ರದ ಹೈ ಪವರ್ಡ್ ಸ್ಟ್ರೀಂಗ್ ಕಮಿಟಿಯ 14ನೇ ಸಭೆಯು ಮಾಡಿದ ಶಿಫಾರಸ್ಸಿನಂತೆ ಕೇಂದ್ರ ಹಣಕಾಸು ಸಚಿವಾಲಯದ ಪಬ್ಲಿಕ್ ಇನ್‍ವೆಸ್ಟ್‍ಮೆಂಟ್ ಬೋರ್ಡ್ ಮಂಡಳಿಯು ಪ್ರಸ್ತಾವನೆ ಅಂಗೀಕರಿಸಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಸಚಿವ ಸಂಪುಟ ಸಭೆಗೆ ಅನುಮೋದನೆಗೆ ಶಿಫಾರಸ್ಸು ಮಾಡಿದೆ.
ರಾಣಿ ಕೆರೆಗೆ ವೇದಾವತಿ ನದಿ ನೀರು
ಚಳ್ಳಕೆರೆ ತಾಲ್ಲೂಕಿನ ರಾಣಿಕೆರೆಗೆ ವೇದಾವತಿ ನದಿಯ ನೀರನ್ನು 39 ಕಿ.ಮೀ ನಾಲೆಯ ಮುಖಾಂತರ ಹರಿಸುವ ಯೋಜನೆಯನ್ನು ಕರ್ನಾಟಕ ನೀರಾವರಿ ನಿಗಮದಿಂದ ವಿಶ್ವೇಶ್ವರಯ್ಯ (Bhadra Upper Bank Project) ಜಲನಿಗಮಕ್ಕೆ ಅನುದಾನ ಸಹಿತ ಹಸ್ತಾಂತರಿಸುವ ಪ್ರಸ್ತಾವನೆಯು ಪರಿಶೀಲನೆಯಲ್ಲಿದೆ.
ಇದನ್ನೂ ಓದಿ: ಜಿಲ್ಲಾ ಉಸ್ತುವಾರಿ ಸಚಿವರ ತವರಲ್ಲಿ ವಿದ್ಯಾರ್ಥಿಗಳಿಗೆ ಬಸ್ ಪ್ರಾಬ್ಲಂ | Bus problem
ಚಳ್ಳಕೆರೆ ಮತ್ತು ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರಗಳಿಗೆ ಸೇರಿರುವ 23,888 ಹೆಕ್ಟೇರ್ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ವ್ಯವಸ್ಥೆ ಕಲ್ಪಿಸುವ ಚಿತ್ರದುರ್ಗ ಶಾಖಾ ಕಾಲುವೆ (ಬ್ಲಾಕ್-9) ಮತ್ತು (ಬ್ಲಾಕ್-11) ಕಾಮಗಾರಿಗಳ ಅಂದಾಜು ಪಟ್ಟಿಗಳು (Bhadra Upper Bank Project) ವಿಶ್ವೇಶ್ವರಯ್ಯ ಜಲನಿಗಮದ ಹಂತದಲ್ಲಿ ಪರಿಶೀಲನೆಯಲ್ಲಿದೆ. ಭದ್ರಾ ಮೇಲ್ದಂಡೆ ಯೋಜನೆಯಡಿಯಲ್ಲಿನ ಸೂಕ್ಷ್ಮ ನೀರಾವರಿ ಕಲ್ಪಿಸುವ ಕಾಮಗಾರಿಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252