Chitradurga news|nammajana.com|24-6-2024
ನಮ್ಮಜನ.ಕಾಂ, ಚಿತ್ರದುರ್ಗ: ದೇಶದ ಪ್ರಧಾನಿಯಾಗಿದ್ದ ಇಂದಿರಾಗಾಂಧಿ ತುರ್ತು ಪರಿಸ್ಥಿತಿಯನ್ನು ಹೇರಿ ಇಂದಿಗೆ 49 ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಬಂದ ಬಿಜೆಪಿ ಕಾರ್ಯಕರ್ತರನ್ನು (BJP PROTEST) ಪೊಲೀಸರು ಅಡ್ಡಗಟ್ಟಿ 25 ಮಂದಿಯನ್ನು ಬಂಧಿಸಿ ಗ್ರಾಮಾಂತರ ಠಾಣೆಗೆ ಕರೆದೊಯ್ದು ನಂತರ ಬಿಡುಗಡೆಗೊಳಿಸಿದರು.
ಅಧಿಕಾರವನ್ನು ದುರುಪಯೋಗಪಡಿಸಿಕೊಂಡ ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿ ವಿಪಕ್ಷದವರನ್ನು ಜೈಲಿಗಟ್ಟಿದ್ದರಲ್ಲದೆ ಮಾಧ್ಯಮದವರ ಕತ್ತು ಹಿಸುಕಿ ಡಾ.ಬಿ.ಆರ್.ಅಂಬೇಡ್ಕರ್ ದೇಶಕ್ಕೆ ಕೊಟ್ಟಿರುವ ಸಂವಿಧಾನವನ್ನೇ ಬುಡಮೇಲು ಮಾಡಿದ್ದರು. ಹಾಗಾಗಿ ರಾಹುಲ್‍ಗಾಂಧಿ ದೇಶದ ಜನರ ಕ್ಷಮೆ ಕೇಳುವಂತೆ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿದ ಬಿಜೆಪಿ. ಕಾರ್ಯಕರ್ತರು ಕಾಂಗ್ರೆಸ್ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಬಿಜೆಪಿಯವರು (BJP PROTEST) ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವುದಕ್ಕಿಂತ ಒಂದುವರೆ ಗಂಟೆ ಮುಂಚೆಯೇ ಒನಕೆ ಓಬವ್ವ ವೃತ್ತದ ಸುತ್ತಲೂ ಬ್ಯಾರಿಕೇಡ್‍ಗಳನ್ನು ಅಡ್ಡವಿಟ್ಟ ಪೊಲೀಸರು ಸರ್ಪಗಾವಲಾಗಿ ನಿಂತಿದ್ದರು. ಕೆಲವು ನಿಮಿಷಗಳ ಕಾಲ ಪೊಲೀಸರು ಹಾಗೂ ಬಿಜೆಪಿ. ಕಾರ್ಯಕರ್ತರ ನಡುವೆ ಮಾತಿನ ಜಟಾಪಟಿಯೂ ನಡೆಯಿತು.
ತುರ್ತು ಪರಿಸ್ಥಿತಿ ಹೇರಿದ್ದನ್ನು ನೆನಪಿಸಿಕೊಂಡರೆ ಕರಾಳ ದಿನ ಕಣ್ಣ ಮುಂದೆ ಬಂದಂತಾಗುತ್ತದೆ. ರಾಜ್ಯದಲ್ಲಿ ಅಧಿಕಾರ (BJP PROTEST) ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಂದು ರೀತಿಯಲ್ಲಿ ತುರ್ತು ಪರಿಸ್ಥಿತಿಯನ್ನು ಹೇರುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಹತ್ಯೆ ,ಕೊಲೆ, ಸುಲಿಗೆ ನಿರಂತರವಾಗಿ ನಡೆಯುತ್ತಿದೆ. ಹೈಕೋರ್ಟ್ ತೀರ್ಪಿನ ವಿರುದ್ದ ಇಂದಿರಾಗಾಂಧಿ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿ ಪ್ರಶ್ನಿಸಿದವರನ್ನು ಜೈಲಿಗಟ್ಟುತ್ತಿದ್ದರು. ಅಜ್ಜಿ ಮಾಡಿದ ತಪ್ಪಿಗೆ ಕಾಂಗ್ರೆಸ್ ಯುವ ನಾಯಕ ರಾಹುಲ್‍ಗಾಂಧಿ ಕ್ಷಮೆ ಕೇಳಬೇಕು ಎಂದು ಪ್ರತಿಭಟನಾಕಾರರು ಗರ್ಜಿಸಿದರು.
ತುರ್ತು ಪರಿಸ್ಥಿತಿಯಲ್ಲಿ ಸಂವಿಧಾನಕ್ಕೆ ಅವಮಾನವಾಗಿದೆ. ಪ್ರಜಾಪ್ರಭುತ್ವದ ನಾಲ್ಕನೆ ಅಂಗ ಪತ್ರಿಕಾರಂಗವನ್ನು ಮಟ್ಟ (BJP PROTEST) ಹಾಕಿದ ಇಂದಿರಾಗಾಂಧಿ ನಂತರ ಚುನಾವಣೆಯಲ್ಲಿ ಸೋಲನುಭವಿಸಬೇಕಾಯಿತು. ತುರ್ತು ಪರಿಸ್ಥಿಯಂತ ಕರಾಳ ದಿನ ದೇಶದಲ್ಲಿ ಮತ್ತೆ ಮರುಕಳಿಸಬಾರದು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.
ಇದನ್ನೂ ಓದಿ: Adike Price Drop: ರಾಶಿ ಅಡಿಕೆ ಬೆಲೆ ಇಳಿಕೆ | 24 ಜೂನ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್
ಬಿಜೆಪಿ. ಜಿಲ್ಲಾಧ್ಯಕ್ಷ ಎ.ಮುರಳಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಪ್ರಧಾನ ಕಾರ್ಯದರ್ಶಿಗಳಾದ ಜಿ.ಟಿ.ಸುರೇಶ್‍ಸಿದ್ದಾಪುರ, ಜಿ.ಎಸ್.ಸಂಪತ್‍ಕುಮಾರ್, ಕೆ.ಮಲ್ಲಿಕಾರ್ಜುನ್, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್‍ಬೇದ್ರೆ, ಜಿ.ಹೆಚ್.ಮೋಹನ್, ಗ್ರಾಮಾಂತರ ಮಂಡಲ ಅಧ್ಯಕ್ಷ ಜಿ.ಎಸ್.ಕಲ್ಲೇಶಯ್ಯ, ನಂದಿ ನಾಗರಾಜ್, ತಿಪ್ಪೇಸ್ವಾಮಿ ಓಬವ್ವ, ಚಂದ್ರು, ಪರಶುರಾಮ್, ಕಲ್ಲಂಸೀತಾರಾಮರೆಡ್ಡಿ, ನಗರಸಭೆ ಸದಸ್ಯ ಹರೀಶ್, ಎನ್.ವೀಣ, ಶಾಂತಮ್ಮ, ಅರುಣಕುಮಾರಿ, ಸುಮ, ಕಾಂಚನ, ನಾಗರಾಜ್, ಅಭಿಲಾಷ್, ಕೆ.ಸಿ.ತಿರುಮಲೇಶ, ತಿಪ್ಪೇರುದ್ರಸ್ವಾಮಿ ಹೊಸಹಳ್ಳಿ ಸೇರಿದಂತೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.