Chitradurga news |nammajana.com|21-11-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ 1650 ಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ರದ್ದು ಆಗಿದ್ದರಿಂದ ಸಾಕಷ್ಟು (BPL card) ರೈತರು ಸಂಕಷ್ಟಕ್ಕೆ ಸಿಲುಕಿದ್ದರು ಆದರೆ ಈಗ ಸಿಎಂ ಸಿದ್ದರಾಮಯ್ಯ ಅವರು ಸಿಹಿ ಸುದ್ದಿ ನೀಡಿದ್ದಾರೆ.
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ (BPL card) ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಡುನಿಟ್ಡಿನ ಸೂಚನೆ ನೀಡಿದ್ದಾರೆ.
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ (BPL card) ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ.
ಇದನ್ನೂ ಓದಿ: ನಾಳೆ ವಿದ್ಯುತ್ ವ್ಯತ್ಯಯ | ಬೆಳಗ್ಗೆಯಿಂದ ಸಂಜೆವರೆಗೆ ಎಲ್ಲೆಲ್ಲಿ ಕರೆಂಟ್ ಇರಲ್ಲ | Power Cut
ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ (BPL card) ಜರುಗಿಸುವುದಾಗಿ ಮುಖ್ಯಮಂತ್ರಿಗಳು ಎಚ್ವರಿಕೆ ನೀಡಿದ್ದಾರೆ.