Chitradurga news|nammajana.com|27-11-2024
ನಮ್ಮಜನ.ಕಾಂ, ಚಿತ್ರದುರ್ಗ: ಸಂವಿಧಾನ ದೇಶಕ್ಕೆ ಸಮರ್ಪಣೆಯಾಗಿ 75 ವರ್ಷಗಳಾಗಿರುವುದರಿಂದ ಬೌದ್ದರ ಧಾರ್ಮಿಕ ಹಕ್ಕಿಗಾಗಿ ಬಿಟಿ ಕಾಯಿದೆ-1949 ನ್ನು ರದ್ದುಪಡಿಸಿ ಬುದ್ದಗಯಾದ ಮಹಾಬೋಧಿ ಮಹಾವಿಹಾರದ ಆಡಳಿತ ಸಂಪೂರ್ಣವಾಗಿ ಬೌದ್ದರಿಗೆ ನೀಡುವಂತೆ ಒತ್ತಾಯಿಸಿ ಬೌದ್ದ ಸಂಘ ಸಂಸ್ಥೆಗಳು ಅಂಬೇಡ್ಕರ್ ವಾದಿ ಸಂಘ ಸಂಸ್ಥೆಗಳು ಹಾಗೂ ದಲಿತ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ (Buddhist religion) ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿ, ಪ್ರಧಾನಿ, ರಾಷ್ಟ್ರಪತಿ, ಬಿಹಾರದ ಮುಖ್ಯಮಂತ್ರಿ, ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು.
ಬೌದ್ದ ಸಮುದಾಯ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ಸಂವಿಧಾನದತ್ತ ಧಾರ್ಮಿಕ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಧಾರ್ಮಿಕ ಕ್ಷೇತ್ರವನ್ನು ಸ್ವತಂತ್ರವಾಗಿ ನಿರ್ವಹಿಸುವ ಅಧಿಕಾರವನ್ನು ಸಂವಿಧಾನದ ಕಲಂ-3, 25, 26 ಮತ್ತು 29 ನ್ನು ಜಾರಿಗೊಳಿಸಲು (Buddhist religion) ಅಡ್ಡಿಯಾಗಿರುವ ಬಿ.ಟಿ.ಕಾಯಿದೆ 1949 ನ್ನು ರದ್ದುಪಡಿಸಿ ಬುದ್ದಗಯಾದ ಮಹಾಬೋಧಿ ಮಹಾವಿಹಾರದ ಆಡಳಿತವನ್ನು ಬೌದ್ದರಿಗೆ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇದನ್ನೂ ಓದಿ: ಕೆಲಸ ಮಾಡದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ: ಶಾಸಕ ಟಿ.ರಘುಮೂರ್ತಿ ಸೂಚನೆ | Progress review meeting
ಭಾರತೀಯ ಬೌದ್ದ ಮಹಾಸಭಾ ಜಿಲ್ಲಾಧ್ಯಕ್ಷ ಬಿ.ಪಿ.ತಿಪ್ಪೇಸ್ವಾಮಿ, ಬಿಎಸ್‍ಪಿ ಜಿಲ್ಲಾಧ್ಯಕ್ಷ ಎನ್.ಪ್ರಕಾಶ್, ವಕೀಲ ಬೆನಕನಹಳ್ಳಿ ಚಂದ್ರಪ್ಪ, ಪಾಳ್ಯ ಸಿ.ಕುಮಾರ್, ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕಿಕೆರೆ ಮಂಜುನಾಥ್, ಭೀಮನಕೆರೆ ಶಿವಮೂರ್ತಿ, ದಲಿತ ಮುಖಂಡ ತುರುವನೂರು ಜಗನ್ನಾಥ, ರವಿಕುಮಾರ್ ಎಸ್. ನಾಗೇಂದ್ರಪ್ಪ, (Buddhist religion) ಜೆ.ಎನ್.ಬಸವರಾಜ್ ಜಾಲಿಕಟ್ಟೆ, ಮಂಜುನಾಥ, ಆರ್.ಪಾತಲಿಂಗಪ್ಪ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ: ವಿ ವಿ ಸಾಗರ ಜಲಾಶಯ | 27 ನವೆಂಬರ್ 2024 | ಎಷ್ಟಿದೆ ಇಂದಿನ ನೀರಿನ ಮಟ್ಟ ? | Vani Vilasa Sagara
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252