Chitradurga news | nammajana.com | 21-07-2025
ನಮ್ಮಜನ.ಕಾಂ,ಚಿತ್ರದುರ್ಗ: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ(BVA) ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-2 ಮತ್ತು 3ರಲ್ಲಿ ಉತ್ತೀರ್ಣರಾದ ಹಾಗೂ ದ್ವಿತೀಯ ಪಿಯುಸಿಗೆ ಸಮಾನಾಂತರ ಕೋರ್ಸ್ ಮಾಡಿದ ವಿದ್ಯಾರ್ಥಿಗಳು ಬ್ಯಾಚುಲರ್ ಆಫ್ ವಿಜುಯಲ್ ಆಟ್ರ್ಸ್ (ಬಿ.ವಿ.ಎ) (ನಾಲ್ಕು ವರ್ಷದ ಎಂಟು ಸೆಮಿಸ್ಟರ್ ಎನ್.ಇ.ಪಿ. ಪದ್ದತಿ] ದೃಶ್ಯಕಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ.ವಿ.ಎ ಪದವಿ ಪ್ರವೇಶಾತಿಗಾಗಿ ಬಾಕಿ ಉಳಿದಿರುವ ಸೀಟುಗಳಿಗೆ ಪ್ರವೇಶಾತಿ ಕಲ್ಪಿಸಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನ.
ಇದನ್ನೂ ಓದಿ: Physiotherapist: ಫೀಜಿಯೋಥೆರಪಿಸ್ಟ್ ನೇಮಕಾತಿ : ಅರ್ಜಿ ಆಹ್ವಾನ

ಈ ಪದವಿಯಲ್ಲಿ 3ನೇ ಸೆಮಿಸ್ಟರ್‍ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಚಿತ್ರ ಪತ್ರಿಕೋದ್ಯಮ ವಿಭಾಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರೆ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು.
ಆಸಕ್ತ ಅಭ್ಯರ್ಥಿಗಳು ಕರ್ನಾಟಕ(BVA) ಸರ್ಕಾರದ ಅಂತರ್ಜಾಲ ವಿಳಾಸ htts://uucms.karnataka.gov.in ಅಥವಾ https://www.cavamysore karnataka.gov.in ನಲ್ಲಿ ಹೆಚ್ಚಿನ ಮಾಹಿತಿ ಪಡೆಯಬಹುದು.
ಇದನ್ನೂ ಓದಿ: ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿ | AC ಅವರಿಂದ ವಿದ್ಯಾರ್ಥಿಗಳಿಗೆ ದಾಖಲಾತಿ ಆದೇಶ ವಿತರಣೆ
ಹೆಚ್ಚಿನ ಮಾಹಿತಿಗಾಗಿ ಈ ಕಾರ್ಯಾಲಯದ ಸಹಾಯವಾಣಿಗೆ ಕಛೇರಿ ಸಮಯದಲ್ಲಿ 0821-2438931 ಯನ್ನು ಸಂಪರ್ಕಿಸಬಹುದು ಎಂದು ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252