Chitradurga news|nammajana.com|23-7-2024
ನಮ್ಮಜನ.ಕಾಂ, ಚಿತ್ರದುರ್ಗ: ಬಿಜೆಪಿ ಪಕ್ಷದ ಕೇಂದ್ರ ನಾಯಕರ ಪಾಲಿಗೆ ಕರ್ನಾಟಕ ರಾಜ್ಯವು ಚುನಾವಣೆಯ ಫಲವತ್ತಾದ (Central Government Budget-2024) ಭೂಮಿಯಾಗಿದ್ದು, ಅಭಿವೃದ್ಧಿ ವಿಷಯದಲ್ಲಿ ಶತ್ರು ರಾಷ್ಟ್ರ ದಂತೆ ಕಾಣುತ್ತಿರುವುದಕ್ಕೆ ಈ ಬಾರಿಯ ಬಜೆಟ್ ದೃಢಪಡಿಸಿದೆ ಎಂದು ಮಾಜಿ ಸಂಸದ ನಿ.ಎನ್.ಚಂದ್ರಪ್ಪ ಆರೋಪಿಸಿದ್ದಾರೆ.
ವಿಧಾನಸಭೆ, ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯಕ್ಕೆ ಪದೇ ಪದೆ ಭೇಟಿ ನೀಡಿ ಭರವಸೆಗಳ ಮಹಾಪುರವನ್ನೆ ಹರಿಸುವ ಬಿಜೆಪಿ ನಾಯಕರಿಗೆ ಬಜೆಟ್ ಮಂಡನೆ (Central Government Budget-2024) ಸಂದರ್ಭದಲ್ಲಿ ಕನ್ನಡದ ಜನರೇ ನೆನಪಾಗುವುದಿಲ್ಲ. ಇದೊಂದು ಕರ್ನಾಟಕ ಜನರ ಪಾಲಿಗೆ ಮಹಾ ವಂಚನೆ ಬಜೆಟ್ ಆಗಿದೆ ಎಂದು ಚಂದ್ರಪ್ಪ ದೂರಿದ್ದಾರೆ.

ಚಿತ್ರದುರ್ಗ, ತುಮಕೂರು ಜಿಲ್ಲೆಯ ಜನರ ಮಹತ್ವಾಕಾಂಕ್ಷೆಯ ಭದ್ರಾ ಮೇಲ್ದಂಡೆಗೆ ಈ ಹಿಂದಿನ ಬಜೆಟ್ ನಲ್ಲಿ 5300 ಕೋಟಿ ಘೋಷಿಸಿ, ಇಲ್ಲಲಿಯವರೆಗೂ ಬಿಡುಗಡೆ ಮಾಡಿಲ್ಲ. ರಾಷ್ಟ್ರೀಯ ಯೋಜನೆ ಮನ್ನಣೆ ನೀಡಿಲ್ಲ. ಈ ಬಜೆಟ್ ನಲ್ಲಿ ಕೂಡ (Central Government Budget-2024) ನಿರಾಸೆಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಮದಕರಿನಾಯಕ ಥೀಮ್ ಪಾರ್ಕ್ ಸೇರಿ ಅನೇಕ ಯೋಜನೆಗಳನ್ನು ಘೋಷಿಸಿ, ಜಾರಿಗೊಳಿಸಲಾಗುವುದು. (Central Government Budget-2024) ಚಿತ್ರದುರ್ಗ ಜಿಲ್ಲೆಯನ್ನೇ ಬೃಂದಾವನ ಮಾಡುವುದಾಗಿ ಆಸೆ ಹುಟ್ಟಿಸಿ ಮೋಸಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: Power cut: ನಾಳೆ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಪವರ್ ಕಟ್
ರಾಜ್ಯ ಅದರಲ್ಲೂ ಚಿತ್ರದುರ್ಗ, ತುಮಕೂರು ಜಿಲ್ಲೆಗೆ ತೀವ್ರ ಅನ್ಯಾಯ ಮಾಡಲಾಗಿದೆ. ಆದ್ದರಿಂದ ರಾಜ್ಯ ಬಿಜೆಪಿ ನಾಯಕರಿಗೆ ಸ್ವಾಭಿಮಾನ ಇದ್ದರೆ ಕೂಡಲೇ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು (Central Government Budget-2024) ವಿಸರ್ಜಿಸಿ ಕನ್ನಡ ಜನರಿಗೆ ಗೌರವ ಕೊಡುವ ಮೂಲಕ ಕೇಂದ್ರದ ವಂಚನೆ ವಿರುದ್ಧ ವಿರೋಧ ವ್ಯಕ್ತಪಡಿಸಬೇಕು. ಇಲ್ಲದಿದ್ದರೇ ರಾಜ್ಯ ಬಿಜೆಪಿಗರು ಕೇಂದ್ರ ನಾಯಕರ ಜೀತದಾಳುಗಳು ಎಂದು ಭಾವಿಸಬೇಕಾಗುತ್ತದೆ ಎಂದು ಬಿ.ಎನ್.ಚಂದ್ರಪ್ಪ ಹೇಳಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252