Chitradurga News | Nammajana.com | 13-08-2025
ನಮ್ಮಜನ.ಕಾಂ, ಚಳ್ಳಕೆರೆ: ಗ್ರಾಮೀಣ ಭಾಗದ ಕೂಲಿಕಾರ್ಮಿಕರಿಗೆ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಉದ್ಯೋಗವನ್ನು ಒದಗಿಸಿದ ಅವರ ಬದುಕಿಗೆ ನೆರವಾಗಬೇಕು. ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕಲ್ಲದೆ, ಯಂತ್ರದ ಬಳಕೆಯನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್ ತಿಳಿಸಿದರು.
ಇದನ್ನೂ ಓದಿ: ಧರಣಿ ಸತ್ಯಾಗ್ರಹ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ : ಹಂತ ಹಂತವಾಗಿ ಬೇಡಿಕೆ ಈಡೇರಿಸುವ ಭರವಸೆ

ಅವರು, ತಾಲ್ಲೂಕಿನ ಹಿರೇಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆಯ ನರೇಗಾದಡಿ ಕೈಗೊಂಡ ಚೆಕ್ ಡ್ಯಾಂ ನಿರ್ಮಾಣ, ಕರೆ ಹೂಳೆತ್ತುವುದು, ಗೊಕಟ್ಟೆ ಮುಂತಾದ ಕಾಮಗಾರಿಗಳು ಅನುಷ್ಠಾನದಲ್ಲಿದ್ದು ಅವುಗಳನ್ನು ವೀಕ್ಷಿಸಿ ಕೂಲಿಕಾರ್ಮಿಕರೊಂದಿಗೆ ವಾಸ್ತವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಕೂಲಿಕಾರ್ಮಿಕರು ಸರ್ಕಾರ ನಮಗೆ ಉದ್ಯೋಗ ಒದಗಿಸುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಶಶಿಧರ ಮಾತನಾಡಿ, ಸರ್ಕಾರ ಗ್ರಾಮೀಣ ಭಾಗದ ಕೂಲಿಕಾರ್ಮಿಕರಿಗೆ ಕೂಲಿ ಜೊತೆಗೆ ಕೆಲಸವನ್ನು ನೀಡಿ ಅವರ ಬದುಕಿಗೆ ಸಹಕಾರ ನೀಡುತ್ತಲ್ಲದೆ, ಗ್ರಾಮೀಣ ಭಾಗದ ಕೂಲಿಕಾರ್ಮಿಕರು ವಲಸೆ ಹೋಗುವುದನ್ನು ನಿಯಂತ್ರಿಸಲು ಈ ಯೋಜನೆ ಸಹಕಾರಿಯಾಗಿದೆ. ಸರ್ಕಾರದಿಂದ ಬರುವ ಎಲ್ಲಾ ಕಾಮಗಾರಿಗಳನ್ನು ಕೂಲಿಕಾರ್ಮಿಕರ ಮೂಲಕ ಕೈಗೊಳ್ಳಲಾಗುತ್ತದೆ ಎಂದರು.
ಶಾಲೆಗೆ ಭೇಟಿ ನೀಡಿದ ಸಿಇಒ
ನರೇಗಾ ಕಾಮಗಾರಿ ವೀಕ್ಷಿಸಿದ ಸಿಇಒ ಡಾ.ಎಸ್.ಆಕಾಶ್ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಕ್ಕಳ ಕಲಿಕೆ, ಸೌಲಭ್ಯ, ಬಿಸಿಯೂಟ, ಪೌಷ್ಠಿಕ ಆಹಾರ ನೀಡಿಕೆ ಬಗ್ಗೆ ಮಕ್ಕಳಿಂದ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ಶಿಕ್ಷಕರಿಗೆ ಪ್ರತಿಯೊಬ್ಬ ವಿದ್ಯಾರ್ಥಿಯ ಶೈಕ್ಷಣಿಕ ಪ್ರಗತಿಯ ಬಗ್ಗೆ ಶಿಕ್ಷಕರು ಗಮನಿಸಬೇಕು.
ಇದನ್ನೂ ಓದಿ: ವಾಣಿವಿಲಾಸ ಸಾಗರ ಇಂದಿನ ನೀರಿನ ಮಟ್ಟ
ಇದರಿಂದ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಯ ಶೈಕ್ಷಣಿಕ ಬೆಳವಣಿಗೆ ಆಶಾದಾಯಕವಾಗಿರುತ್ತದೆ ಎಂದರು.
ಗ್ರಾಪಂ ಅಧ್ಯಕ್ಷ ರಾಜಣ್ಣ, ಪಿಡಿಒ ನರಸಿಂಹಪ್ಪ, ಸಿಆರ್‌ಪಿ ಎನ್.ಮಾರಣ್ಣ, ಪಂಚಾಯಿತಿ ಕಾರ್ಯದರ್ಶಿ ಉಪಸ್ಥಿತರಿದ್ದರು.
